ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

By Suvarna News  |  First Published Aug 18, 2021, 8:10 PM IST

*  ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟ
* ಎರಡು ದಿನ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ
* ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ 


ಬೆಂಗಳೂರು. (ಆ.18): ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ದಿನಾಂಕ ಪ್ರಕಟವಾಗಿದೆ. ಸೆಪ್ಟೆಂಬರ್ 27 ಹಾಗೂ 29 ರಂದು ಎರಡು ದಿನ ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ನಡೆಯಲಿದೆ. 

ಸರಳೀಕೃತ ಮಾದರಿಯಲ್ಲಿ ಪೂರಕ ಪರೀಕ್ಷೆ ಇರಲಿದ್ದು, ಒಂದು ದಿನ ಕೋರ್ ವಿಷಯಗಳಿಗೆ ಹಾಗೂ ಮತ್ತೊಂದು ದಿನ ಭಾಷಾ ವಿಷಯಕ್ಕೆ ಪರೀಕ್ಷೆ ನಡೆಯಲಿದೆ. 2020-21ನೇ ಸಾಲಿನಲ್ಲಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡ ಹಾಗೂ ಏಪ್ರಿಲ್ 2019 ರಲ್ಲಿ ಪರೀಕ್ಷೆಗೆ ಪ್ರಥಮ ಬಾರಿಗೆ ನೋಂದಾಯಿಸಿ, ಕೊವಿಡ್ ಸೋಂಕು ಕಾರಣದಿಂದ ಗೈರಾದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದು.

Tap to resize

Latest Videos

1ರಿಂದ 8ನೇ ತರಗತಿ ಪ್ರಾರಂಭದ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಸ್ಪಷ್ಟನೆ

ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳು ಇರಲಿದೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮಿತಗೊಳಸಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಸಪ್ಟೆಂಬರ್ 27 ರಂದು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ, ಇನ್ನು ಸಪ್ಟೆಂಬರ್ 29 ರಂದು ಪ್ರಥಮ, ದ್ವಿತೀಯ, ತೃತೀಯ ಭಾಷೆಗಳ ಪರೀಕ್ಷೆಗಳು ನಡೆಯಲಿವೆ.

click me!