ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ- ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ

By Sathish Kumar KHFirst Published Jun 7, 2023, 6:15 PM IST
Highlights

ರಾಜ್ಯದಲ್ಲಿ ಜೂ.12ರಿಂದ ಆರಂಭವಾಗುವ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ  ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು (ಜೂ.07): ರಾಜ್ಯದಲ್ಲಿ ಜೂ.12ರಿಂದ ಆರಂಭವಾಗುವ 2022-23ನೇ ಸಾಲಿನ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಉಚಿತ ಪ್ರಯಾಣದ ವ್ಯವಸ್ಥೆಯನ್ನು ಮಾಡಲಾಗಿದೆ.

ರಾಜ್ಯಾದ್ಯಂತ ಜೂನ್ 12 ರಿಂದ ಆರಂಭವಾಗಲಿವೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್‌ಗಳಲ್ಲಿ ಉಚಿತ ಪ್ರಯಾಣ ಸೇವೆಯನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳು ಕೋರಿಕೆ ನಿಲುಗಡೆ ಮಾಡುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಿದೆ. ಮುಖ್ಯವಾಗಿ ಪರೀಕ್ಷೆ ನಡೆಯುವ ದಿನಗಳಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗಲು ಉಚಿತವಾಗಿ ಬಸ್‌ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಮುಸ್ಲಿಂ ಹುಡುಗಿ ಜೊತೆಗಿದ್ದ ಹಿಂದೂ ಯುವಕನ ಮೇಲೆ ಹಲ್ಲೆ: ಫ್ರೆಂಡ್ಸ್‌ ಅಂದ್ರೂ ಬಿಡ್ಲಿಲ್ಲ

ಇನ್ನು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುವಾಗ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು (Admission Ticket) ತೋರಿಸಿ, ಸಾರಿಗೆ ಸಂಸ್ಥೆಯ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿವೆ. 
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳನ್ನು ಜೂನ್ 12 ರಿಂದ ಜೂನ್ 19ರ ವರಗೆ ನಡೆಸುತ್ತಿದೆ. ಇದಕ್ಕೆ ಸಕಲ ಸಿದ್ಧತೆಯನ್ನು ಸಹ ಮಾಡಿಕೊಂಡಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು, ತಮ್ಮ ಶಾಲೆಗಳಿಗೆ ತೆರಳಿ ಪ್ರವೇಶ ಪತ್ರವನ್ನು ಪಡೆಯಬಹುದು.

Bengaluru ಕುಡಿದ ಮತ್ತಲ್ಲಿ ಬಾಲಕನ ಮೇಲೆಯೇ ವಾಟರ್ ಟ್ಯಾಂಕರ್‌ ಹರಿಸಿದ ಚಾಲಕ

  • 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ವೇಳಾಪಟ್ಟಿ
  • 12-ಜೂನ್-2023: ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
  • 13-ಜೂನ್-2023: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
  • 14-ಜೂನ್-2023: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
  • 15-ಜೂನ್-2023: ಸಮಾಜ ವಿಜ್ಞಾನ
  • 16-ಜೂನ್-2023: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, NSQF ಪರೀಕ್ಷೆಯ ವಿಷಯಗಳು (ಐಟಿ, ಆಟೋಮೊಬೈಲ್, ಆರೋಗ್ಯ, ಸೌಂದರ್ಯ ಮತ್ತು ಸ್ವಾಸ್ಥ್ಯ)
  • 17-ಜೂನ್-2023: ಗಣಿತ/ಸಮಾಜಶಾಸ್ತ್ರ
  • 19-ಜೂನ್-2023: ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್‌ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ

 

click me!