ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

By Sathish Kumar KH  |  First Published Jul 3, 2024, 9:01 PM IST

2024-25ನೇ ಸಾಲಿಗೆ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ  ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.


ಬೆಂಗಳೂರು (ಜು.03): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗ ಇಲಾಖೆಯಡಿ ಬರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವಸತಿ ನಿಲಯಗಳಿಗೆ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ  ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರ.ವರ್ಗ-1, ಎಸ್.ಸಿ. ಮತ್ತು ಎಸ್.ಟಿ ವರ್ಗದವರಿಗೆ  ರೂ.2.50 ಲಕ್ಷ ., ಪ್ರವರ್ಗ -2ಎ, 2ಬಿ, 3ಎ, 3ಬಿ ಮತ್ತು ಇತರೆ ಹಿಂದುಳಿದ ವರ್ಗ ಹಾಗೂ ಇತರೆ  ರೂ.1.00 ಲಕ್ಷ  ಮಿತಿ ಹೊಂದಿರಬೇಕು.

Tap to resize

Latest Videos

undefined

ಸಿಬಿಎಎಸ್‌ಇ, ಐಸಿಎಸ್‌ಇ ಶಾಲೆಗಳಲ್ಲಿ ಕನ್ನಡ ಭಾಷೆಯ ಸ್ಥಾನ ಮೇಲ್ದರ್ಜೆಗೇರಿಸಿದ ಸರ್ಕಾರ!

ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ http://shp.karnataka.gov.in/bcwd ನಲ್ಲಿ  ಜುಲೈ 20 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ  ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ  ದಾಖಲೆಗಳ ವಿವರಗಳ ಪಡೆಯಲು ಇಲಾಖೆಯ ವೆಬ್ ಸೈಟ್  www.bcwd.karnataka.gov.in  ಇಲ್ಲಿ ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಿ.ವಿ.ಗೋಪುರ, ಡಾ.ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು ನಗರ ಜಿಲ್ಲೆ ಅಥವಾ  ದೂರವಾಣಿ ಸಂಖ್ಯೆ  : 8050770004 ಮತ್ತು 8050770005 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ಹೆಚ್.ಎಂ.ಐ.ಎಸ್ (HMIS) ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿನಿಲಯದ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ವೆಬ್ ಸೈಟ್: www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಹೆಚ್.ಎಂ.ಐ.ಎಸ್ (HMIS)  ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅನಾನುಕೂಲವಾಗುವ ವಿದ್ಯಾರ್ಥಿಗಳು ಅರ್ಜಿಯನ್ನು  Manual ಮುಖೇನ ಸಲ್ಲಿಸಿ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯಬಹುದು. 

ಹೈಸ್ಕೂಲ್ ಹುಡುಗಿ ಗರ್ಭಿಣಿ ಮಾಡಿದ ಯುವಕ, ಕಾಲೇಜಿಗೆ ಹೋಗಿ ಜನ್ಮ ಕೊಟ್ಟ ಬಾಲಕಿ

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1,1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು. ದೂರವಾಣಿ ಸಂಖ್ಯೆ; 080-22240449, 9480843019. ಇಲ್ಲಿಗೆ ಸಂಪರ್ಕಿಸಬಹುದು.

click me!