ಸಿಇಟಿ, ನೀಟ್, ಜೆಇಇ ಅರ್ಜಿ ತುಂಬುವ ಬಗ್ಗೆ ಸರಕಾರದಿಂದ ವಿಶೇಷ ತರಬೇತಿ

By Suvarna News  |  First Published Jan 30, 2022, 11:25 PM IST

ಸಿಇಟಿ, ನೀಟ್, ಜೆಇಇ ಮುಂತಾದ ಉನ್ನತ ಹಂತದ ಪರೀಕ್ಷೆಗಳಿಗೆ ಅರ್ಜಿ ತುಂಬುವಾಗ ಅಭ್ಯರ್ಥಿಗಳು ತಪ್ಪು ಮಾಡುತ್ತಿರುವ ಹಿನ್ನೆಲೆಯಲ್ಲಿ  ಇದಕ್ಕೆ ಸಂಬಂಧಿಸಿದಂತೆ ಪದವಿ ಪೂರ್ವ ಮತ್ತು  ಪದವಿ ಹಂತಗಳಲ್ಲಿ ಆಯಾ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡಲು ಸೂಚಿಸಲಾಗಿದೆ


ಬೆಂಗಳೂರು(ಜ.30): ಸಿಇಟಿ (CET), ನೀಟ್ (NEET), ಜೆಇಇ (JEE) ಮುಂತಾದ ಉನ್ನತ ಹಂತದ ಪರೀಕ್ಷೆಗಳಿಗೆ ಅರ್ಜಿ ತುಂಬುವಾಗ ಅಭ್ಯರ್ಥಿಗಳು ತಪ್ಪು ಮಾಡುತ್ತಿರುವ ಹಿನ್ನೆಲೆಯಲ್ಲಿ  ಇದಕ್ಕೆ ಸಂಬಂಧಿಸಿದಂತೆ ಪದವಿ ಪೂರ್ವ ಮತ್ತು  ಪದವಿ ಹಂತಗಳಲ್ಲಿ ಆಯಾ ಕಾಲೇಜುಗಳಲ್ಲಿಯೇ ವಿಶೇಷ ತರಬೇತಿ ನೀಡಲು ಸರಕಾರದಿಂದ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ (Higher Education Minister Dr CN Ashwath Narayan) ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಹೆಚ್ಚಾಗಿ ಈ ಅರ್ಜಿಗಳಲ್ಲಿ ವಾರ್ಷಿಕ ಆದಾಯ. ಕೆಟಗರಿ , ಹೆಸರು, ಹುಟ್ಟಿದ ದಿನಾಂಕ, ಕೋರ್ಸ್ ಆಯ್ಕೆ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡುವಾಗ ತಪ್ಪು ಮಾಡುತ್ತಿರುವುದು ಕಂಡುಬಂದಿದೆ.  ಇದರಿಂದಾಗಿ ಹೆಚ್ಚಿನ ಅರ್ಜಿಗಳು ತಿರಸ್ಕೃತವಾಗುತ್ತಿದ್ದು, ಉನ್ನತ ಶಿಕ್ಷಣದ ಅವಕಾಶದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಗಮನಿಸಿ ' ಗೆಟ್ ಸೆಟ್ ಗೋ ಮೂಲಕ ಈ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದಿದ್ದಾರೆ.

Tap to resize

Latest Videos

undefined

' ಗೆಟ್ ಸೆಟ್ ಗೋ' (GET SET GO) ಮೂಲಕ ಈ  ಪರೀಕ್ಷೆಗಳಿಗೆ ಹೆಚ್ಚಾಗಿ ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದು,  ಇವರಿಗೆ ಈ ತರಬೇತಿಯ ಪ್ರಯೋಜನವಾಗಲಿದೆ.  ತರಬೇತಿಯ ಜೊತೆಗೆ ಸಾಮಾಜಿಕ ಮಾಧ್ಯಮಗಳು, ವೆಬ್ ಸೈಟ್ ಗಳು ಮತ್ತು ದಿನಪತ್ರಿಕೆಗಳಲ್ಲಿ  ಈ ಅರ್ಜಿ ತುಂಬುವ ಸರಿಯಾದ ವಿಧಾನದ ಬಗ್ಗೆ ವ್ಯಾಪಕವಾಗಿ  ಜಾಹೀರಾತು ಕೊಡುವ ಮೂಲಕ ಅರಿವು ಮೂಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Pariksha Pe Charcha 2022: ವಿದ್ಯಾರ್ಥಿಗಳ ನೋಂದಣಿ ಎರಡನೇ ಬಾರಿಗೆ ವಿಸ್ತರಣೆ

ವೈದ್ಯಕೀಯ ಕೋರ್ಸ್ ಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ, ಕೌನ್ಸಿಲಿಂಗ್ ವೇಳಾಪಟ್ಟಿ ಪ್ರಕಟ: 2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ `ನೀಟ್' (NEET) ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದ್ದು, ಶನಿವಾರ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ' ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರಾಧಿಕಾರವು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, `ಫೆ.4ರಂದು ಈ ಮೂರೂ ಕೋರ್ಸುಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗುವುದು. ಇದಕ್ಕೂ ಮೊದಲು ಫೆ.1ರ ಬೆಳಗ್ಗೆ 10 ಗಂಟೆಯ ವರೆಗೆ ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಫೆ.1ರಿಂದ 3ರ ಬೆಳಗ್ಗೆ 10 ಗಂಟೆಯ ವರೆಗೆ ತಮ್ಮ ಐಚ್ಛಿಕ ವಿಷಯಗಳಲ್ಲಿ ಅಗತ್ಯವೆನಿಸಿದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ' ಎಂದು ಹೇಳಿದೆ.

CISF CONSTABLE RECRUITMENT 2022: 1149 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕರ್ನಾಟಕದಲ್ಲಿ 34 ಹುದ್ದೆಗಳಿಗೆ ಕರೆ

ಫೆ.4 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕಟವಾಗಲಿದೆ. ಬಳಿಕ ಚಾಯ್ಸ್-1 ಮತ್ತು ಚಾಯ್ಸ್-2 ಸ್ತರದ ವಿದ್ಯಾರ್ಥಿಗಳು ನಿಗದಿತ ಶುಲ್ಕ ತುಂಬಿ, ಪ್ರವೇಶ ದಾಖಲಾತಿಯನ್ನು ಡೌನ್-ಲೋಡ್ ಮಾಡಿಕೊಳ್ಳಲು ಫೆ.4ರ ಮಧ್ಯಾಹ್ನ 2 ಗಂಟೆಯಿಂದ ಫೆ.7ರ ಮಧ್ಯಾಹ್ನ 1 ಗಂಟೆಯ ವರೆಗೆ ಅವಕಾಶವಿರುತ್ತದೆ. ನಂತರ, ವಿದ್ಯಾರ್ಥಿಗಳು ಒಂದು ಸೆಟ್ ದೃಢೀಕೃತ ಪ್ರಮಾಣಪತ್ರಗಳೊಂದಿಗೆ ಮೂಲ ದಾಖಲೆಗಳನ್ನು ಫೆ.5ರಿಂದ 7ರ ಒಳಗೆ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪರಿಶೀಲನೆಗೆ ಸಲ್ಲಿಸಬೇಕು ಎಂದು ಪ್ರಕಟಣೆ ವಿವರಿಸಿದೆ.

 

click me!