ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ 3ನ್ನು ನಡೆಸಲು ಅಂತಿಮ ಹಂತದ ಸಿದ್ಧತೆ ಪೂರ್ಣಗೊಳಿಸಿದ್ದು, ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ ಪರೀಕ್ಷೆ ನಡೆಯಲಿದೆ.
ಬೆಂಗಳೂರು (ಜು.31): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ 3ನ್ನು ನಡೆಸಲು ಅಂತಿಮ ಹಂತದ ಸಿದ್ಧತೆ ಪೂರ್ಣಗೊಳಿಸಿದ್ದು, ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ ಪರೀಕ್ಷೆ ನಡೆಯಲಿದೆ. ಇತ್ತೀಚೆಗಷ್ಟೇ ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿಯು ಪರೀಕ್ಷೆ -1 ಹಾಗೂ ಪರೀಕ್ಷೆ ಎರಡು ಮುಗಿಸಿತ್ತು. ಎಸ್‌ಎಸ್‌ಎಲ್‌ಸಿ 3 ಪರೀಕ್ಷೆಗೆ ಒಟ್ಟು 97933 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ.
ರಾಜ್ಯದ 410 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಮರು ಪರೀಕ್ಷೆ ತೆಗೆದುಕೊಂಡಿದ್ದಾರೆ. ಇನ್ನು ಪರೀಕ್ಷಾ ಅಕ್ರಮ ತಡೆಗಟ್ಟಲು ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಜಿಲ್ಲಾ ಮತ್ತು ತಾಲೂಕು ವಿಚಕ್ಷಣ ದಳಗಳು ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸಲಿದ್ದು, ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಲಾಗಿದೆ.
ಆ.2ರಂದು ಪ್ರಥಮ ಭಾಷೆ ವಿಷಯದ ಪರೀಕ್ಷೆಯು ಬೆಳಿಗ್ಗೆ 10.15 ರಿಂದ 1.30ರವರೆಗೆ, ಆ.3 ರಂದು ತೃತೀಯ ಭಾಷೆ ವಿಷಯದ ಪರೀಕ್ಷೆಯು ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ, ಆ.5 ರಂದು ವಿಜ್ಞಾನ ವಿಷಯದ ಪರೀಕ್ಷೆಯು 10.15ರಿಂದ 1.30ರವರೆಗೆ, ಆ.6 ರಂದು ಸಮಾಜ ವಿಜ್ಞಾನ ವಿಷಯ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30, ಆ.7ರಂದು ದ್ವಿತೀಯ ಭಾಷೆ, ಬೆಳಿಗ್ಗೆ 10.15 ರಿಂದ 1.15, ಆ.8ರಂದು ಗಣಿತ ವಿಷಯದ ಪರೀಕ್ಷೆ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ದಲಿತರ ಚರ್ಮದಿಂದ ಚಪ್ಪಲಿ ಮಾಡ್ಕೊಂಡು ಮೆರೆಯುತ್ತಿದ್ದಾರೆ: ಛಲವಾದಿ ನಾರಾಯಣಸ್ವಾಮಿ
ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರದ 200 ಮೀ. ಸುತ್ತಲಿನ ಪ್ರದೇಶವನ್ನು ಕಲಂ 163ರ ಪ್ರಕಾರ ನಿಷೇಧಿತ ಪ್ರದೇಶವೆಂದೂ ಘೊಷಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಸೈಬರ್ ಸೆಂಟರ್, ಕೋಚಿಂಗ್ ಸೆಂಟರ್‌ಗಳು ಪರೀಕ್ಷೆ ಮುಗಿಯುವವರೆಗೂ ತೆರೆಯದಂತೆ ಆದೇಶಿಸಲಾಗಿದೆ.