ಕೆಸಿಇಟಿ ಫಲಿತಾಂಶ ಇಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ. https://cetonline.karnataka.gov.in/kea/ ಫಲಿತಾಂಶ ವೀಕ್ಷಿಸಬಹುದು.
ಬೆಂಗಳೂರು (ಮೇ.20): ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024-2025 ನೇ ಸಾಲಿನ ಇಂಜಿನಿಯರಿಂಗ್ ಹಾಗೂ ಇತರೆ ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ- ಕೆಸಿಇಟಿ ಫಲಿತಾಂಶವನ್ನು ಇಂದು ಅಂದರೆ ಮೇ 20ರಂದು ಬಿಡುಗಡೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://cetonline.karnataka.gov.in/kea/ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದು.
ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ; ಪೋಷಕರ ಪಾಲಿಗೆ ನುಂಗಲಾರದ ತುತ್ತು!
undefined
ಎಂಜಿನಿಯರಿಂಗ್, ಕೃಷಿ ಮತ್ತು ಫಾರ್ಮಸಿ ಕೋರ್ಸ್‌ಗಳಿಗೆ ಕೆಸಿಇಟಿ ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 18 ಮತ್ತು 19 ರಂದು ನಡೆಸಲಾಯಿತು ಮತ್ತು ಕನ್ನಡ ಭಾಷಾ ಪರೀಕ್ಷೆಯನ್ನು ಏಪ್ರಿಲ್ 20, 2024 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಾದ ಬೆಂಗಳೂರು, ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ ಮತ್ತು ಮಂಗಳೂರು ಕೇಂದ್ರಗಳಲ್ಲಿ ನಡೆಸಲಾಯಿತು. ಪೂರ್ವಭಾವಿ ಕೀ ಉತ್ತರಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಲು ಏಪ್ರಿಲ್ 30 ರಿಂದ ಮೇ 7 ರವರೆಗೆ ಅವಕಾಶ ನೀಡಲಾಯ್ತು.