ಇಂದು ಬೆಳಗ್ಗೆ 11.30ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ವಿವರ ಪಡೆಯುವುದು ಹೇಗೆ?

Kannadaprabha News   | Kannada Prabha
Published : May 24, 2025, 05:11 AM IST
JAC 10th Result 2025 Date

ಸಾರಾಂಶ

ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ(ಯುಜಿಸಿಇಟಿ) ಫಲಿತಾಂಶವನ್ನು ಶನಿವಾರ ಬೆಳಗ್ಗೆ 11.30ಕ್ಕೆ ಪ್ರಕಟಿಸಲಿದೆ.

ಬೆಂಗಳೂರು (ಮೇ.24): ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ(ಯುಜಿಸಿಇಟಿ) ಫಲಿತಾಂಶವನ್ನು ಶನಿವಾರ ಬೆಳಗ್ಗೆ 11.30ಕ್ಕೆ ಪ್ರಕಟಿಸಲಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಅವರು ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ಆಯೋಜಿಸಿರುವ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಫಲಿತಾಂಶವನ್ನು https://cetonline.Karnataka.gov.in/ugcetrank2025/checkresult.aspx ಹಾಗೂ https://karresults.nic.in ನಲ್ಲಿ ವೀಕ್ಷಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ಏ.16 ಮತ್ತು 17ರಂದು ನಡೆಸಲಾಗಿದ್ದ ಈ ಬಾರಿಯ ಸಿಇಟಿ ಪರೀಕ್ಷೆಗೆ ಒಟ್ಟು 3.11 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆ ಬಳಿಕ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಪರೀಕ್ಷೆ-2 ಬರೆದಿದ್ದ 71 ಸಾವಿರ ವಿದ್ಯಾರ್ಥಿಗಳಲ್ಲಿ 41 ಸಾವಿರ ಮಂದಿ ಫಲಿತಾಂಶ ಉತ್ತಮಗೊಂಡಿದೆ. ಇದರಲ್ಲಿ ಬಹುತೇಕ ಮಂದಿ ವಿಜ್ಞಾನ ವಿಭಾಗದವರಾಗಿದ್ದು, ಅವರ ಉತ್ತಮಗೊಂಡಿರುವ ಫಲಿತಾಂಶವನ್ನು ಸಿಇಟಿ ರ್‍ಯಾಂಕಿಂಗ್‌ಗೆ ಈಗ ಪರಿಗಣಿಸಬೇಕಿದೆ. ದ್ವಿತೀಯ ಪಿಯುಸಿ ಮತ್ತು ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿ ಪಡೆದಿರುವ ಅಂಕಗಳಲ್ಲಿ ತಲಾ ಶೇ.50ರಷ್ಟು ಅಂಕಗಳನ್ನು ಒಟ್ಟುಗೂಡಿಸಿ ರ್‍ಯಾಂಕಿಂಗ್‌ ನೀಡಲಾಗುತ್ತದೆ. ಉತ್ತಮಗೊಂಡಿರುವ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಯಾಟ್ಸ್‌ ತಂತ್ರಾಂಶದಲ್ಲಿ ಅಪ್‌ಡೇಟ್‌ ಮಾಡಬೇಕಿದೆ.

ಒಟ್ಟಾರೆ ಈ ಎಲ್ಲಾ ಪ್ರಕ್ರಿಯೆಗಳು ಮುಗಿದು ಈ ವಾರಾಂತ್ಯದೊಳಗೆ ಫಲಿತಾಂಶ ಪ್ರಕಟಿಸುವ ಪ್ರಯತ್ನದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ತೊಡಗಿದ್ದಾರೆ. ಏ.16 ಮತ್ತು 17ರಂದು ಈ ಬಾರಿಯ ಸಿಇಟಿ ಪರೀಕ್ಷೆಗಳನ್ನು ರಾಜ್ಯದ 775 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 3.11 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.15ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗಿತ್ತು. 1,958 ಅಭ್ಯರ್ಥಿಗಳು ಹಾಜರಾಗಿದ್ದರು.

PREV
Read more Articles on
click me!

Recommended Stories

ನಗರ ವಿವಿ ಎಡವಟ್ಟು: 400 ಎಂಕಾಂ ಸ್ಟೂಡೆಂಟ್ಸ್ ಫೇಲ್‌!
ಸರ್ಕಾರಿ ಶಾಲೆಗಳ ಆಘಾತಕಾರಿ ಬೆಳವಣಿಗೆ, ಮಕ್ಕಳ ದಾಖಲಾತಿ 17 ಲಕ್ಷ ಕುಸಿತ ನಿಜವೆಂದು ಒಪ್ಪಿಕೊಂಡ ಸರ್ಕಾರ!