ಯುಜಿಸಿಇಟಿ ಅರ್ಜಿ ಸಲ್ಲಿಕೆ ಫೆ.24ರವರೆಗೆ ವಿಸ್ತರಣೆ, ಕೆಇಎ ಸ್ಪಷ್ಟನೆ

Published : Feb 15, 2025, 06:10 PM ISTUpdated : Feb 15, 2025, 06:21 PM IST
ಯುಜಿಸಿಇಟಿ ಅರ್ಜಿ ಸಲ್ಲಿಕೆ ಫೆ.24ರವರೆಗೆ ವಿಸ್ತರಣೆ, ಕೆಇಎ ಸ್ಪಷ್ಟನೆ

ಸಾರಾಂಶ

ಯುಜಿಸಿಇಟಿ ಅರ್ಜಿ ಸಲ್ಲಿಕೆ ದಿನಾಂಕ ಫೆಬ್ರವರಿ ೨೪ಕ್ಕೆ ವಿಸ್ತರಣೆಯಾಗಿದೆ. ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರೆ ವೃತ್ತಿಪರ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಲು ಕೆಇಎ ಅವಕಾಶ ಕಲ್ಪಿಸಿದೆ. ಶುಲ್ಕ ಪಾವತಿಗೆ ಫೆಬ್ರವರಿ 25 ಕೊನೆಯ ದಿನ. ಕೆಇಎ ನಿರ್ದೇಶಕ ಹೆಚ್. ಪ್ರಸನ್ನ ಈ ಮಾಹಿತಿ ನೀಡಿದ್ದಾರೆ.

ಬೆಂಗಳೂರು (ಫೆ.15): ಪ್ರಸಕ್ತ ಸಾಲಿನ ಯುಜಿಸಿಇಟಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆಯಾಗಿದೆ. ಎಂಜಿನಿಯರಿಂಗ್‌, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ಫೆ.24ರವರೆಗೆ ವಿಸ್ತರಿಸಿ  ಕೆಇಎ ಘೋಷಿಸಿದೆ. ಈ ಹಿಂದೆ ಫೆ.18ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದ ಕೆಇಎ. ಆದರೆ ದಿನಾಂಕ ವಿಸ್ತರಣೆಗೆ ಅನೇಕರು ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ಕೆಇಎ ಅರ್ಜಿ ದಿನಾಂಕ ವಿಸ್ತರಿಸಿ ಶುಲ್ಕ ಕಟ್ಟಲು ಫೆ.25ರವರೆಗೆ ಅವಕಾಶ  ನೀಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ದೇಶಕ ಹೆಚ್ ಪ್ರಸನ್ನ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕರಾಮುವಿಯಲ್ಲಿ 2024-25ರ ಶೈಕ್ಷಣಿಕ ಪ್ರವೇಶಾತಿ ಆರಂಭ; ಆನ್‌ಲೈನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ

ಪಿಂಚನೆ ಪಾವತಿಸಲು ಸೂಚಿಸಿದ್ದ ಆದೇಶ ರದ್ದು:
ಕೇಂದ್ರದ ಆರನೇ ವೇತನ ಆಯೋಗ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ವೇತನ ಪರಿಷ್ಕರಣೆಗೆ ಅನುಗುಣವಾಗಿ ನಿವೃತ್ತ ಪ್ರಾಧ್ಯಾಪಕರ ವೇತನವನ್ನು ಪರಿಷ್ಕರಿಸಿ ಅವರಿಗೆ 4 ತಿಂಗಳಲ್ಲಿ ಪಿಂಚಣಿ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ವಿಭಾಗೀಯ ನ್ಯಾಯಪೀಠ ರದ್ದುಪಡಿಸಿದೆ.

ಯುಜಿಸಿ ನಿಯಮಾವಳಿ ವಾಪಸ್‌ ಪಡೆಯಿರಿ: ಸಿಎಂ ಸಿದ್ದರಾಮಯ್ಯ ಆಗ್ರಹ

ಏಕಸದಸ್ಯ ನ್ಯಾಯಪೀಠದ ಆದೇಶದ ರದ್ದತಿಗೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್‌ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ರಾಜ್ಯ ಸರ್ಕಾರದ ಪರ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎಸ್‌.ಎ.ಅಹಮದ್‌ ವಾದ ಮಂಡಿಸಿ, ಮೈಸೂರಿನ ನಿವೃತ್ತ ಪ್ರಾಧ್ಯಾಪಕ ಕೆ.ಗೋಪಾಲ್‌ ಸೇರಿದಂತೆ 18ಕ್ಕೂ ಹೆಚ್ಚು ನಿವೃತ್ತ ಪ್ರಾಧ್ಯಾಪಕರು ಹೈಕೋರ್ಟ್‌ಗೆ ತಕರಾರು ಅರ್ಜಿಸಿದ್ದರು. ಆ ಅರ್ಜಿ ಪುರಸ್ಕರಿಸಿದ್ದ ಏಕ ಸದಸ್ಯ ಪೀಠ, ನಿವೃತ್ತ ಪ್ರಾಧ್ಯಾಪಕರ ನಿವೃತ್ತ ವೇತನವನ್ನು ಪರಿಷ್ಕರಿಸಿ, 4 ತಿಂಗಳಲ್ಲಿ ಪರಿಷ್ಕೃತ ಪಿಂಚಣಿ ಪಾವತಿಸುವಂತೆ ಸರ್ಕಾರಕ್ಕೆ 2019ರ ಮಾ.23ರಂದು ಆದೇಶಿಸಿದೆ. ಒಂದೊಮ್ಮೆ ಏಕ ಸದಸ್ಯ ಪೀಠದ ಆದೇಶವನ್ನು ಪಾಲಿಸಲು ಮುಂದಾದರೆ ರಾಜ್ಯದ ಬೊಕ್ಕಸಕ್ಕೆ ₹477 ಕೋಟಿ ಹೆಚ್ಚಿನ ಹೊರೆಯಾಗುತ್ತದೆ. ಆದ್ದರಿಂದ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.

PREV
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ