ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್

By Suvarna News  |  First Published Jul 13, 2021, 2:50 PM IST

* ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್
* ಪರೀಕ್ಷೆ ಬರೆಯುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
* ಈ ಬಗ್ಗೆ ಸುತ್ತೋಲೆ ಹೊರಡಿಸಿದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ


ಬೆಂಗಳೂರು, (ಜುಲೈ.13): ಕೊರೋನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಉಚಿತವಾಗಿ ಬಸ್‌ನಲ್ಲಿ ಸಂಚರಿಸಲು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಅವಕಾಶ ನೀಡಿದೆ.

Tap to resize

Latest Videos

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಮಹತ್ವದ ಸೂಚನೆ ಕೊಟ್ಟ ಹೈಕೋರ್ಟ್

ಪರೀಕ್ಷೆಯ ದಿನಗಳಂದು ಅಂದರೆ ಜುಲೈ 19 ಹಾಗೂ ಜುಲೈ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವುದಾಗಿ ತಿಳಿಸಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. 

ರಾಜ್ಯಾದ್ಯಂತ ಎಲ್ಲಾ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಸಾಮಾನ್ಯ ಹಾಗೂ ವೇಗಧೂತ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಾಸು ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೋನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದು ಕೆಎಸ್‌ಆರ್‌ಟಿಸಿ ಸುತ್ತೋಲೆಯಲ್ಲಿ ತಿಳಿಸಿದೆ.

pic.twitter.com/xVPMTm46EA

— KSRTC (@KSRTC_Journeys)
click me!