ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಬಸ್​ನಲ್ಲಿ ಉಚಿತ ಪ್ರಯಾಣ, ಕಂಡಿಷನ್ ಅಪ್ಲೈ

By Suvarna News  |  First Published Sep 1, 2020, 8:28 PM IST

ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ  ಉಚಿತ ಪ್ರಯಾಣದ ಸಿಹಿ ಸುದ್ದಿ ನೀಡಿದೆ. ಆದ್ರೆ, ಇದು ಯಾರಿಗೆ ಅನ್ವಯ ಗೊತ್ತಾ?


ಬೆಂಗಳೂರು, (ಸೆ.01) : ವೃತ್ತಿಪರ, ಪದವಿ, ಸ್ನಾತಕೋತ್ತರ ಪರೀಕ್ಷೆ ಬರೆಯುವವರಿಗೆ ಕಳೆದ ಶೈಕ್ಷಣಿಕ ಸಾಲಿನ ಬಸ್​ ಪಾಸ್​ ತೋರಿಸಿ ಉಚಿತ ಪ್ರಯಾಣಕ್ಕೆ ಕೆಎಸ್​ಆರ್​ಟಿಸಿ ಅವಕಾಶ ಕಲ್ಪಿಸಿದೆ.

ಸೆಪ್ಟೆಂಬರ್​ನಲ್ಲಿ ರಾಜ್ಯದ ಕಾನೂನು ವಿಶ್ವವಿದ್ಯಾಲಯ, ತಾಂತ್ರಿಕ ವಿಶ್ವವಿದ್ಯಾಲಯ, ವೃತ್ತಿಪರ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಸಾರಿಗೆ ನಿಗಮಗಳಿಂದ ಬಸ್​ ಪಾಸ್​ ವಿತರಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸೆಪ್ಟೆಂಬರ್​ ತಿಂಗಳಲ್ಲಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ನಗರ ಸಾರಿಗೆಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವಂತೆ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್​ ಮನವಿ ಮಾಡಿದ್ದರು.

Tap to resize

Latest Videos

ಈ ಮನವಿಗೆ ಸ್ಪಂದಿಸಿರುವ ಉಪಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಕಳೆದ ವರ್ಷದ ಬಸ್​ ಪಾಸ್​ ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಎಲ್ಲಾ ಹಿರಿಯ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ಹೊರಡಿಸಲಾಗಿದೆ.

ಕೊರೋನಾ ಸಂಕಷ್ಟದ ಸಮಯದಲ್ಲೂ ಕೆಲ ಪರೀಕ್ಷೆಗಳು ನಡೆಯುತ್ತಿವೆ. ಕಳೆದ ಶೈಕ್ಷಣಿಕ ವರ್ಷ ಮುಗಿದಿದ್ದು, ವಿದ್ಯಾರ್ಥಿಗಳ ಬಸ್​ಪಾಸ್​ ಅವಧಿ ಮುಗಿದಿದೆ. ಇದೀಗ ಪರೀಕ್ಷೆ ಆರಂಭವಾದರೆ ಮತ್ತೆ ಬಸ್​ಪಾಸ್​ ಮಾಡಿಸಿಕೊಳ್ಳಬೇಕೆ? ಅಥವಾ ಹಣ ಕೊಟ್ಟು ನಿತ್ಯ ಟಿಕೆಟ್​ ಪಡೆದು ಕಾಲೇಜಿಗೆ ಹೋಗಬೇಕೇ? ಎಂಬ ಗೊಂದಲ ಬಹುತೇಕ ವಿದ್ಯಾರ್ಥಿಗಳಲ್ಲಿತ್ತು.

click me!