PUC ವಿದ್ಯಾರ್ಥಿಗಳಿಗೆ KSRTC ಬಂಪರ್ ಆಫರ್

By Kannadaprabha News  |  First Published Aug 18, 2021, 12:36 PM IST
  •  ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್
  • ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿ ಬಂಪರ್ ಆಫರ್‌ 

ಬೆಂಗಳೂರು (ಆ.18):  ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್.  ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿ ಬಂಪರ್ ಆಫರ್‌ ಒಂದನ್ನು ನೀಡಿದೆ.  

ಆ.19 ರಿಂದ ಸೆಪ್ಟೆಂಬರ್ 3 ರವರೆಗೆ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಉಚಿತವಾಗಿ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. 

Tap to resize

Latest Videos

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ಸಾರಿಗೆ ಸಚಿವ ಶ್ರೀರಾಮುಲು

ವಿದ್ಯಾರ್ಥಿಗಳ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು‌ ಉಚಿತವಾಗಿ ಕೆಎಸ್ಆರ್ಟಿಸಿ  ಅವಕಾಶ ನೀಡಿದೆ. 

ದ್ವಿತೀಯ ಪಿಯು ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ಸಂಚರಿಸಲು ಅನುವು ಮಾಡಿಕೊಟ್ಟಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆ ಹೊರಡಿಸಿದೆ. 

ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿ ಫಲಿತಾಂಶ ಪ್ರಟಿಸಲಾಗಿತ್ತು. ಅದರೆ 800 ಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶವನ್ನು  ತಿರಸ್ಕರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದರು. ಇವರಿಗೆಲ್ಲಾ ನಾಳೆಯಿಂದ ಪರೀಕ್ಷೆ ನಡೆಸಲಾಗುತ್ತಿದೆ.  

click me!