ಪ್ರತಿಷ್ಠಿತ ಕುವೆಂಪು ವಿಶ್ವವಿದ್ಯಾಲಯದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿರುವುದರಿಂದ ವಿಶ್ವವಿದ್ಯಾಲಯವನ್ನು ಒಂದು ವಾರಗಳ ಕಾಲ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. 19 ವಿದ್ಯಾರ್ಥಿಗಳಿಗೆ ಕೂಡ ಕೊರೊನಾ ಪಾಸಿಟಿವ್ ಬಂದಿದೆ.
ಶಿವಮೊಗ್ಗ: ರಾಜ್ಯಾದ್ಯಂತ ಕೊರೊನಾ (corona) ಅಬ್ಬರ ಜೋರಾಗಿದ್ದು, ಶಾಲೆ-ಕಾಲೇಜುಗಳನ್ನು ಜಿಲ್ಲೆಗನುಗುಣವಾಗಿ ಒದೊಂದಾಗಿ ಬಂದ್ ಮಾಡಲಾಗುತ್ತಿದೆ. ಇದಕ್ಕೆ ಶಿವಮೊಗ್ಗ (Shivamogga) ಜಿಲ್ಲೆ ಕೂಡ ಹೊರತಾಗಿಲ್ಲ. ಇಲ್ಲಿನ ಪ್ರತಿಷ್ಠಿತ ಕುವೆಂಪು ವಿಶ್ವವಿದ್ಯಾಲಯದ (Kuvempu University) ಐವರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ (Corona Positive) ವರದಿ ಬಂದಿರುವುದರಿಂದ ವಿಶ್ವವಿದ್ಯಾಲಯವನ್ನು ಒಂದು ವಾರಗಳ ಕಾಲ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ಐವರು ಸಿಬ್ಬಂದಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 70 ಮಂದಿಯ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಈ ಪೈಕಿ 19 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಎಲ್ಲರೂ ಹೋಮ್ ಕ್ವಾರಂಟೈನ್'ಗೆ ಒಳಗಾಗಿದ್ದಾರೆ .
ಸೋಂಕು ವ್ಯಾಪಕವಾಗಿ ಹರಡದಂತೆ ಮುಂಜಾಗೃತಾ ಕ್ರಮವಾಗಿ ಕುವೆಂಪು ವಿವಿ ಜ್ಞಾನ ಸಹ್ಯಾದ್ರಿ ಕ್ಯಾಂಪಸ್'ನಲ್ಲಿ ತರಗತಿಗಳನ್ನು ನಡೆಸದಿರಲು ನಿರ್ಧಾರ ಮಾಡಲಾಗಿದ್ದು, ಸುತ್ತೋಲೆ ಹೊರಡಿಸಿರುವ ಶೈಕ್ಷಣಿಕ ವಿಭಾಗದ ಉಪ ಕುಲಸಚಿವರು ಜನವರಿ 17 ರಿಂದ 21 ರವರೆಗೆ ಸ್ನಾತಕೋತ್ತರ ತರಗತಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಒಂದು ವಾರ ತರಗತಿಗಳಿಗೆ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಉಪನ್ಯಾಸಕರು ಆನ್ ಲೈನ್ ಮೂಲಕ ತರಗತಿ ನಡೆಸಲು ಸೂಚನೆ ಹೊರಡಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಒಂದುವಾರ ಆನ್‌ಲೈನ್ ಪಾಠ ಕೇಳಬೇಕಿದೆ.
ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಹಿನ್ನೆಲೆ ಕುವೆಂಪು ವಿವಿ ಕ್ಯಾಂಪಸ್ ಅನ್ನು ಸ್ಯಾನಿಟೈಸ್ ಮಾಡಲಾಗಿದೆ. ಆಡಳಿತ ಭವನ , ತರಗತಿಗಳು , ಹಾಸ್ಟೆಲ್ ಸೇರಿದಂತೆ ಎಲ್ಲಾ ಕಡೆ ಕೂಡ ಸ್ಯಾನಿಟೈಸ್ ಮಾಡಲಾಗಿದೆ.
Covid Crisis: ಮತ್ತೆ 745 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆ..!
ಬಳ್ಳಾರಿಯಲ್ಲಿ ಶಾಲೆಗಳು ಕಾಲೇಜುಗಳು ಬಂದ್, ರಾತ್ರಿ 8 ರಿಂದಲೇ ನೈಟ್ ಕರ್ಫ್ಯೂ: ಗಡಿನಾಡು ಬಳ್ಳಾರಿ (ballari) ಜಿಲ್ಲೆಗೂ ಕೊರೊನಾ ಕಂಟಕವಾಗಿ ಪರಿಣಮಿಸಿದೆ. ಹೀಗಾಗಿ ಬಳ್ಳಾರಿಯಲ್ಲಿ ರಾತ್ರಿ 8 ರಿಂದ ಮುಂಜಾನೆ 6 ರ ವರೆಗೂ ನೈಟ್ ಕರ್ಫ್ಯೂ (Night curfew) ಜಾರಿ ಮಾಡಿ ಆದೇಶ ಹೊರಡಿಲಾಗಿದೆ. ಶಾಲೆ, ಜಿಮ್, ವಿವಿಧ ಪ್ರಾರ್ಥನಾ ಮಂದಿರ, ದೇವಾಲಯ, ಚಿತ್ರಮಂದಿರ , ಈಜುಕೊಳ, ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಡಾ. ಜನಾರ್ದನ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಬಳ್ಳಾರಿಯಲ್ಲಿ ಕಳೆದ ಡಿಸೆಂಬರ್ 31ಕ್ಕೆ ಶೇ0.14ರಷ್ಟಿದ್ದ ಕೊರೊನಾ ಸೋಂಕಿನ ಪ್ರಮಾಣ ಜನವರಿ 14ಕ್ಕೆ ಶೇ.10ಕ್ಕೆ ಏರಿಕೆಯಾಗಿದೆ. ಇದರಲ್ಲಿ ಬಳ್ಳಾರಿ ನಗರ ಮತ್ತು ಬಳ್ಳಾರಿ ತಾಲೂಕಿನಲ್ಲಿ ಪಾಸಿಟಿವ್ ರೇಟ್ ಶೇ.13ರನ್ನು ದಾಟಿ ಗಂಭೀರ ರೀತಿಯಲ್ಲಿ ಹೆಚ್ಚಳವಾಗುತ್ತಿದೆ.
ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮತ್ತು ಕಾಲೇಜುಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬಳ್ಳಾರಿ ಜಿಲ್ಲಾಡಳಿತ ಭವನದ 13 ಸಿಬ್ಬಂದಿಗೆ ಸೋಂಕು ಪತ್ತೆಯಾಗಿದೆಂದು ಜಿಲ್ಲಾಡಳಿತದಿಂದಲೇ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತದ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಇದರ ಬೆನ್ನಲ್ಲೇ ಬಳ್ಳಾರಿ ಜಿಲ್ಲಾಧಿಕಾರಿ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.
IIT KANPUR NEW DEPARTMENTS: ಹೊಸದಾಗಿ ಬಾಹ್ಯಾಕಾಶ ಮತ್ತು ಖಗೋಳ ವಿಜ್ಞಾನ ವಿಭಾಗ ಸ್ಥಾಪಿಸಿದ ಐಐಟಿ ಕಾನ್ಪುರ
ಬಳ್ಳಾರಿಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಪಾಸಿಟಿವ್ ರೇಟ್ ಗಣನೀಯ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದು, ಜನರ ಓಡಾಟವನ್ನು ನಿಯಂತ್ರಿಸಲು ರಾತ್ರಿ 8 ರಿಂದ ಮುಂಜಾನೆ 6 ರ ವರೆಗೂ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಮೂಲಕ ರಾಜ್ಯ ಸರಕಾರ ಬಿಡುಗಡೆ ಮಾಡಿರುವ ನೈಟ್ ಕರ್ಫ್ಯೂನಲ್ಲಿ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಹೀಗಾಗಿ ಬಳ್ಳಾರಿಯಲ್ಲಿ ಜನವರಿ 31ರವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.