ಶಿಕ್ಷಣಕ್ಕೆ ಆದ್ಯತೆಗಾಗಿ ಆ. 24ಕ್ಕೆ ಎಡಪಕ್ಷಗಳಿಂದ ಪ್ರತಿಭಟನೆ

By Suvarna NewsFirst Published Aug 21, 2022, 9:29 PM IST
Highlights

ಸಾರ್ವಜನಿಕ ಶಿಕ್ಷಣಕ್ಕೆ ಆದ್ಯತೆ, ಕೋಮುವಾದಿ ಶಕ್ತಿ ನಿಗ್ರಹ ಹಾಗೂ ಕೋಮು ದ್ವೇಷಕ್ಕೆ ತುತ್ತಾದವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಎಡ ಹಾಗೂ ಜಾತ್ಯಾತೀತ ಪ್ರಜಾಸತ್ತಾತ್ಮಕ ಪಕ್ಷಗಳ ಸಹಯೋಗದಲ್ಲಿ ಆ. 24ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ.

ಬೆಂಗಳೂರು (ಆ.21): ಸಾರ್ವಜನಿಕ ಶಿಕ್ಷಣಕ್ಕೆ ಆದ್ಯತೆ, ಕೋಮುವಾದಿ ಶಕ್ತಿ ನಿಗ್ರಹ ಹಾಗೂ ಕೋಮು ದ್ವೇಷಕ್ಕೆ ತುತ್ತಾದವರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಎಡ ಹಾಗೂ ಜಾತ್ಯಾತೀತ ಪ್ರಜಾಸತ್ತಾತ್ಮಕ ಪಕ್ಷಗಳ ಸಹಯೋಗದಲ್ಲಿ ಆ. 24ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಪಿಎಂ ಕಾರ್ಯದರ್ಶಿ ಯು.ಬಸವರಾಜ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದ ಸೇರಿದಂತೆ ರಾಜ್ಯದ ವಿವಿಧ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಪ್ರತಿಭಟನೆ ನಡೆಯಲಿದೆ. ಕೇಂದ್ರ ಸರ್ಕಾರ ರೈತರ ಪ್ರತಿಭಟನೆಗೆ ಮಣಿದು ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆದಿದ್ದರೂ, ರಾಜ್ಯದಲ್ಲಿ ಭೂ ಸುಧಾರಣೆ, ಎಪಿಎಂಸಿ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವ ಮೂಲಕ ಕೃಷಿ ರಂಗ ಮತ್ತು ಹೈನೋದ್ಯಮ, ಮಾಂಸೋದ್ಯಮ, ಚರ್ಮೋದ್ಯಮಗಳನ್ನು ಕಾರ್ಪೋರೇಟ್‌ ಕಂಪನಿಗಳ ಲೂಟಿಗೆ ತೆರೆದಿಟ್ಟಿದೆ ಎಂದು ಆರೋಪಿಸಿದರು. ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌, ಔಷಧಿ, ಆಹಾರ ಧಾನ್ಯಗಳು ಸೇರಿದಂತೆ ಇತರೆ ದಿನ ಬಳಕೆ ವಸ್ತುಗಳ ಬೆಲೆಗಳು ಗಗನೇಕ್ಕೇರಿದೆ. ದಲಿತ ಮಹಿಳೆಯರು, ಶೂದ್ರ ಹಾಗೂ ಹಿಂದುಳಿದ ವರ್ಗದ ಸಮುದಾಯದ ಬಡವರನ್ನು ಶಿಕ್ಷಣದಿಂದ ದೂರವಿಡಲು ಹುನ್ನಾರ ನಡೆಸುತ್ತಿದೆ. ಶಿಕ್ಷಣವನ್ನು ಕೋಮುವಾದಿಕರಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದೆ ಎಂದು ಅವರು ಆರೋಪಿಸಿದರು. ಎಐಎಸ್‌ಎಫ್‌ ಕಾರ್ಯದರ್ಶಿ ಜಿ.ಆರ್‌.ಶಿವಶಂಕರ್‌, ಸ್ವರಾಜ್‌ ಇಂಡಿಯಾದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ, ಆರ್‌ಪಿಐ ಅಧ್ಯಕ್ಷ ಆರ್‌.ಮೋಹನ್‌ ಉಪಸ್ಥಿತರಿದ್ದರು.

ತುಮಕೂರು ವಿವಿ ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ: ಪದವಿ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿರುವ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ತಾಲೂಕು ಘಟಕದ ವತಿಯಿಂದ ನಗರದ ಹಾಸನ ಸರ್ಕಲ್‌ನಿಂದ ಸಿಂಗ್ರಿನಂಜಪ್ಪ ಸರ್ಕಲ್‌ವರೆಗೆ ಪ್ರತಿಭಟನೆ ನಡೆಸಿ ಗ್ರೇಡ್‌-2 ತಹಸೀಲ್ದಾರ್‌ ಜಗನ್ನಾಥ್‌ಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಲಾಯಿತು.

ದೇಣಿಗೆಯಿಂದಲೇ ವಿಜ್ಞಾನ ಪ್ರಯೋಗಾಲಯ ನಿರ್ಮಾಣ!

ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಕೆ.ಎನ್‌.ಹೇಮಂತ್‌ ಮಾತನಾಡಿ, ತುಮಕೂರು ವಿಶ್ವ ವಿದ್ಯಾಲಯದ ಅಡಿಯಲ್ಲಿ 94ಕ್ಕಿಂತ ಅಧಿಕ ಕಾಲೇಜುಗಳು, 29 ಸಂಶೋಧನಾ ಕೇಂದ್ರಗಳಿದ್ದು, ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಹಿಂದಿನ ವರ್ಷದ ಪರೀಕ್ಷಾ ಶುಲ್ಕಕ್ಕಿಂತ ಹೆಚ್ಚುವರಿಯಾಗಿ ಒಂದು ಸಾವಿರ ರು. ಪಾವತಿಸುವಂತೆ ಸೂಚಿಸಿರುವುದು ಅವೈಜ್ಞಾನಿಕ ಹಾಗೂ ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ. ಒಂದು ಕಡೆ ಸರ್ಕಾರವು ಶಿಕ್ಷಣ ಖಾಸಗೀಕರಣಕ್ಕೆ ಪೋ›ತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಅಭಿವೃದ್ಧಿಗೆ ಅವಶ್ಯಕತೆಗೆ ಅನುಗುಣವಾಗಿ ಅನುದಾನ ನೀಡುತ್ತಿಲ್ಲ.

ನಿಯಮಾನುಸಾರವೇ ಬಿಡಿಎಸ್‌ ಪರೀಕ್ಷೆ: ವಿವಿ ಪರೀಕ್ಷಾಂಗ ಕುಲಸಚಿವ ಸ್ಪಷ್ಟನೆ

ಇದರಿಂದಾಗಿ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಈ ಬಗ್ಗೆ ವಿವಿಗಳು ಸರ್ಕಾರಕ್ಕೆ ಮನವರಿಕೆ ಮಾಡುವ ಬದಲು ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಹೆಚ್ಚಿಸಿ ಪ್ರತಿ ವಿದ್ಯಾರ್ಥಿಯಿಂದ ಒಂದು ಸಾವಿರ ರು. ವಸೂಲಿ ಮಾಡುತ್ತಿವೆ. ಆದ್ದರಿಂದ ವಿಶ್ವವಿದ್ಯಾಲಯವು ಹಗಲು ದರೋಡೆಯನ್ನು ನಿಲ್ಲಿಸಿ ಈ ಹಿಂದಿರುವ ಪರೀಕ್ಷಾ ಶುಲ್ಕವನ್ನು ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಾಂತರಾಜು, ನಗರಾಧ್ಯಕ್ಷ ಪ್ರಕಾಶ್‌ ಸೇರಿದಂತೆ ಎನ್‌ಎಸ್‌ಯುಐ ಕಾರ್ಯಕರ್ತರು, ಪದವಿ ಕಾಲೇಜುಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.

click me!