ವಿದ್ಯಾರ್ಥಿಗಳು ತಮ್ಮ ಕಾಲೇಜು ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಭೋಪಾಲ್ (ಜು.29): ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಕಾಲೇಜು ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ವೈರಲ್ ವೀಡಿಯೊವನ್ನು ಜಿಲ್ಲೆಯ ಲಹಾರ್ ಸರ್ಕಾರಿ ಕಾಲೇಜಿನಲ್ಲಿ ರೆಕಾರ್ಡ್ ಮಾಡಲಾಗಿದೆ ಎಂದು ವರದಿಯಾಗಿದೆ. ಜಿವಾಜಿ ವಿಶ್ವವಿದ್ಯಾಲಯದ ಬಿಎ ಮತ್ತು ಬಿಎಸ್‌ಸಿ ಕೋರ್ಸ್‌ಗಳ ಪರೀಕ್ಷೆಗಳು ತಡವಾಗಿ ನಡೆಯುತ್ತಿವೆ. ವೈರಲ್ ವಿಡಿಯೋದಲ್ಲಿ, ವಿದ್ಯಾರ್ಥಿಗಳು ತಮ್ಮೊಂದಿಗೆ ಪುಸ್ತಕಗಳು, ಚೀಟಿಗಳು ಮತ್ತು ಮೊಬೈಲ್ ಫೋನ್‌ಗಳನ್ನು ಇಟ್ಟುಕೊಂಡು ನಕಲು ಮಾಡುತ್ತಿರುವುದು ಕಂಡುಬಂದಿದೆ. ಪರೀಕ್ಷಾ ಸಭಾಂಗಣದಲ್ಲಿ ಶಿಕ್ಷಕರ ಸಮ್ಮುಖದಲ್ಲೇ ಈ ನಕಲು ಮಾಡುವ ಕೃತ್ಯ ನಡೆತ್ತಿರುವುದು ದಾಖಲಾಗಿದೆ. ಕಾಲೇಜಿನ ಪ್ರಾಂಶುಪಾಲ ಕಮಲೇಶ್ ಮಾತನಾಡಿ, ಸದ್ಯಕ್ಕೆ ನಾನು ಹೊರಗಿದ್ದೇನೆ, ಈ ವಿಡಿಯೋ ಬಗ್ಗೆ ಮಾಹಿತಿ ಸಿಕ್ಕಿದೆ. ಈ ವಿಷಯವನ್ನು ತನಿಖೆ ಮಾಡುತ್ತೇನೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ. ಮತ್ತೊಂದೆಡೆ, ಜಿವಾಜಿ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಸುಶೀಲ್ ಮಂಡೇಲಿಯಾ ಅವರು ಈ ವಿಷಯದ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅದೇನೇ ಇದ್ದರೂ, ವಂಚನೆಯ ವಿಡಿಯೋ ವೈರಲ್ ಆಗಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಇಂತಹ ಘಟನೆಗಳು ವರದಿಯಾಗಿದ್ದವು.
: Students are spotted copying in their college exam by keeping reference books and mobile phones along with them in district. Video pic.twitter.com/KU0CJVFKnW
— Siraj Noorani (@sirajnoorani)
ಶೀಘ್ರ ಅಬ್ದುಲ್ ಕಲಾಂ ವಸತಿ ಶಾಲೆ ಕಟ್ಟಡ ಲೋಕಾರ್ಪಣೆ: ಅಲ್ಪ ಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಉತ್ತಮ ವಸತಿಯುತ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಕಟ್ಟಡವನ್ನು ಶೀಘ್ರ ಲೋಕಾರ್ಪಣೆಗೊಳಿಸಲಾಗುವುದು ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಗೃಹ ಮಂಡಳಿ ವತಿಯಿಂದ ಮಂಗಳವಾರ ನವನಗರ ಯೂನಿಟ್ 1ರಲ್ಲಿ ಹಮ್ಮಿಕೊಳ್ಳಾಗಿದೆ. ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಎಲ್ಲ ಸಮುದಾಯದ ವಿದ್ಯಾರ್ಥಿಗಳು ಉತ್ತಮ ವಾತಾವರಣದಲ್ಲಿ ಶಿಕ್ಷಣ ಪಡೆಯಬೇಕು ಎಂಬುದು ಸರ್ಕಾರದ ಆಶಯ. ಈ ಹಿನ್ನಲೆಯಲ್ಲಿ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕೂಡ ಅತ್ಯುತ್ತಮ ವಸತಿಯುತ ಶಿಕ್ಷಣ ಪಡೆಯಬೇಕೆಂಬ ಸದುದ್ದೇಶದಿಂದ ನಗರದಲ್ಲಿ ಅಬ್ದುಲ್ ಕಲಾಂ ವಸತಿ ಶಾಲೆ ನಿರ್ಮಿಸಲಾಗುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ ಈ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದಡಿ ಬಾಗಲಕೋಟೆ ನವನಗರ ಯೂನಿಟ್ 1ರ 7 ಎಕರೆ 3 ಗುಂಟೆ ಜಾಗೆಯಲ್ಲಿ . 7.5 ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿ ನಿರ್ಮಾಣ ಮಾಡುತ್ತಿರುವ ಈ ವಸತಿ ಶಾಲೆಯ ಕಟ್ಟಡವು ನೆಲಮಮಹಡಿ ಹಾಗೂ ಒಂದು ಮೆಲ್ಮಹಡಿ ಒಳಗೊಂಡಿರುತ್ತದೆ. ಇದರಲ್ಲಿಯ ಒಂದು ಬ್ಲಾಕ್‌ನ್ನು ಅಡುಗೆ ಹಾಗೂ ವಸತಿ ಕೋಣೆಗಳಿಗೆ ಮೀಸಲಿಟ್ಟರೆ ಇನ್ನೊಂದನ್ನು ಶೈಕ್ಷಣಿಕ ಚಟುವಟಿಕೆಗಳ ಭಾಗವನ್ನಾಗಿ ಮಾಡಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯ ಆನಂದ ದೊಡ್ಡೂರ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಸದಸ್ಯರಾದ ಯಲ್ಲಪ್ಪಾ ನಾರಾಯಣ, ನಾಗರತ್ನಾ ಹೆಬ್ಬಳ್ಳಿ ಸೇರಿದಂತೆ ಇತರರು ಇದ್ದರು.