* 12ನೇ ತರಗತಿ ಪರೀಕ್ಷೆ ರದ್ದುಗೊಳಿದ ಸರ್ಕಾರ
* ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಘೋಷಣೆ
* ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ 12ನೇ ತರಗತಿ ಪರೀಕ್ಷೆ ರದ್ದು
ಭೋಪಾಲ್, (ಜೂನ್.02): ದೇಶದಲ್ಲಿ ಕೊರೋನಾ ಎರಡನೇ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ, CBSE 12ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದೆ.
ಇದರ ಬೆನ್ನಲೇ ಇದೀಗ ಮಧ್ಯಪ್ರದೇಶ ಮಂಡಳಿಯ 12ನೇ ತರಗತಿ ಪರೀಕ್ಷೆಯನ್ನ ರದ್ದುಪಡಿಸಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆದೇಶಿಸಿದ್ದಾರೆ.
CBSE 12ನೇ ಕ್ಲಾಸ್ ಪರೀಕ್ಷೆ ರದ್ದು ಬೆನ್ನಲ್ಲೇ ಪಿಯುಸಿ ಎಕ್ಸಾಂ ಬಗ್ಗೆ ಪ್ರತಿಕ್ರಿಯಿಸಿದ ಸಚಿವ
ಹೆಚ್ಚಿನ ವಿದ್ಯಾರ್ಥಿಗಳು ಮತ್ತು ಪೋಷಕರು 12ನೇ ತರಗತಿ ಪರೀಕ್ಷೆಗಳನ್ನ ನಡೆಸಬೇಕೆಂದು ಬಯಸುತ್ತಿದ್ದಾರೆ ಎಂದು ಮಧ್ಯಪ್ರದೇಶ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಹೇಳಿದ್ದರು. ಆದ್ರೆ, ಇದೀಗ ಮಧ್ಯಪ್ರದೇಶ 12ನೇ ತರಗತಿ ಪರೀಕ್ಷೆಯನ್ನ ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.
ಇನ್ನು ಕರ್ನಾಟಕದ ದ್ವಿತೀಯಾ ಪಿಯುಸಿ ಪರೀಕ್ಷೆಯನ್ನು ನಡೆಸಬೇಕೋ? ಬೇಡವೋ ಎನ್ನುವ ಬಗ್ಗೆ ತಜ್ಞರ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.