Tamil Nadu ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5 ವೈದ್ಯಕೀಯ ಕೋಟಾ: ಮದ್ರಾಸ್ ಹೈಕೋರ್ಟ್

Published : Apr 07, 2022, 03:04 PM IST
Tamil Nadu ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ  ಶೇ.7.5 ವೈದ್ಯಕೀಯ ಕೋಟಾ: ಮದ್ರಾಸ್ ಹೈಕೋರ್ಟ್

ಸಾರಾಂಶ

ತಮಿಳುನಾಡಿನಲ್ಲಿ ಪದವಿಪೂರ್ವ ಕೋರ್ಸ್‌ಗಳಿಗೆ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇಕಡಾ 7.5 ಕೋಟಾವನ್ನು ಮೀಸಲಿರಿಸುವ  ಸರ್ಕಾರದ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. 

ಚೆನ್ನೈ (ಎ.7): ತಮಿಳುನಾಡು (Tamil Nadu) ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ವೈದ್ಯಕೀಯ ಕೋಟಾ ಮೀಸಲಿರಿಸುವ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ (Madras High Court ) ಎತ್ತಿ ಹಿಡಿದಿದೆ. ತಮಿಳುನಾಡಿನಲ್ಲಿ ಪದವಿಪೂರ್ವ ಕೋರ್ಸ್‌ಗಳಿಗೆ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇಕಡಾ 7.5 ಕೋಟಾವನ್ನು ಮೀಸಲಿರಿಸುವ (reservation ) ಸರ್ಕಾರದ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ. 

ಸರ್ಕಾರ ಘೋಷಣೆ ಮಾಡಿದ್ದ ಮೀಸಲಾತಿಯನ್ನು ಪ್ರಶ್ನಿಸಿ ಖಾಸಗಿ ಶಾಲಾ ವಿದ್ಯಾರ್ಥಿಗಳು ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳು ತಮಗೂ ಇದೇ ರೀತಿಯ ಸೌಲಭ್ಯಗಳನ್ನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಮುನೀಶ್ವರ್ ನಾಥ್ ಭಂಡಾರಿ (Chief Justice Munishwar Nath Bhandari ) ಮತ್ತು ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ ( Justice D Bharatha Chakravarthy) ನೇತೃತ್ವದ ಮೊದಲ ಪೀಠ ಈ ತೀರ್ಪು ಪ್ರಕಟಿಸಿತು.

ವೈದ್ಯಕೀಯ ಕೋರ್ಸ್ ಪ್ರವೇಶದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯಲಾಗಿದೆ ಎಂದು ಪೀಠವು ಆದೇಶದಲ್ಲಿ ತಿಳಿಸಿದೆ. ಅಲ್ಲದೆ ಐದು ವರ್ಷಗಳಲ್ಲಿ ಮೀಸಲಾತಿ ಕೋಟಾವನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.  ಅಲ್ಲದೆ ಮೀಸಲಾತಿಯನ್ನು ಪ್ರಶ್ನಿಸಿ ಮತ್ತು ಅದೇ ರೀತಿಯ ಪ್ರಯೋಜನಗಳನ್ನು ಕೋರಿ ಸಲ್ಲಿಸಲಾದ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.

ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಈ ಆದೇಶವು ದೂರಗಾಮಿ ಪರಿಣಾಮಗಳನ್ನು ಹೊಂದಿದ್ದು, ದ್ರಾವಿಡ ಚಳವಳಿಯನ್ನು ಎತ್ತಿ ಹಿಡಿದ ಮುಖ್ಯ ವೇದಿಕೆಯಾದ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ಡಿಎಂಕೆ ಸರ್ಕಾರದ ಬದ್ಧತೆಗೆ ದೊಡ್ಡ ಉತ್ತೇಜನ ಎಂದು ಪರಿಗಣಿಸಲಾಗಿದೆ. ವಾಸ್ತವವಾಗಿ, ಈ ಮೀಸಲಾತಿಯನ್ನು ಹಿಂದಿನ ಎಐಎಡಿಎಂಕೆ ಸರ್ಕಾರವು ಪರಿಚಯಿಸಿತ್ತು. ಆದರೆ ಕಾನೂನಾಗಿ ಪರಿವರ್ತಿಸುವಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಿ ನಿಭಾಯಿಸುವಲ್ಲಿ ಎಡವಿತ್ತು. 

ಪ್ರಸ್ತುತ ಸರ್ಕಾರವು ಈಗ ಅವುಗಳನ್ನು ನಿವಾರಿಸಿದ್ದು, ಸರ್ಕಾರವು ಕಪಿಲ್ ಸಿಬಲ್, ಪಿ ವಿಲ್ಸನ್ ಮತ್ತು ತಮಿಳುನಾಡು ಅಡ್ವೊಕೇಟ್ ಜನರಲ್ ಆರ್ ಶುಣ್ಮುಗಸುಂದರಂ ಸೇರಿದಂತೆ ಹಿರಿಯ ವಕೀಲರನ್ನು ಕಣಕ್ಕಿಳಿಸಿ ಮೀಸಲಾತಿಯನ್ನು ಸಮರ್ಥಿಸಲು ಶತ ಪ್ರಯತ್ನ ಮಾಡಿತ್ತು.

ಸರ್ಕಾರವು ಬಡ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಹಲವಾರು ವಿದ್ಯಾರ್ಥಿಗಳಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ದಾಖಲಾಗಲು ಸಹಾಯ ಮಾಡಿತು ಎಂದು ಹಿರಿಯ ವಕೀಲ ಮತ್ತು ಡಿಎಂಕೆ ರಾಜ್ಯಸಭಾ ಸದಸ್ಯ ಪಿ ವಿಲ್ಸನ್ ಅವರು ತೀರ್ಪನ್ನು ದೊಡ್ಡ ಗೆಲುವು ಎಂದು ಬಣ್ಣಿಸಿದ್ದಾರೆ.

ಮುಸ್ಲಿಮರು‌ ಕೆತ್ತನೆ ಮಾಡಿದ ವಿಗ್ರಹ ಪ್ರತಿಷ್ಠಾಪಿಸದಂತೆ Mandya ದಲ್ಲಿ ಅಭಿಯಾನ

ತಮಿಳುನಾಡಿನಲ್ಲಿ ವನ್ನಿಯಾರ್‌ ಸಮುದಾಯಕ್ಕೆ ಶೇ.10.5 ರಷ್ಟು ಮೀಸಲಾತಿ ತಳ್ಳಿಹಾಕಿದ ಸುಪ್ರೀಂ: ಇನ್ನು ಕಳೆದ ಮಾರ್ಚ್ 31 ರಂದು ತಮಿಳು ನಾಡಿನ ಅತ್ಯಂತ ಹಿಂದುಳಿದ ಸಮುದಾಯ (MBC) ವನ್ನಿಯಾರ್ ಗೆ ಸರ್ಕಾರಿ ಉದ್ಯೋಗಗಳನ್ನು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಶೇಕಡಾ 10.5ರಷ್ಟು ಮೀಸಲಾತಿ ನೀಡಿಕೆಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವೇ ಮತ್ತು ಬಿ ಆರ್ ಗವೈ ನೇತೃತ್ವದ ನ್ಯಾಯಪೀಠ ಮದ್ರಾಸ್ ಹೈಕೋರ್ಟ್ ನ ಆದೇಶವನ್ನು ಎತ್ತಿಹಿಡಿದಿದೆ. ಮದ್ರಾಸ್ ಹೈಕೋರ್ಟ್ ಮೀಸಲಾತಿಯನ್ನು ತಳ್ಳಿಹಾಕಿತ್ತು.

ವನ್ನಿಯಾಕುಲ ಕ್ಷತ್ರಿಯರನ್ನು ಒಂದೇ ಗುಂಪಿಗೆ ವರ್ಗೀಕರಿಸಲು ಯಾವುದೇ ನಿಖರ ಆಧಾರವಿಲ್ಲ. MBC ಗುಂಪುಗಳೊಳಗಿನ ಉಳಿದ 115 ಸಮುದಾಯಗಳಿಗಿಂತ ವಿಭಿನ್ನವಾಗಿ ಪರಿಗಣಿಸಬೇಕು. 2021 ಕಾಯಿದೆಯು ಸಂವಿಧಾನದ 14, 15 ಮತ್ತು 16 ನೇ ವಿಧಿಗಳ ಉಲ್ಲಂಘನೆಯಾಗಿದೆ. ಹೀಗಾಗಿ ನಾವು ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿಯುತ್ತೇವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ವಿವರಿಸಿದೆ.

ತಮಿಳುನಾಡು ವಿಧಾನಸಭೆ ಕಳೆದ ವರ್ಷ ಫೆಬ್ರವರಿಯಲ್ಲಿ ಆಗಿನ ಆಡಳಿತಾರೂಢ ಎಐಎಡಿಎಂಕೆ ವನ್ನಿಯಾರ್‌ಗಳಿಗೆ ಶೇಕಡಾ 10.5ರಷ್ಟು ಆಂತರಿಕ ಮೀಸಲಾತಿಯನ್ನು ಒದಗಿಸುವ ಪ್ರಮುಖ ಮಸೂದೆಯನ್ನು ಅಂಗೀಕರಿಸಿತ್ತು, ಅದರ ಅನುಷ್ಠಾನಕ್ಕಾಗಿ ಕಳೆದ ಜುಲೈಯಲ್ಲಿ ಈಗ ಅಧಿಕಾರದಲ್ಲಿರುವ ಡಿಎಂಕೆ ಸರ್ಕಾರವು ಆದೇಶವನ್ನು ಹೊರಡಿಸಿತು.

​​​​​​

PREV
Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ