ಮಂಗಳೂರು ವಿಶ್ವವಿದ್ಯಾಲದ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆ

By Suvarna News  |  First Published Aug 3, 2021, 10:00 PM IST

* ಮಂಗಳೂರಿಗೆ ಕೇರಳ ಕೊರೋನಾ ಭೀತಿ
* ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ ಪರೀಕ್ಷೆ ಮುಂದೂಡಿಕೆ
* ಆ. 2ರಿಂದ ಮಂಗಳೂರು ವಿವಿಯ ಪದವಿ ಪರೀಕ್ಷೆಗಳು ಆರಂಭವಾಗಿದ್ದವು


ಮಂಗಳೂರು, (ಅ.03): ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪದವಿ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಲಾಗಿದೆ. 

ಪಕ್ಕದ ಕೇರಳ ರಾಜ್ಯದಲ್ಲಿ ದಿನೇ- ದಿನೇ  ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ‌.ರಾಜೇಂದ್ರ ಸೂಚನೆ ಮೇರೆಗೆ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Latest Videos

undefined

ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕ ತಡೆ

ಮುಂದಿನ ಅದೇಶದವರೆಗೆ ಪರೀಕ್ಷೆ ರದ್ದುಗೊಳಿಸಿ ತರಗತಿಗಳನ್ನೂ ಮುಂದೂಡಲು ಆದೇಶ ಹೊರಡಿಸಲಾಗಿದೆ. ನಿನ್ನೆಯಿಂದ (ಆ. 2) ಮಂಗಳೂರು ವಿವಿಯ ಪದವಿ ಪರೀಕ್ಷೆಗಳು ಆರಂಭವಾಗಿದ್ದವು.

ಈ ಮುನ್ನ ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿತ್ತು. ಅಲ್ಲದೇ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು, ಎರಡನೇ ಡೋಸ್ ಆದರೂ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ತಿಳಿಸಲಾಗಿತ್ತು.

 ವಿವಿಗಳು ಕೂಡ ಈ ನಿಯಮಕ್ಕೆ ಬದ್ಧವಾಗಿದ್ದು, ನೆಗೆಟಿವ್ ರಿಪೋರ್ಟ್ ಇಲ್ಲದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಹೇಳಲಾಗಿತ್ತು. , ಒಂದು ದಿನದಲ್ಲಿ ಹೇಗೆ ಈ ಕೊರೋನಾ ರಿಪೋರ್ಟ್ ತರುವುದು ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಕೊನೆಗೆ ಪರೀಕ್ಷೆಗಳನ್ನೇ ಮುಂದೂಡಲಾಗಿದೆ.

click me!