ಸಿಇಟಿ ಹಾಗೂ ನೀಟ್ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೆ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಸೀಟುಗಳನ್ನು ಏಕಕಾಲದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಕೆಇಎ ಮಾಹಿತಿ ನೀಡಿದೆ.
ಬೆಂಗಳೂರು (ಜು.25): ರಾಜ್ಯದಲ್ಲಿ ಸಿಇಟಿ ಹಾಗೂ ನೀಟ್ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೆ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಸೀಟುಗಳನ್ನು ಏಕಕಾಲದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತವಾಗಿ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೆಇಎ ತಿಳಿಸಿದೆ.
ರಾಷ್ಟ್ರಮಟ್ಟದಲ್ಲಿ ನೀಟ್ ಪರೀಕ್ಷೆ ಬರೆದು ಮೆಡಿಕಲ್ ಸೀಟಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಕೆಲವೆಡೆ ಪರೀಕ್ಷಾ ಅಕ್ರಮದಿಂದ ಉಂಟಾದ ಗೊಂದಲಗಳಿಂದ ಆತಂಕ ಸೃಷ್ಟಿಯಾಗಿದೆ. ನೀಟ್ ಫಲಿತಾಂಶದ ನಂತರ ಮೆಡಿಕಲ್ ಸೀಟು ಸಿಗುವ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಸೀಟು ಹಂಚಿಕೆ ಪ್ರಕ್ರಿಯೆಗೆ ಎದುರು ನೋಡುತ್ತಿದ್ದಾರೆ. ಆದರೆ, ಮೆಡಿಕಲ್ ಸೀಟು ಹಂಚಿಕೆಗೂ ಮುನ್ನವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂಜಿನಿಯರಿಂಗ್ ಹಾಗೂ ಪಶು ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆ ಮಾಡುತ್ತದೆಯೋ ಎಂಬ ಆತಂಕ ಎದುರಿಸುತ್ತಿದ್ದಾರೆ. ಒಂದು ವೇಳೆ ಮೆಡಿಕಲ್ ಸೀಟಿಗಾಗಿ ರ್ಯಾಂಕ್ ಪಡೆದಿದ್ದರೂ, ಎಂಜಿನಿಯರಿಂಗ್ ಸೀಟು ಆಯ್ದುಕೊಳ್ಳದಿದ್ದರೆ ಒಂದು ವರ್ಷದ ಭವಿಷ್ಯವೇ ಹಾಳಾಗಿ ಹೋಗಲಿದೆ ಎಂಬ ಆತಂಕದಲ್ಲಿದ್ದಾರೆ.
undefined
ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ನೀಡುವ ನೀಟ್ ಯುಜಿ ಪರೀಕ್ಷೆಯ ಪರಿಷ್ಕೃತ ಅಂಕಪಟ್ಟಿ ಬಿಡುಗಡೆ
ಇನ್ನು ಸಿಇಟಿ, ನೀಟ್ ಪರೀಕ್ಷೆ ಬರೆದು ರ್ಯಾಂಕಿಂಗ್ ಅನುಸಾರ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗೆ ಸೇರುವ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಭಯವನ್ನು ನೀಡಿದೆ. ಏಕ ಕಾಲದಲ್ಲಿಯೇ ಮೆಡಿಕಲ್, ಇಂಜಿನಿಯರಿಂಗ್ ಸೀಟು ಹಂಚಿಕೆ ಮಾಡುವುದಾಗಿ ತಿಳಿಸಿದೆ. ಇನ್ನು ಮೊದಲ ಸುತ್ತಿನ ಸೀಟು ಹಂಚಿಕೆಗೆ ಆದ್ಯತೆಗಳನ್ನು ದಾಖಲಿಸಲು ಎಂಜಿನಿಯರಿಂಗ್, ಪಶುವೈದ್ಯಕೀಯ ಇತ್ಯಾದಿ ಕೋರ್ಸ್ ಗಳಿಗೆ ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದೆ.
ನೀಟ್ ರದ್ದು ಮಾಡಿ ತನ್ನದೇ ಪರೀಕ್ಷೆಗೆ ಮುಂದಾದ ಕರ್ನಾಟಕ, ಮರು ಪರೀಕ್ಷೆಗೆ ಸುಪ್ರೀಂ ನಿರಾಕರಣೆ
ರಾಷ್ಟ್ರೀಯ ವೈದ್ಯಕೀಯ ಆಯೋಗ ನೀಟ್ ಪರೀಕ್ಷೆಯ (NEET Exam result) ಫಲಿತಾಂಶದ ಪಟ್ಟಿಯನ್ನು ಕೆಇಎಗೆ ಹಸ್ತಾಂತರಿಸಿದ ನಂತರ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಆದ್ಯತೆ ತಿಳಿಸಲಾಗುತ್ತದೆ. ಆದರೆ, ನೀಟ್‌ನಿಂದ ಮಾಹಿತಿ ತಡವಾಗುತ್ತಿರುವ ಕಾರಣ ಎಂಜಿನಿಯರಿಂಗ್ ಸೇರಿದಂತೆ ಇತರ ಕೋರ್ಸ್ ಗಳ ಪ್ರವೇಶ ಸಂಬಂಧ ಆದ್ಯತೆಗಳನ್ನು ದಾಖಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅವಶ್ಯಕತೆ ಇಲ್ಲ. ಅಭ್ಯರ್ಥಿಗಳು ಪ್ರತಿನಿತ್ಯ ಕನಿಷ್ಠ ಎರಡು ಬಾರಿ ಕೆಇಎ ವೆಬ್ ಸೈಟ್ ಗೆ ಭೇಟಿ ಕೊಡಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕ ಪ್ರಸನ್ನ ಮಾಹಿತಿ ನೀಡಿದ್ದಾರೆ.