ಸಿದ್ದಗಂಗಾ ಮಠಕ್ಕೆ‌ ಮೆಡಿಕಲ್‌ ಕಾಲೇಜು ಮಂಜೂರು : ಈ ಶೈಕ್ಷಣಿಕ ವರ್ಷದಿಂದಲ್ಲೇ ವೈದ್ಯಕೀಯ ತರಗತಿಗಳು ಪ್ರಾರಂಭ

Published : Aug 26, 2022, 10:57 AM IST
ಸಿದ್ದಗಂಗಾ ಮಠಕ್ಕೆ‌ ಮೆಡಿಕಲ್‌ ಕಾಲೇಜು ಮಂಜೂರು : ಈ ಶೈಕ್ಷಣಿಕ ವರ್ಷದಿಂದಲ್ಲೇ ವೈದ್ಯಕೀಯ ತರಗತಿಗಳು ಪ್ರಾರಂಭ

ಸಾರಾಂಶ

ನಾಡಿನ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ತುಮಕೂರಿನ ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (National Medical Commission)ವು ' ಸಿದ್ದಗಂಗಾ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆಗೆ ಮೊದಲ ವರ್ಷದ ಎಂಬಿಬಿಎಸ್(MBBS) ತರಗತಿಗಳನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಅನುಮತಿ ನೀಡಿದೆ.

ವರದಿ : ಮಹಂತೇಶ ಕುಮಾರ್, ಏಷ್ಯನೆಟ್ ಸುವರ್ಣ ನ್ಯೂಸ್ ತುಮಕೂರು

ತುಮಕೂರು (ಆ.26): ನಾಡಿನ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ತುಮಕೂರಿನ ಸಿದ್ದಗಂಗಾ ಮಠಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ(National Medical Commission)ವು ' ಸಿದ್ದಗಂಗಾ ವೈದ್ಯಕೀಯ ಮತ್ತು ಸಂಶೋಧನಾ ಸಂಸ್ಥೆ(Siddaganga Medical and Research Institute)ಗೆ ಮೊದಲ ವರ್ಷದ ಎಂಬಿಬಿಎಸ್(MBBS) ತರಗತಿಗಳನ್ನು ಈ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಅನುಮತಿ ನೀಡಿದೆ . ತುಮಕೂರಿ(Tumakur)ನ ಸಿದ್ದಗಂಗಾಮಠ ಮೆಡಿಕಲ್ ಕಾಲೇಜು(Sidddaganga Medical Collage) ಪ್ರಾರಂಭಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ಮತ್ತು ಮೂಲಭೂತ ಸೌಕರ್ಯಗಳ ಪರಿಶೀಲನೆ ನಡೆಸಿದ ನಂತರ ಎನ್.ಎಂ.ಸಿ ( ರಾಷ್ಟ್ರೀಯ ವೈದ್ಯಕೀಯ ಆಯೋಗ ) ಪ್ರಥಮ ಬ್ಯಾಚ್‌ನಲ್ಲಿ 150 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿ ಸಿದ್ದಗಂಗಾ ಮಠದ ಆಡಳಿತ ಮಂಡಳಿಗೆ ಪತ್ರ ಬರೆದಿದೆ . 

ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಪ್ರವೇಶ ಶುರು: ಮಠದ ಶಾಲೆ ದಾಖಲಾತಿಗೆ ವಿದ್ಯಾರ್ಥಿಗಳ ಸರತಿ

ವೈದ್ಯಕೀಯ ಕಾಲೇಜು ಹೊಂದುವ ಮೂಲಕ ಸಿದ್ದಗಂಗಾ ಮಠ ಸಹ ಮೆಡಿಕಲ್ ಕಾಲೇಜು ಹೊಂದಿದ ಪ್ರತಿಷ್ಠಿತ ಮಠಗಳ ಸಾಲಿಗೆ ಸೇರಿದೆ . ಮೈಸೂರಿನ ಜೆಎಸ್ ಎಸ್(JSS) , ಸಿರಿಗೆರೆಯ ತರಳಬಾಳು , ಆದಿಚುಂಚನಗಿರಿ ಮತ್ತು ಚಿತ್ರದುರ್ಗದ ಬೃಹನ್ಮಠಗಳು ಈಗಾಗಲೇ ವೈದ್ಯಕೀಯ ಕಾಲೇಜುಗಳನ್ನು ನಡೆಸುತ್ತಿವೆ. ಸಿದ್ದಗಂಗಾ ಮಠಕ್ಕೆ ಮೆಡಿಕಲ್ ಕಾಲೇಜು ಮಂಜೂರಾಗಿದ್ದರಿಂದ ತುಮಕೂರು ಜಿಲ್ಲೆಗೆ ಒಟ್ಟು 3 ಮೆಡಿಕಲ್ ಕಾಲೇಜು ಸಿಕ್ಕಂತಾಗಿದೆ . ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್(Former Deputy Chief Minister Dr. G Parameshwar) ಅವರ ಸಂಸ್ಥೆಗೆ ಸೇರಿದ 2 ಮೆಡಿಕಲ್ ಕಾಲೇಜುಗಳು ಈಗಾಗಲೇ ಕಾರ್ಯಾರಂಭ ಮಾಡುತ್ತಿವೆ.Ukraineನಿಂದ ಮರಳಿದ ವಿದ್ಯಾರ್ಥಿಗಳ ಪ್ರಾಯೋಗಿಕ ಅಧ್ಯಯನಕ್ಕೆ ಸಿದ್ದಗಂಗಾ ಮಠ ನೆರವು

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ