ನೀಟ್ ವಿಳಂಬ: ದಂಡ ರದ್ದು, ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್

By Suvarna News  |  First Published Feb 11, 2022, 6:06 PM IST

* ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕ ರದ್ದು
* ಈಗಾಗಲೇ ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್
* ರಾಮನಗರದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಘೋಷಣೆ


ರಾಮನಗರ, (ಫೆ.11): ನೀಟ್ ಪರೀಕ್ಷೆಯಲ್ಲಿ (NEET Exam) ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಹಾಗೆಯೇ ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwath Narayan) ತಿಳಿಸಿದ್ದಾರೆ.

ರಾಮನಗರದಲ್ಲಿ (Ramanagara) ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಈ ಬಗ್ಗೆ ಬಂದಿರುವ ವರದಿಗಳಿಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಶುಕ್ರವಾರ ಇಲ್ಲಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿ, ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ‌ ಅನ್ವಯಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

Latest Videos

undefined

NEET PG Exam 2022 Postponed: ಮಾರ್ಚ್‌ 12ಕ್ಕೆ ನಿಗದಿಯಾಗಿದ್ದ ನೀಟ್‌–ಪಿಜಿ ಪರೀಕ್ಷೆ ಮುಂದೂಡಿದ ಆರೋಗ್ಯ ಸಚಿವಾಲಯ

'ಸಾಮಾನ್ಯವಾಗಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೇ ನಡೆಯುತ್ತಿತ್ತು. ಆದರೆ ಈ ವರ್ಷ ನೀಟ್ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿದ್ದರಿಂದ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ. ಹೀಗಾಗಿ, ಅನಿಶ್ಚಿತ ಪರಿಸ್ಥಿತಿ ತಲೆದೋರಿದೆ. ಇದರಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಪ್ರವೇಶಾತಿ ಪಡೆದಿರುವವರಿಗೆ ಈಗ ವೈದ್ಯಕೀಯ ಸೀಟು ಸಿಕ್ಕಿದ್ದರೆ, ಆಸಕ್ತರು ಅಲ್ಲಿಗೆ ಹೋಗಬಹುದು. ಅದಕ್ಕೆ ಯಾವುದೇ ದಂಡ ವಸೂಲಿ ಮಾಡುವುದಿಲ್ಲ. ಹಾಗೆಯೇ ಈ ವರ್ಷ ಕಟ್ಟಿದ್ದ ಶುಲ್ಕವನ್ನೂ ಮುಟ್ಟುಗೋಲು ಹಾಕಿಕೊಳ್ಳುವುದಿಲ್ಲ. ಬದಲಿಗೆ ವಿದ್ಯಾರ್ಥಿಗಳಿಗೆ ಹಿಂದಿರುಗಿಸಲಾಗುವುದು ಎಂದರು.

Due to the delay in the NEET exam, penalty fee for students who have already secured an engineering seat & now are enrolling for a medical seat has been cancelled.

Institutions are advised to refund any amount collected in this regard. Exemption is applicable only for this year. https://t.co/Vwgz0SNWUU

— Dr. Ashwathnarayan C. N. (@drashwathcn)

ಪ್ರವೇಶ ಪಡೆದ ನಂತರ ಸೀಟು ಬಿಟ್ಟು ಹೋಗುವವರಿಗೆ ಶುಲ್ಕದ ಐದು ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ. ಆದರೆ ಈ ಬಾರಿ ಇದಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಹೇಳಿದರು.

ಸಾಮಾನ್ಯವಾಗಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೇ ನಡೆಯುತ್ತಿತ್ತು. ಆದರೆ ಈ ವರ್ಷ ನೀಟ್ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿದ್ದರಿಂದ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ. ಹೀಗಾಗಿ, ಅನಿಶ್ಚಿತ ಪರಿಸ್ಥಿತಿ ತಲೆದೋರಿದೆ. ಇದರಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಪ್ರವೇಶಾತಿ ಪಡೆದಿರುವವರಿಗೆ ಈಗ ವೈದ್ಯಕೀಯ ಸೀಟು ಸಿಕ್ಕಿದ್ದರೆ, ಆಸಕ್ತರು ಅಲ್ಲಿಗೆ ಹೋಗಬಹುದು. ಅದಕ್ಕೆ ಯಾವುದೇ ದಂಡ ವಸೂಲಿ ಮಾಡುವುದಿಲ್ಲ. ಹಾಗೆಯೇ ಈ ವರ್ಷ ಕಟ್ಟಿದ್ದ ಶುಲ್ಕವನ್ನೂ ಮುಟ್ಟುಗೋಲು ಹಾಕಿಕೊಳ್ಳುವುದಿಲ್ಲ. ಬದಲಿಗೆ ವಿದ್ಯಾರ್ಥಿಗಳಿಗೆ ಹಿಂದಿರುಗಿಸಲಾಗುವುದು ಎಂದಿದ್ದಾರೆ.

ಒಂದು ಕೋರ್ಸ್‌ಗೆ ಪ್ರವೇಶ ಪಡೆದ ನಂತರ ಆ ವಿದ್ಯಾರ್ಥಿ ಆ ಕೋರ್ಸ್‌ನ್ನು ಬಿಟ್ಟು ಬೇರೆ ಕೋರ್ಸ್‌ಗೆ ಪ್ರವೇಶ ಪಡೆದರೆ ಶುಲ್ಕದ 5 ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇತ್ತು. ಹಾಗೆಯೇ ಈ ವರ್ಷ ಕಟ್ಟಿದ್ದ ಶುಲ್ಕವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿತ್ತು. ಈ ಬಾರಿ ಇದಕ್ಕೆಲ್ಲ ಸರಕಾರ ವಿನಾಯ್ತಿ ನೀಡಿದೆ.

ಮೊಬೈಲ್ ಬಳಕೆ ನಿಷೇಧಗೆ ಪರಿಶೀಲನೆ
ಕಾಲೇಜು ಆವರಣದಲ್ಲಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವುದನ್ನು ನಿಷೇಧಿಸುವ ಬಗ್ಗೆ ಪರಿಶೀಲಿಸುತ್ತಿದ್ದೇವೆ. ವಿದ್ಯಾರ್ಥಿಗಳ ಕಲಿಕೆಗೆ ಮೊಬೈಲ್​ ಫೋನ್​ ಪೂರಕವಾಗಿದೆ. ಮೊಬೈಲ್​ನಿಂದ ಅನುಕೂಲ, ಅನಾನುಕೂಲ ಎರಡೂ ಇದೆ. ಮುಂದೆ ಯಾವ ರೀತಿ ಕ್ರಮಕೈಗೊಳ್ಳಬೇಕೆಂದು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದರು.

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿದರೆ ಒಳ್ಳೆಯದು ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎನ್ನಲಾಗುತ್ತಿದೆ.
 

click me!