National Education Policy: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಯಾವಾಗ? ಸ್ಪಷ್ಟನೆ ಕೊಟ್ಟ ಸಚಿವ

By Suvarna News  |  First Published Dec 16, 2021, 8:09 PM IST

* ಗೊಂದಲ ಮೂಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ
* ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ ಬಿಸಿ ನಾಗೇಶ್
* ಕೇಂದ್ರದ ಮಹತ್ವಕಾಂಕ್ಷಿಯ ರಾಷ್ಟ್ರೀಯ ಶಿಕ್ಷಣ ನೀತಿ


ಬೆಳಗಾವಿ, (ಡಿ.16): ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸೀಮಿತ ಸಂಖ್ಯೆಯ ಆಯ್ದ ಶಾಲೆಗಳಲ್ಲಿ ಮಾತ್ರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(National Education Policy) ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಸ್ಪಷ್ಟಪಡಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದ Belagavi Winter Session) ಪ್ರಶ್ನೋತ್ತರ ಅವಯಲ್ಲಿ ಕೌಜಲಗಿ ಮಹಾಂತೇಶ್ ಶಿವಾನಂದ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಸಂಬಂಧ ಈಗಾಗಲೇ ಶಿಕ್ಷಕರಿಗೆ ಅಗತ್ಯವಾದ ತರಬೇತಿಯನ್ನು ನೀಡಲಾಗುತ್ತಿದೆ. ಹೊಸ ಪಠ್ಯಗಳನ್ನು ಅಳವಡಿಸುವುದು, ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ತರಬೇತಿ ಕೊಡತ್ತಿದ್ದೇವೆ. ಮುಂದಿನ ಶೈಕ್ಷಣಿಕ ವರ್ಷದಿಂದ ಇದನ್ನು ಆಯ್ದ ಪ್ರದೇಶಗಳ ಕೆಲವೇ ಶಾಲೆಗಳಲ್ಲಿ ಅನುಷ್ಠಾನ ಮಾಡುತ್ತಿದ್ದೇವೆ ಹೇಳಿದರು.

Tap to resize

Latest Videos

undefined

NEP Karnataka; 'ಈಶಾನ್ಯದಲ್ಲಿ ಮೊಳಗಿದ ಕನ್ನಡ' ಹೊಸ ಶಿಕ್ಷಣ ನೀತಿ ಮೊದಲ ಹೆಜ್ಜೆ ಕರ್ನಾಟಕದಿಂದ

2030ರೊಳಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(NEP 2020) ಸಂಪೂರ್ಣವಾಗಿ ಅಳವಡಿಸಿಕೊಳ್ಳಬೇಕೆಂಬ ನಿರ್ದೇಶನವಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ನಾವು ಹಿರಿಯ ಅಕಾರಿಗಳ ಜೊತೆ ಮೂರ್ನಾಲ್ಕು ಸಭೆಗಳನ್ನು ನಡೆಸಿದ್ದೇವೆ. ಪೂರ್ವ ಪ್ರಾಥಮಿಕ ಶಿಕ್ಷಕಿಯರಿಗೆ ಟಾಟಾ ಸಂಸ್ಥೆ ತರಬೇತಿ ನೀಡುತ್ತಿದ್ದರೆ, ಶಿಕ್ಷಕರಿಗೂ ತರಬೇತಿ ನೀಡಲಾಗುತ್ತದೆ ಎಂದರು.

ಅಧಿಕಾರಿಗಳ ಜೊತೆ ಉಪಸಮಿತಿಯು ಕೂಡ ಸಭೆ ನಡೆಸಿದೆ. ಶಿಕ್ಷಣ ತಜ್ಞರು ಹಲವಾರು ಸಭೆಗಳನ್ನು ನಡೆಸಿ ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಪರಿಷತ್‍ನ ಅಂದಿನ ಉಪಾಧ್ಯಕ್ಷರಾಗಿದ್ದ ಎಸ್.ವಿ.ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ 15 ಜನ ಸದಸ್ಯರುಳ್ಳ ಕಾರ್ಯಪಡೆಯನ್ನು ರಚಿಸಲಾಯಿತು.

ಈ ಕಾರ್ಯಪಡೆಯು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಸಮಿತಿಯ ವರದಿಯನ್ನು ಪರಿಶೀಲಿಸಿ ಹಂತ ಹಂತವಾಗಿ ಅನುಷಾನ ಮಾಡುತ್ತೇವೆ ಎಂದರು.ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ರಚನಾತ್ಮಕ ರೂಪಾಂತರ, ಆಡಳಿತಾತ್ಮಕ ಬದಲಾವಣೆಗಳು, ಪಠ್ಯಕ್ರಮ ಸುಧಾರಣೆ ಆಧಾರದ ಮೇಲೆ ಸರ್ಕಾರ ಕ್ರಮ ಕೈಗೊಂಡಿದೆ. ಶಿಕ್ಷಣ ನೀತಿಯ ಅನುಷ್ಠಾನ ರೂಪುರೇಷೆಯನ್ನು ವಿನ್ಯಾಸಗೊಳಿಸಲು ಕೋರ್ ಕಮಿಟಿಯನ್ನು ರಚಿಸಲಾಗಿತ್ತು. ಒಟ್ಟಾರೆ ರಾಜ್ಯ ಸರ್ಕಾರ ಹಂತ ಹಂತವಾಗಿ ಎಂಇಟಿಯನ್ನು ಅನುಷ್ಠಾನ ಮಾಡಲಿದೆ ಎಂದು ತಿಳಿಸಿದರು,

ಅಸ್ಸಾಂನ (Assam) ಗುವಾಹಟಿಯಲ್ಲಿ ನವೆಂಬರ್‌ನಲ್ಲಿ ಭಾನುವಾರ ನಡೆದ ‘ಈಶಾನ್ಯ ರಾಜ್ಯಗಳ ಶೈಕ್ಷಣಿಕ ಸಮಾವೇಶ’ದಲ್ಲಿ ಕರ್ನಾಟಕದ (Karnataka)ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪಿ. ಅವರು ಪಾಲ್ಗೊಂಡು, ಕರ್ನಾಟಕವು ದೇಶದಲ್ಲೇ ಮೊದಲ ರಾಜ್ಯವಾಗಿ ‘ರಾಷ್ಟ್ರೀಯ ಶಿಕ್ಷಣ ನೀತಿ’ (National Education Policy)ಅನುಷ್ಠಾನಗೊಳಿಸಿದ ಕುರಿತು ವಿಡಿಯೊ ಪ್ರಾತ್ಯಕ್ಷಿಕೆಯನ್ನು  ಮಂಡಿಸಿದ್ದರು.

ಇನ್ನು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ (National Education Policy 2020)ಪಠ್ಯೇತರ ಚಟುವಟಿಕೆ ಕಡ್ಡಾಯ ಆಗಿದೆ. ಎನ್​ಇಪಿಯಲ್ಲಿ ಸಾಂಸ್ಕೃತಿಕ ಶಿಕ್ಷಣ, ದೈಹಿಕ ಶಿಕ್ಷಣ(Physical Education), ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡಲಾಗುವುದು ಎಂದು ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ (Dr CN Ashwath Narayan) ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ಪ್ರತಿಟನೆ
ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನ ಜಾರಿಗೆ ತರಲು ಹಲವರ ವಿರೋಧಗಳು ವ್ಯಕ್ತವಾಗಿವೆ. ರಾಜ್ಯದ ನಾನಾ ಕಡೆಗಳಲ್ಲಿ ಈ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳು ರಸ್ತೆಗಳಿದು ಪ್ರತಿಭಟನೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

click me!