CBSE ಎಕ್ಸಾಮ್ ರದ್ದು ಬೆನ್ನಲ್ಲೇ SSLC, PUC ಪರೀಕ್ಷೆ ಕುರಿತು ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನೆ

By Suvarna News  |  First Published Apr 14, 2021, 4:33 PM IST

CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.


ಬೆಂಗಳೂರು, (ಏ.14) :  ಸಿಬಿಎಸ್​ಇ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇಂದು ಮಹತ್ವದ ಘೋಷಣೆ ಮಾಡಿದೆ. 10ನೇ ತರಗತಿಗೆ ಪರೀಕ್ಷೆ ರದ್ದು ಮಾಡಿ 12 ನೇ ತರಗತಿಗೆ ಪರೀಕ್ಷೆಗಳನ್ನ ಮುಂದೂಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಇತ್ತ ಕರ್ನಾಟಕದಲ್ಲಿ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲಕ್ಕೀಡಾಗಿದ್ದಾರೆ.

Latest Videos

undefined

"

CBSE: 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ!

ಈ ಹಿನ್ನೆಲೆಯಲ್ಲಿ ಇದಕ್ಕೆ ಸ್ವತಃ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಯಿಸಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದು ಈ ಕೆಳಗಿನಂತಿದೆ ನೋಡಿ.

CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ. 

ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು 21.6.2021 ರಿಂದ, ಅಂದರೆ ಜೂನ್ 21 ರಿಂದ.  II PUC ಪರೀಕ್ಷೆಗಳು ಪ್ರಾರಂಭವಾಗುವುದು ಮೇ 24 ರಿಂದ.  ಆದ್ದರಿಂದ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ  ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

CBSE ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ SSLC ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ.

ನಮ್ಮ ರಾಜ್ಯದ SSLC ಪರೀಕ್ಷೆಗಳು ಪ್ರಾರಂಭ ವಾಗಬೇಕಿರುವುದು
21.6.2021 ರಿಂದ, ಅಂದರೆ ಜೂನ್ 21 ರಿಂದ.

ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ CBSE ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ.

— S.Suresh Kumar, Minister - Govt of Karnataka (@nimmasuresh)

ಆದ್ದರಿಂದ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹಾಗೂ ಪೋಷಕರು ಯಾವುದೇ ಊಹಾಪೋಹ ಸುದ್ದಿಗಳಿಗೆ ಕಿವಿಗೊಡದೇ ಗೊಂದಲಕ್ಕೀಡಾಗಬಾರದು. 

click me!