'ಸರ್ಕಾರಿ ಶಾಲೆಗಳಿಗೆ ಹೈಸ್ಟೀಡ್‌ ಇಂಟರ್ನೆಟ್‌'

Kannadaprabha News   | Asianet News
Published : Dec 24, 2020, 01:23 PM IST
'ಸರ್ಕಾರಿ ಶಾಲೆಗಳಿಗೆ ಹೈಸ್ಟೀಡ್‌ ಇಂಟರ್ನೆಟ್‌'

ಸಾರಾಂಶ

ಈ ಸಂಬಂಧ ಇಲಾಖೆಯೊಂದಿಗೆ ಪ್ರಾಥಮಿಕ ಚರ್ಚೆ| ಮೊದಲ ಹಂತದಲ್ಲಿ ಕ್ಲಸ್ಟರ್‌ ಮಟ್ಟದಲ್ಲಿ ಜಾರಿಗೊಳಿಸಲು ಉದ್ದೇಶ| ಮುಂದಿನ ಒಂದು ವರ್ಷದೊಳಗೆ ಸಾಕಾರವಾಗುವ ನಿರೀಕ್ಷೆ| ತಂತ್ರಜ್ಞಾನಾಧಾರಿತ ಕಲಿಕೆಗೆ ವಿಶೇಷ ಒತ್ತು ನೀಡುವುದು ಅನಿವಾರ್ಯ| 

ಬೆಂಗಳೂರು(ಡಿ.24): ಭಾರತ್‌ ನೆಟ್‌ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ಸರ್ಕಾರಿ ಶಾಲೆಗಳಿಗೆ ಕೇಬಲ್‌ ಮೂಲಕ ಹೈಸ್ಪೀಡ್‌ ಇಂಟರ್ನೆಟ್‌ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಆಲೋಚಿಸಲಾಗುತ್ತಿದೆ ಎಂದು ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಆಂಗ್ಲ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ತಿಳಿಸಿರುವ ಸಚಿವರು, ಈ ಕುರಿತಂತೆ ಸಂಬಂಧಿಸಿದ ಇಲಾಖೆಯೊಂದಿಗೆ ಪ್ರಾಥಮಿಕ ಚರ್ಚೆ ನಡೆಸಲಾಗಿದ್ದು, ಮೊದಲ ಹಂತದಲ್ಲಿ ಕ್ಲಸ್ಟರ್‌ ಮಟ್ಟದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಇದು ಮುಂದಿನ ಒಂದು ವರ್ಷದೊಳಗೆ ಸಾಕಾರವಾಗುವ ನಿರೀಕ್ಷೆ ಇದೆ ಎಂದಿದ್ದಾರೆ.

ಶಾಲೆ ಆರಂಭದ ಡೇಟ್ ಘೋಷಿಸಿದ ಕರ್ನಾಟಕ ಸರ್ಕಾರ..ನಿಯಮ ಏನು?

ಸರ್ಕಾರದ ಈ ಕ್ರಮ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲಾ ಶಿಕ್ಷಣ ವ್ಯವಸ್ಥೆಗೆ ಹೊಸ ದಿಶೆಯನ್ನು ಕಲ್ಪಿಸಲಿದೆ. ಕೋವಿಡ್‌ ಸೃಷ್ಟಿಸಿರುವ ಸಾಮಾಜಿಕ ಸ್ಥಿತಿಗತಿಗಳಿಗೆ ಅನುಗುಣವಾಗಿ ತಂತ್ರಜ್ಞಾನಾಧಾರಿತ ಕಲಿಕೆಗೆ ವಿಶೇಷ ಒತ್ತು ನೀಡುವುದು ಅನಿವಾರ್ಯವಾಗಿದೆ ಎಂದಿದ್ದಾರೆ.
 

PREV
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ