
ಬೆಂಗಳೂರು (ಅ.13): ಪಿಯು ಉಪನ್ಯಾಸಕರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಈ ಸಂಬಂಧ ಸಚಿವ ಸುರೇಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
2015ರಿಂದ ವಿಳಂಬವಾಗುತ್ತಿದ್ದ ಪರೀಕ್ಷೆ ಫಲಿತಾಂಶವನ್ನು ಪ್ರಕಟ ಮಾಡಿದ್ದೆ. ಕಾಲೇಜುಗಳು ಪ್ರಾರಂಭವಾದ ತಕ್ಷಣ ನೇಮಕಾತಿ ಆದೇಶ ಕೊಡಲಾಗುವುದು. ಆಯ್ಕೆ ಪಟ್ಟಿ ರದ್ದಾಗುತ್ತದೆ ಎಂಬ ಆತಂಕ ಉಪನ್ಯಾಸಕರಿಗಿದೆ. ಆದರೆ ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಈ ಬಗ್ಗೆ ಅಗತ್ಯ ತಿಡದ್ದು ಪಡಿ ಬೇಕಾದರೆ ಮಾಡಿಕೊಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಆರ್ಡರ್ ಕಾಪಿ ಕೊಡುವವರೆಗೆ ನಾವು ತೆರಳುವುದಿಲ್ಲ; ಪಿಯು ಉಪನ್ಯಾಸಕರಿಂದ ಅಹೋರಾತ್ರಿ ಪ್ರತಿಭಟನೆ
ನನ್ನ ಪ್ರತಿ ಪ್ರಯತ್ನ ಈ ಎಲ್ಲಾ ನೂತನ ಉಪನ್ಯಾಸಕರಿಗೆ ತಿಳಿದಿದೆ. ಆರ್ಥಿಕ ಇಲಾಖೆಯ ನಿರ್ಬಂಧ ಇದ್ದರೂ ಸಹ ಇವರೆಲ್ಲರಿಗೂ ಕೌನ್ಸೆಲಿಂಗ್ ಪ್ರಕ್ರಿಯೆ ಸಹ ಪೂರ್ಣಗೊಳಿಸಲಾಗಿದೆ. ಈಗ ಕಾಲೇಜುಗಳು ಪ್ರಾರಂಭವಾದ ತಕ್ಷಣ ನೇಮಕಾತಿ ಆದೇಶ ಕೊಡಲಾಗುವುದು ಎಂದು ಈ ಎಲ್ಲಾ ನೂತನ ಉಪನ್ಯಾಸಕರುಗಳಿಗೆ ಮುಂಚೆಯೇ ತಿಳಿಸಲಾಗಿತ್ತು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಪಿಯುಸಿ ಉಪನ್ಯಾಸಕರಾಗಿ ಆಯ್ಕೆಗೊಂಡಿರುವ ಮತ್ತು ಕೌನ್ಸೆಲಿಂಗ್ ಸಹ ಪೂರ್ಣವಾಗಿರುವ ಉಪನ್ಯಾಸಕರು ನೇಮಕಾತಿ ಆದೇಶಕ್ಕಾಗಿ ಧರಣಿ ಕೂತಿರುವ ವಿಚಾರ...
Posted by Suresh Kumar S on Monday, October 12, 2020
ಉಪನ್ಯಾಸಕರಾಗಿ ಆಯ್ಕೆಯಾಗಿ ಒಂದು ವರ್ಷದ ಒಳಗೆ ನೇಮಕಾತಿ ಆದೇಶ ದೊರೆಯದಿದ್ದರೆ ಆ ಆಯ್ಕೆ ಪಟ್ಟಿ ರದ್ದಾಗುತ್ತದೆ ಎಂಬ ಆತಂಕ ಈ ನೂತನ ಉಪನ್ಯಾಸಕರಿಗಿದೆಎಂದು ಹೇಳಿದ್ದಾರೆ.