SSLC, PUC ಪರೀಕ್ಷೆಗೆ ಮುಹೂರ್ತ ಫಿಕ್ಸ್..!

By Suvarna News  |  First Published Jan 6, 2021, 7:37 PM IST

ಕೊರೋನಾ ಭೀತಿ ನಡುವೆಯೂ 10 ಹಾಗೂ 12ನೇ ತರಗತಿ ಪ್ರಾರಂಭಿಸಲಾಗಿದ್ದು, ಇದೀಗ ಸಚಿವ ಸುರೇಶ್ ಕುಮಾರ್ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.


ಬೆಂಗಳೂರು, (ಜ.06) : ಮೇ 2ನೇ ವಾರದಲ್ಲಿ ದ್ವಿತೀಯ ಪಿಯುಸಿ ಹಾಗೂ  ಜೂನ್ ಮೊದಲ ವಾರದಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ನಾಳೆ ಅಂದ್ರೆ ಜನವರಿ 07ರಂದು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದರು.

Latest Videos

undefined

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶೈಕ್ಷಣಿಕ ದಾಖಲೆಗಳ ಭದ್ರತೆಗೆ ಡಿಜಿ ಲಾಕರ್ ವ್ಯವಸ್ಥೆ

ಶಿಕ್ಷಣ ಇಲಾಖೆಯು ಈ ತರಗತಿಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ದೃಷ್ಟಿಯಿಂದ ಬೋಧನೆ, ಕಲಿಕೆಗಾಗಿ ಗುರುತಿಸಿರುವ ವಿಷಯಾಂಶಗಳನ್ನು ಅಂತಿಮಗೊಳಿಸಿದ್ದು, ಇದರ ವಿವರಗಳನ್ನು ಎಲ್ಲ ಶಾಲೆಗಳಿಗೆ ತಲುಪಿಸಲಾಗುತ್ತದೆ. ಯಾವುದೇ ವಿದ್ಯಾರ್ಥಿಗೂ ಹೊರೆಯಾಗದ ರೀತಿಯಲ್ಲಿ ಕನಿಷ್ಟ ಕಲಿಕೆಗೆ ಬೋಧಿಸಬೇಕಿರುವ ಪಠ್ಯಗಳನ್ನು ಪರಿಗಣಿಸಲಾಗಿದೆ ಎಂದು ಸಚಿವರು ತಿಳಿಸಿದರು.

1ರಿಂದ 9ನೇ ತರಗತಿಗೆ ಪಠ್ಯ ಕಡಿತವಿಲ್ಲ:
ಈ ಕುರಿತಂತೆ ಪರ್ಯಾಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಈ ತರಗತಿಗಳಿಗೆ ಸಂಬಂಧಿಸಿದಂತೆ ಪಠ್ಯ‌ಕಡಿತವೆನ್ನುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ. ಶಾಲಾ ಹಂತದಲ್ಲಿ ಮೌಲ್ಯಮಾಪನವನ್ನ ನಡೆಸಲಾಗುವುದರಿಂದ ಮಕ್ಕಳ ಕಲಿಕಾ ಸಾಮರ್ಥ್ಯ ಆಧಾರದಲ್ಲಿ ಸರಳ ಮೌಲ್ಯಮಾಪನಾ ಪ್ರಕ್ರಿಯೆ ಜಾರಿಯಲ್ಲಿರಲಿದೆ ಎಂದು ಸ್ಪಷ್ಟಪಡಿಸಿದರು.

click me!