ಎಸ್ಸೆಸ್ಸೆಲ್ಸಿ ಫಲಿತಾಂಶದ ಬಗ್ಗೆ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಿಷ್ಟು

Kannadaprabha News   | Asianet News
Published : Jul 17, 2021, 09:44 AM IST
ಎಸ್ಸೆಸ್ಸೆಲ್ಸಿ ಫಲಿತಾಂಶದ ಬಗ್ಗೆ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಿಷ್ಟು

ಸಾರಾಂಶ

* ಜು.19 ಮತ್ತು 22ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ * ವಿದ್ಯಾರ್ಥಿಗಳು ಲಿಖಿತವಾಗಿ ಯಾವುದೇ ಉತ್ತರ ಬರೆಯುವಂತಿಲ್ಲ * ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆಗಸ್ಟ್‌ನಲ್ಲಿ ಮತ್ತೊಂದು ಪರೀಕ್ಷೆ 

ಬೆಂಗಳೂರು(ಜು.17): ಜುಲೈ 19 ಮತ್ತು 22ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಆಗಸ್ಟ್‌ 10ರೊಳಗೆ ನೀಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. 

ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಕೇವಲ ಬಹು ಆಯ್ಕೆ ಮಾದರಿ ಉತ್ತರಗಳಲ್ಲಿ ಸರಿ ಉತ್ತರವನ್ನು ಒಎಂಆರ್‌ ಶೀಟ್‌ನಲ್ಲಿ ಗುರುತಿಸಬೇಕಷ್ಟೆ. ಹಾಗಾಗಿ ಮೌಲ್ಯಮಾಪನಕ್ಕೆ ಹೆಚ್ಚಿನ ಕಾಲಾವಕಾಶ ಬೇಕಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆ.10ರೊಳಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ನೀಡಲಾಗುವುದು ಎಂದರು.

ರಾಯಚೂರು: ಪರೀಕ್ಷಾ ಭಯ ದೂರ ಮಾಡಲು SSLC ವಿದ್ಯಾರ್ಥಿಗಳಿಗೆ ಅಣುಕು ಪರೀಕ್ಷೆ

ಜು.19 ಮತ್ತು 22ರಂದು ನಡೆಯಲಿರುವ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಬಾರಿ ವಿದ್ಯಾರ್ಥಿಗಳು ಲಿಖಿತವಾಗಿ ಯಾವುದೇ ಉತ್ತರ ಬರೆಯುವಂತಿಲ್ಲ.

ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆಗಸ್ಟ್‌ನಲ್ಲಿ ಮತ್ತೊಂದು ಪರೀಕ್ಷೆ ನಡೆಸುತ್ತೇವೆ. ಬೇರೆ ಬೇರೆ ಕಾರಣಗಳಿಂದ ಕೆಲವು ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಅಂತಹವರಿಗೆ ಅವಕಾಶ ನೀಡಲು ಆಗಸ್ಟ್‌ನಲ್ಲೇ ಮತ್ತೊಂದು ಪರೀಕ್ಷೆ ನಡೆಸಲಾಗುವುದು ಎಂದರು.
 

PREV
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ