ಉತ್ತರ ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ‌ ಆಗ್ತಿತ್ತು; ಎಂಎಲ್‌ಸಿ ಅಭ್ಯರ್ಥಿ ಭೋಜೇಗೌಡ ಆರೋಪ

Published : May 19, 2024, 01:41 PM IST
ಉತ್ತರ ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ‌ ಆಗ್ತಿತ್ತು; ಎಂಎಲ್‌ಸಿ ಅಭ್ಯರ್ಥಿ ಭೋಜೇಗೌಡ ಆರೋಪ

ಸಾರಾಂಶ

ಉತ್ತರ ಕರ್ನಾಟಕ ಎಲ್ಲ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಮಾಡುತ್ತಿದ್ದರು ಎಂದು ಮಾಜಿ ಎಂಎಲ್‌ಸಿ ಭೋಜೇಗೌಡ ಆರೋಪಿಸಿದ್ದಾರೆ. 

ಬೆಂಗಳೂರು (ಮೇ 19): ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಮಾಸ್ ಕಾಪಿ‌ ಆಗ್ತಾ ಇತ್ತು. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮಾರಕವಾಗುವುದಲ್ಲದೇ ಕರಾವಳಿ ಜಿಲ್ಲೆಗಳ ಫಲಿತಾಂಶದ ಮೇಲೂ ಪರಿಣಾಮ ಬೀರುತ್ತಿತ್ತು. ಈ ಹಿನ್ನೆಲೆಯಲ್ಲಿ ಮಾಸ್ ಕಾಪಿ ನಿಲ್ಲಿಸಲು‌ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಬಗ್ಗೆ ನಾನು ಪರಿಷತ್ ನಲ್ಲಿ ಆಗ್ರಹಿಸಿದ್ದೆನು. ಇದರ ಪರಿಣಾಮವಾಗಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಭಾನುವಾರ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಮಾಸ್ ಕಾಪಿ ಆಗ್ತಿತ್ತು. ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಬಗ್ಗೆ ನಾನು ಪರಿಷತ್ ನಲ್ಲಿ ಆಗ್ರಹಿಸಿದ್ದೆ. ಆಗ ಆ ಭಾಗದಲ್ಲಿ ಮಾಸ್ ಕಾಪಿ‌ ಆಗ್ತಾ ಇತ್ತು. ಅದನ್ನು ತಡೆದು ಮಾಸ್ ಕಾಪಿ ನಿಲ್ಲಿಸಲು‌ ಕ್ಯಾಮಾರ ಹಾಕಲು ಹೇಳಿದ್ದೆ. ನಿಜವಾದ ಶಿಕ್ಷಣ ಸಿಗಬೇಕು ಅಂತ ಪರಿಷತ್ ನಲ್ಲಿ‌ ಆಗ್ರಹಿಸಿದ್ದೆ. ಬಹಳ ಹಿಂದಿನಿಂದಲೂ ಅನ್ಯಾಯ ಆಗ್ತಾ ಇದೆ ಎಂದು ಹೋರಾಟ ಮಾಡಿದ್ದೆ. ಅದರ ಪರಿಣಾಮ ಈ ಬಾರಿ‌ ಪರೀಕ್ಷೆಯಲ್ಲಿ ಸಿಸಿಟಿವಿ ಹಾಕಿದ್ದಾರೆ ಎಂದು ತಿಳಿಸಿದರು.

ಮದರಸಾ ಫೋಟೋ ಕ್ಲಿಕ್ಕಿಸುತ್ತಿದ್ದ ಶಿಕ್ಷಕನ ಮೇಲೆ ಮಾರಣಾಂತಿಕ ಹಲ್ಲೆ

ಈ ಬಾರಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು, ಯಾವುದೇ ಮಾಸ್ ಕಾಪಿ ಮಾಡದೇ ಪರೀಕ್ಷೆಯನ್ನು ನಡೆಸಲಾಗಿದೆ. ಇದರ ಪರಿಣಾಮವಾಗಿ ಈ ಬಾರಿ ಸರಿಯಾಗಿ ಪರೀಕ್ಷೆ ನಡೆದು ಫಲಿತಾಂಶ ಬಂದಿದೆ. ಈಗ ನಾವು ಮತ್ತೆ ಅದರ ಬಗ್ಗೆ ಧ್ವನಿ ಎತ್ತಬೇಕಿದೆ. ಈ ಹಿಂದಿನ ಅನಾಹುತದ ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು. ಈಗಿನ ರಿಸಲ್ಟ್ ನೋಡಿಯಾದ್ರೂ ಹಿಂದಿನ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಈ ಬಗ್ಗೆ ನಾನು ಮುಂದೆ ಪರಿಷತ್ ನಲ್ಲಿ ಆಗ್ರಹ‌ ಮಾಡ್ತೇನೆ ಎಂದು ತಿಳಿಸಿದರು.

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ