ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ- ಕಾಲೇಜುಗಳನ್ನು ತೆರೆಯಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ. ಎಂ.ಆರ್. ದೊರೆಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಬೆಂಗಳೂರು (ಸೆ.08): ಸುರಕ್ಷತಾ ಕ್ರಮಗಳನ್ನು ಕೈಗೊಂಡು ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ- ಕಾಲೇಜುಗಳನ್ನು ತೆರೆಯಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಡಾ. ಎಂ.ಆರ್. ದೊರೆಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಲ್ಲಿ ನಿಧಾನವಾಗಿ ಕೊರೋನಾ ಭಯ ಕಡಿಮೆಯಾಗುತ್ತಿದೆ. ಹೀಗಾಗಿ, ಶಾಲಾ ಮತ್ತು ಕಾಲೇಜು ಆಡಳಿತ ಮಂಡಳಿಗಳು ಸುರಕ್ಷತಾ ಕ್ರಮ ಕೈಗೊಂಡು ಶಾಲಾ ಕಾಲೇಜುಗಳನ್ನು ಆರಂಭಿಸಲು ಸಿದ್ಧರಾಗಿರುವುದರಿಂದ ಆರಂಭಿಸಲು ಅನುಮತಿ ನೀಡಬೇಕು.
undefined
ಶಾಲಾ-ಕಾಲೇಜುಗಳ ತೆರಿಗೆ ಮನ್ನಾಕ್ಕೆ ಒತ್ತಾಯ: ವಿದ್ಯಾರ್ಥಿಗಳ ಶುಲ್ಕ ಕಡಿಮೆಯಾಗುತ್ತಾ..? ...
ಸಾಮಾನ್ಯವಾಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜು ನಂತರ ಪದವಿ, ವೈದ್ಯಕೀಯ ತರಗತಿಗಳಿಗೆ ಶಾಲಾ- ಕಾಲೇಜುಗಳು ಆರಂಭವಾಗುತ್ತವೆ.
ಆದರೆ, ಕೊರೋನಾ ಕಾಲಘಟ್ಟವಾಗಿರುವುದರಿಂದ ಕೊರೋನಾ ಬಗ್ಗೆ ಜಾಗೃತಿ ಹೊಂದಿರುವವರಿಗೆ ಮೊದಲು ತರಗತಿಗಳನ್ನು ಆರಂಭಿಸಬೇಕು. ಮೊದಲ ಹಂತದಲ್ಲಿ ವೈದ್ಯಕೀಯ, ಎಂಜಿನಿಯರಿಂಗ್, ನಂತರ ಪದವಿ, ಪದವಿ ಪೂರ್ವ, ಪ್ರೌಢಶಾಲೆ, ಪ್ರಾಥಮಿಕ ಶಾಲೆ ಈ ರೀತಿ ಹಂತ ಹಂತವಾಗಿ ಕಾಲೇಜು-ಶಾಲೆಗಳನ್ನು ತೆರೆಯಲು ಅವಕಾಶ ನೀಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.