Teachers National Award 2022; ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

By Suvarna News  |  First Published Jun 24, 2022, 1:11 PM IST

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದೀಗ ಅವಧಿಯನ್ನು ವಿಸ್ತರಣೆ ಮಾಡಿ ಜೂನ್ 30ರವೆರೆಗೆ  ಕಾಲಾವಕಾಶ ನೀಡಲಾಗಿದೆ.


ಬೆಂಗಳೂರು (ಜೂನ್ 24): ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದೀಗ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಜೂನ್ 30ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮುಂದೂಡಲಾಗಿದೆ. ಪ್ರಶಸ್ತಿಗೆ ಅರ್ಹ ಶಿಕ್ಷಕರು ಅಥವಾ ಉಪನ್ಯಾಸಕರು ಅಥವಾ ಮುಖ್ಯಶಿಕ್ಷಕರು ಅಥವಾ ಪ್ರಾಂಶುಪಾಲರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿರುವುದರಿಂದ 2022ರ ಏಪ್ರಿಲ್‌ 30 ರವರೆಗೆ ಸೇವೆ ಸಲ್ಲಿಸಿ ನಿವೃತ್ತರಾಗಿರುವ ರಾಜ್ಯ ಸರ್ಕಾರದ ಮತ್ತು ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿನ ಅಥವಾ ಪದವಿ ಪೂರ್ವ ಕಾಲೇಜುಗಳಲ್ಲಿ ಕಾಯಕದಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ಅಥವಾ ಉಪನ್ಯಾಸಕರು ಅಥವಾ ಮುಖ್ಯ ಶಿಕ್ಷಕರು ಅಥವಾ ಪ್ರಾಂಶುಪಾಲರು ಹಾಗೂ ಕೇಂದ್ರ ಸರ್ಕಾರದ ಸಿಬಿಎಸ್‌ಸಿ ಹಾಗೂ ಸಿಐಎಸ್‌ಸಿಇ ಮಾನ್ಯತೆ ಪಡೆದ ಶಾಲೆಗಳ ಅಥವಾ ಪದವಿ ಪೂರ್ವ ಕಾಲೇಜುಗಳ ಕಾಯಂಗೊಂಡ ಮತ್ತು ಮನೆ ಪಾಠದಲ್ಲಿ ತೊಡಗಿಸಿಕೊಂಡಿರುವ ಶಿಕ್ಷಕರು ಉಪನ್ಯಾಸಕರು ಅಥವಾ ಮುಖ್ಯ ಶಿಕ್ಷಕರು ಅಥವಾ ಪ್ರಾಂಶುಪಾಲರು 2022ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು https://nationalawardstoteachers.education.gov.in/login.aspx ಅಂತರ್ಜಾಲ ತಾಣಕ್ಕೆ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ www.schooleducation.kar.nic.in ವೆಬ್‌ಸೈಟ್‌ ಮೂಲಕ ತಾವೇ ಸ್ವಯಂ ಆನ್‌ಲೈನ್‌ ಅರ್ಜಿಯನ್ನು ಜೂನ್‌ 30 ರವರೆಗೆ ಸಲ್ಲಿಸಬಹುದಾಗಿದ್ದು, ಸದರಿ ದಿನಾಂಕದೊಳಗೆ ಹೆಸರು ನೊಂದಾಯಿಸಿಕೊಂಡು ಅರ್ಜಿಯನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ  ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು (ಆಡಳಿತ) ಕಚೇರಿಗೆ ಸಲ್ಲಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Tap to resize

Latest Videos

ಆಘಾತ ತಂದ ಪಿ.ಯು ಫಲಿತಾಂಶ, ಚಿತ್ರದುರ್ಗದಲ್ಲಿ ಆತ್ಮಾವಲೋಕನ ಸಭೆ

ಗೌರವಧನ ಹೆಚ್ಚಳಕ್ಕೆ ಅತಿಥಿ  ಉಪನ್ಯಾಸಕರಿಂದ ಬೇಡಿಕೆ
ಸರ್ಕಾರಿ ಶಾಲಾ ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವಧನ ಹೆಚ್ಚಿಸಿರುವ ರೀತಿಯಲ್ಲೇ ತಮಗೂ ಗೌರವಧನ ಹೆಚ್ಚಿಸಬೇಕೆಂದು ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಸಂಘ ಸರ್ಕಾರವನ್ನು ಆಗ್ರಹಿಸಿದೆ. ಅತಿ ಕಡಿಮೆ ಸಂಭಾವನೆ ಇದ್ದ ಅತಿಥಿ ಶಿಕ್ಷಕರಿಗೆ ಗೌರವಧನವನ್ನು ಮಾಸಿಕ 10 ಸಾವಿರ ರು.ಗೆ ಹೆಚ್ಚಿಸಿರುವುದು ಸ್ವಾಗತಾರ್ಹ. ಆದರೆ ಪಿಯು ಅತಿಥಿ ಉಪನ್ಯಾಸಕರ ಹಾಲಿ ಸಂಭಾವನೆ ತಿಂಗಳಿಗೆ ಕೇವಲ 9 ಸಾವಿರ ರು. ಇದೆ. ಇದು ಈಗ ಅತಿಥಿ ಶಿಕ್ಷಕರ ಗೌರವ ಧನಕ್ಕಿಂತ ಕಡಿಮೆಯಾದಂತಾಗಿದೆ ಎಂದಿದೆ.

ಸರ್ಕಾರಿ ಶಾಲೆಗೆ ಅಡ್ಮಿಶನ್ ಆಗಿರುವ ಟಾಪ್ ಜಿಲ್ಲೆಯಲ್ಲಿ ಮಕ್ಕಳಿಗಿಲ್ಲ ತರಗತಿ ಕೊಠಡಿ!

ಪ್ರಸ್ತುತ ಬೆಲೆ ಏರಿಕೆಯಿಂದ ದುಬಾರಿ ಜೀವನ ನಡೆಸುವುದು ಕಷ್ಟವಾಗಿದೆ. ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅತಿಥಿ ಉಪನ್ಯಾಸಕರು ಕೂಡ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲೇ ಬರುತ್ತಾರೆ. ಆದರೆ, ಸರ್ಕಾರ ನಮ್ಮ ಮನವಿಯನ್ನು ಮಾತ್ರ ಕಡೆಗಣಿಸಿದೆ. ಬಹುತೇಕ ಅತಿಥಿ ಉಪನ್ಯಾಸಕರಿಗೆ ಕಳೆದ ಶೈಕ್ಷಣಿಕ ವರ್ಷದ ಮಾರ್ಚ್ ಮತ್ತು ಏಪ್ರಿಲ್‌ ತಿಂಗಳ ಗೌರವ ಧನವನ್ನು ಕೂಡ ಬಿಡುಗಡೆ ಮಾಡಿಲ್ಲ. ಕೂಡಲೇ ಬಾಕಿ ಇರುವ ಗೌರವಧನ ಬಿಡುಗಡೆ ಜೊತೆಗೆ ಸೂಕ್ತ ಮೊತ್ತದ ಗೌರವಧನ ಹೆಚ್ಚಳ ಮಾಡಬೇಕು. ಇಲ್ಲದಿದ್ದರೆ ಅನಿವಾರ್ಯವಾಗಿ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ರಾಜ್ಯ ಪಿಯು ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ಸಂಚಾಲಕ ರಾಜೇಶ್‌ ಭಟ್‌ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

click me!