ಮದರಸಾಗಳಲ್ಲಿ ಮುಸ್ಲಿಮೇತರ ವಿದ್ಯಾರ್ಥಿಗಳು: ತನಿಖೆಗೆ ಆದೇಶ

Published : Dec 10, 2022, 01:30 AM IST
ಮದರಸಾಗಳಲ್ಲಿ ಮುಸ್ಲಿಮೇತರ ವಿದ್ಯಾರ್ಥಿಗಳು: ತನಿಖೆಗೆ ಆದೇಶ

ಸಾರಾಂಶ

ಸರ್ಕಾರದಿಂದ ಮಾನ್ಯತೆ ಹಾಗೂ ಅನುದಾನ ಪಡೆದುಕೊಳ್ಳುತ್ತಿರುವ ಕೆಲವು ಮದರಸಾಗಳು ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿವೆ. ಅಲ್ಲದೇ ಕೆಲವು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಎಂಬುದು ಆಯೋಗದ ಗಮನಕ್ಕೆ ಬಂದಿದೆ.

ನವದೆಹಲಿ(ಡಿ.10): ಸರ್ಕಾರಿ ಅನುದಾನಿತ ಮತ್ತು ಮಾನ್ಯತೆ ಪಡೆದ ಮದರಸಾಗಳಲ್ಲಿ ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿರುವುದರ ಕುರಿತಾಗಿ ತನಿಖೆ ನಡೆಸುವಂತೆ ಎಲ್ಲಾ ರಾಜ್ಯಗಳಿಗೆ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್‌)ಸೂಚನೆ ನೀಡಿದೆ.

ಈ ಕುರಿತಾಗಿ ರಾಜ್ಯ ಸರ್ಕಾರಗಳ ಮುಖ್ಯ ಕಾರ‍್ಯದರ್ಶಿಗಳಿಗೆ ಪತ್ರ ಬರೆದಿರುವ ಎನ್‌ಸಿಪಿಸಿಆರ್‌ ಮುಖ್ಯಸ್ಥ ಪ್ರಿಯಾಂಕ್‌ ಕಾನ್ನೂಗೋ, ‘ಸರ್ಕಾರದಿಂದ ಮಾನ್ಯತೆ ಹಾಗೂ ಅನುದಾನ ಪಡೆದುಕೊಳ್ಳುತ್ತಿರುವ ಕೆಲವು ಮದರಸಾಗಳು ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿವೆ. ಅಲ್ಲದೇ ಕೆಲವು ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಎಂಬುದು ಆಯೋಗದ ಗಮನಕ್ಕೆ ಬಂದಿದೆ. ಇದು ಸಂವಿಧಾನ 28(3)ನೇ ವಿಧಿಯ ಸ್ಪಷ್ಟಉಲ್ಲಂಘನೆಯಾಗಿದೆ. ಈ ವಿಧಿಯ ಅನ್ವಯ ಪೋಷಕರ ಅನುಮತಿ ಇಲ್ಲದೇ ಮಕ್ಕಳನ್ನು ಧಾರ್ಮಿಕ ಭೋಧನೆಯಲ್ಲಿ ಬಳಸಿಕೊಳ್ಳುವುದು ಅಪರಾಧವಾಗಿದೆ’ ಎಂದು ತಿಳಿಸಲಾಗಿದೆ.

Uttar Pradesh: ಮದರಸಾ ವಿದ್ಯಾರ್ಥಿಗಳಿಗಿಲ್ಲ ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನ

ಮದರಸಾಗಳು ಮಕ್ಕಳಿಗೆ ಧಾರ್ಮಿಕ ಶಿಕ್ಷಣವನ್ನು ನೀಡಲು ಪ್ರಾಥಮಿಕವಾಗಿ ಜವಾಬ್ದಾರವಾಗಿರುತ್ತವೆ. ಸರ್ಕಾರದಿಂದ ಅನುದಾನ ಅಥವಾ ಮಾನ್ಯತೆ ಪಡೆದಿರುವುದರಿಂದ ಇವುಗಳು ಸ್ವಲ್ಪಮಟ್ಟಿಗೆ ಔಪಚಾರಿಕ ಶಿಕ್ಷಣವನ್ನೂ ನೀಡುತ್ತವೆ. ಹಾಗಾಗಿ ಇದನ್ನು ಗಮನದಲ್ಲಿಟ್ಟುಕೊಂಡು ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಮದರಸಾಗಳಗೆ ಭೌತಿಕವಾಗಿ ಭೇಟಿ ನೀಡಿ ತನಿಖೆ ನಡೆಸಬೇಕು ಎಂದು ಸೂಚಿಸಲಾಗಿದೆ.
 

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ