Breaking: ಪ್ರಶ್ನೆ ಪತ್ರಿಕೆ ಸೋರಿಕೆ ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

Published : May 12, 2026, 12:44 PM ISTUpdated : May 12, 2026, 01:00 PM IST
NEET UG 2026

ಸಾರಾಂಶ

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ, ಮೇ 3 ರಂದು ನಡೆದಿದ್ದ ನೀಟ್ ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಕೇಂದ್ರ ಸರ್ಕಾರವು ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮರು ಪರೀಕ್ಷೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ದೃಢಪಡಿಸಿದೆ.

 ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಮೇ 3 ರಂದು ದೇಶದಾದ್ಯಂತ ನಡೆದ NEET UG 2026 ಪರೀಕ್ಷೆಯನ್ನು ಅನ್ನು ರದ್ದುಗೊಳಿಸಲಾಗಿದೆ. ಪಾರದರ್ಶಕತೆ ಕಾಪಾಡಲು ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಮರು ಪರೀಕ್ಷೆ ನಡೆಸಲಾಗುವುದು ಈ ಸುದ್ದಿ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ಆತಂಕ ಹಾಗೂ ಚರ್ಚೆಗೆ ಕಾರಣವಾಗಿದೆ.

ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮತ್ತು ಸಂಬಂಧಿತ ಸಂಸ್ಥೆಗಳು ತಕ್ಷಣ ಕ್ರಮ ಕೈಗೊಂಡಿದ್ದು, ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದೆ. ಈ ಘಟನೆ ಭಾರತದ ಪ್ರಮುಖ ವೈದ್ಯಕೀಯ ಪ್ರವೇಶ ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮತ್ತೆ ಪರೀಕ್ಷೆ ನಡೆಸುವುದಾಗಿ ಘೋಷಣೆ

ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದ ಬೆನ್ನಲ್ಲೇ NTA ಪರೀಕ್ಷೆಯನ್ನು ಮತ್ತೆ ನಡೆಸುವುದಾಗಿ ದೃಢಪಡಿಸಿದೆ. ಹೊಸ ನೋಂದಣಿ ಅಗತ್ಯವಿಲ್ಲ ಮತ್ತು ಶುಲ್ಕವನ್ನು ಕೂಡ ಕಟ್ಟುವ ಅಗತ್ಯವಿಲ್ಲ ಎಂದಿದೆ. ಸೋರಿಕೆ ಆರೋಪದ ಹಿನ್ನೆಲೆಯಲ್ಲಿ 2026 ರ ನೀಟ್ ಯುಜಿಯನ್ನು ರದ್ದುಗೊಳಿಸಲಾಗಿದೆ ಎಂದು ಎನ್‌ಟಿಎ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಮೇ 3 ರಂದು ನಡೆದ ಪರೀಕ್ಷೆಯ ಪಾರದರ್ಶಕತೆ ಬಗ್ಗೆ ಕೇಂದ್ರ ಸಂಸ್ಥೆಗಳಿಂದ ಬಂದ ಮಾಹಿತಿಗಳು ಕಳವಳಕಾರಿಯಾಗಿದ್ದು, ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳು ಇದರಿಂದ ತೊಂದರೆಗೊಳಗಾಗಿರುವುದರಿಂದ, ಸರ್ಕಾರ ಈಗ ಮಧ್ಯಪ್ರವೇಶಿಸಿ, ಸಿಬಿಐ ತನಿಖೆಗೆ ಆದೇಶಿಸಿದೆ ಮತ್ತು ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಮರು ಸ್ಠಾಒಇಸಲು ಮತ್ತೊಮ್ಮೆ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ.

ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳುವುದು ಬಹುಮುಖ್ಯವಾಗಿದೆ ಎಂದು ಅದು ಹೇಳಿದ್ದು, ಹೀಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಮೇ 3 ರಂದು ದೇಶದಾದ್ಯಂತ ನಡೆಸಲಾದ NEET UG 2026 ಪರೀಕ್ಷೆಯನ್ನು ರದ್ದುಗೊಳಿಸಿದೆ ಮತ್ತು ಮರು ಪರೀಕ್ಷೆಗೆ ಹೊಸ ದಿನಾಂಕಗಳನ್ನು ಆದಷ್ಟು ಬೇಗ ಪ್ರಕಟಿಸಲಾಗುವುದು ಎಂದು ಘೋಷಿಸಿದೆ.

ಸರ್ಕಾರವು ಈ ವಿಷಯವನ್ನು ಸಮಗ್ರ ತನಿಖೆಗಾಗಿ ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸಲು ನಿರ್ಧರಿಸಿದೆ. ಅಭ್ಯರ್ಥಿಗಳಿಗೆ ಹೊಸ ನೋಂದಣಿ ಅಗತ್ಯವಿಲ್ಲ, ಯಾವುದೇ ಹೆಚ್ಚುವರಿ ಪರೀಕ್ಷಾ ಶುಲ್ಕವನ್ನು ವಿಧಿಸಲಾಗುವುದಿಲ್ಲ ಮತ್ತು ಅಸ್ತಿತ್ವದಲ್ಲಿರುವ ನೋಂದಣಿ ಡೇಟಾ ಮತ್ತು ಪರೀಕ್ಷಾ ಕೇಂದ್ರಗಳನ್ನು ಮುಂದುವರಿಸಲಾಗುವುದು ಎಂದು NTA ಸ್ಪಷ್ಟಪಡಿಸಿದೆ. ವಿದ್ಯಾರ್ಥಿಗಳು ಈಗಾಗಲೇ ಪಾವತಿಸಿದ ಶುಲ್ಕವನ್ನು ಮರುಪಾವತಿಸಲಾಗುವುದು ಎಂದು ಸಂಸ್ಥೆ ಹೇಳಿದೆ.

PREV
Read more Articles on
click me!

Recommended Stories

ಕಾಶ್ಮೀರ ವಿವಾದ, ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ 2 ವರ್ಷಗಳ ಕಾಲ ವಿದ್ಯಾರ್ಥಿ ಅಮಾನತು
ಮಣಿಪಾಲದ ಎಂಐಟಿಗೆ ವಿಶ್ವ ಗರಿ, CFA ಮಾನ್ಯತೆ ಪಡೆದ ದೇಶದ ಮೊದಲ ಎಂಜಿನಿಯರಿಂಗ್ ಸಂಸ್ಥೆ! ಇನ್ಮುಂದೆ ಜಾಗತಿಕ ಶಿಕ್ಷಣ