ಸಿಎಸ್ಆರ್ ಫಂಡ್ ಮೂಲಕ ಶಾಲೆಗಳ ಅಭಿವೃದ್ಧಿ: ಸಚಿವ ಬಂಗಾರಪ್ಪ

By Kannadaprabha News  |  First Published May 21, 2024, 6:30 AM IST

ಸುಮಾರು 2 ಲಕ್ಷ ವಿದ್ಯಾರ್ಥಿಗಳು ಮರು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅವರಲ್ಲಿ ಫೇಲಾದವರು, ಫಲಿತಾಂಶ ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯುವವರಿದ್ದಾರೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡಲು ವಾರ್ಷಿಕ ಪರೀಕ್ಷೆಯನ್ನು ತುಂಬಾ ಕಟ್ಟುನಿಟ್ಟುಗೊಳಿಸಲಾಗಿತ್ತು, ಅದಕ್ಕಾಗಿ ಹೆಚ್ಚುವರಿ ಅಂಕ ನೀಡಲಾಗಿತ್ತು. ಆದರೆ, ಮರು ಪರೀಕ್ಷೆಗಳಲ್ಲಿ ಗ್ರೇಸ್ ಅಂಕ ನೀಡುವುದಿಲ್ಲ: ಸಚಿವ ಮಧು ಬಂಗಾರಪ್ಪ 


ಉಡುಪಿ(ಮೇ.21):  ಎಸ್‌ಎಸ್‌ಎಲ್‌ಸಿ ಮರು ಪರೀಕ್ಷೆ-1 ಮತ್ತು 2ರಲ್ಲಿ ಹೆಚ್ಚುವರಿ ಅಂಕ (ಗ್ರೇಸ್ ಮಾರ್ಕ್ಸ್‌)ಗಳನ್ನು ನೀಡುವುದಿಲ್ಲ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸುಮಾರು 2 ಲಕ್ಷ ವಿದ್ಯಾರ್ಥಿಗಳು ಮರು ಪರೀಕ್ಷೆ ತೆಗೆದುಕೊಂಡಿದ್ದಾರೆ. ಅವರಲ್ಲಿ ಫೇಲಾದವರು, ಫಲಿತಾಂಶ ಉತ್ತಮಪಡಿಸಿಕೊಳ್ಳಲು ಪರೀಕ್ಷೆ ಬರೆಯುವವರಿದ್ದಾರೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡಲು ವಾರ್ಷಿಕ ಪರೀಕ್ಷೆಯನ್ನು ತುಂಬಾ ಕಟ್ಟುನಿಟ್ಟುಗೊಳಿಸಲಾಗಿತ್ತು, ಅದಕ್ಕಾಗಿ ಹೆಚ್ಚುವರಿ ಅಂಕ ನೀಡಲಾಗಿತ್ತು. ಆದರೆ, ಮರು ಪರೀಕ್ಷೆಗಳಲ್ಲಿ ಗ್ರೇಸ್ ಅಂಕ ನೀಡುವುದಿಲ್ಲ ಎಂದರು.

Tap to resize

Latest Videos

undefined

ಪ್ರೌಢಶಾಲಾ ಶಿಕ್ಷಕರ ಸಂಘದ ಬಿಗಿಪಟ್ಟಿಗೆ SSLC ವಿಶೇಷ ತರಗತಿ ಆದೇಶ ರದ್ದು: ಸಿಎಂ ಸಿದ್ದರಾಮಯ್ಯ!

ಈ ಬಾರಿಯ ವಾರ್ಷಿಕ ಪರೀಕ್ಷೆಯನ್ನು ತುಂಬಾ ಕಟ್ಟುನಿಟ್ಟುಗೊಳಿಸಿದ್ದರಿಂದ, ಪರೀಕ್ಷೆಯ ಪಾವಿತ್ರ್ಯತೆ ಉಳಿದು, ಉಡುಪಿ ಜಿಲ್ಲೆ ಮತ್ತೆ ಮೊದಲ ಸ್ಥಾನ ಗಳಿಸಲು ಸಾಧ್ಯವಾಯಿತು ಎಂದು ಸಚಿವರು ಹೇಳಿದರು.

ರಾಜ್ಯದ 3,000 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿದೆ. ಈ ವರ್ಷ 500 ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 3ರಿಂದ 6 ಶಾಲೆಗಳು ಮೇಲ್ದರ್ಜೆಗೇರಲಿವೆ. ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್ಆರ್ ಫಂಡ್) ಮೂಲಕ ಈ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಈ ನಿಧಿ ಸಂಗ್ರಹದ ನೇತೃತ್ವವನ್ನು ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ವಹಿಸಿಕೊಂಡಿದ್ದಾರೆ ಎಂದರು.

click me!