ಮುಧೋಳ: ಜನತಾ ಕರ್ಫ್ಯೂ ಇದ್ರೂ ತೆರೆದಿದ್ದ ಶಾಲೆಗೆ ನೋಟಿಸ್‌

By Kannadaprabha NewsFirst Published Apr 30, 2021, 3:18 PM IST
Highlights

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಬೆಳಕಿಗೆ ಬಂದ ಘಟನೆ| ಮುಧೋಳದ ಸ್ಯಾಮಿಯಲ್‌ ಇಂಗ್ಲಿಷ್‌ ಮಾಧ್ಯಮದ ಪ್ರೌಢಶಾಲೆಯಲ್ಲಿ ಶಾಲೆ ತೆರೆದು ಮಕ್ಕಳಿಗೆ ಪಾಠ ಮಾಡುತ್ತಿದ್ದ ಪ್ರಿನ್ಸಿಪಾಲ್‌ ಹಡಪದ| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮುಧೋಳ ತಹಸೀಲ್ದಾರ ಸಂಗಮೇಶ ಬಾಡಗಿ| 

ಬಾಗಲಕೋಟೆ(ಏ.30): ರಾಜ್ಯದಲ್ಲಿ ಜನತಾ ಕರ್ಫ್ಯೂ ಜಾರಿಗೆ ತಂದಿದ್ದರೂ ಶಾಲೆಯೊಂದರಲ್ಲಿ ನಿಯಮ ಉಲ್ಲಂಘಿಸಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಅಧಿಕಾರಿಗಳ ತಂಡ ಸಂಬಂಧಪಟ್ಟ ಶಾಲೆಗೆ ನೋಟಿಸ್‌ ನೀಡಿದೆ. 

ಮುಧೋಳದ ಸ್ಯಾಮಿಯಲ್‌ ಇಂಗ್ಲಿಷ್‌ ಮಾಧ್ಯಮದ ಪ್ರೌಢಶಾಲೆಯಲ್ಲಿ ಪ್ರಿನ್ಸಿಪಾಲ್‌ ಹಡಪದ ಎಂಬವರು ಗುರುವಾರ ಶಾಲೆಯನ್ನು ತೆರೆದು ಮಕ್ಕಳಿಗೆ ಪಾಠ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಆಧರಿಸಿ ಮುಧೋಳ ತಹಸೀಲ್ದಾರ ಸಂಗಮೇಶ ಬಾಡಗಿ ನೇತೃತ್ವದ ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿತು. 

CBSE ಕ್ಲಾಸ್ 12  ಪರೀಕ್ಷಾ ವೇಳಾಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್

ಆಗ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವುದು ಬೆಳಕಿಗೆ ಬಂತು. ಕೋವಿಡ್‌ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಆರೋಪದ ಮೇಲೆ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ನೋಟಿಸ್‌ ನೀಡಿ ಶಾಲೆಯನ್ನು ಸದ್ಯ ಬಂದ್‌ ಮಾಡಿಸಲಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!