ಭಗತ್ ಸಿಂಗ್ ಪಾಠ ಕೈಬಿಟ್ಟಿರುವುದು ನಾಚಿಕೆಗೇಡು Arvind Kejriwal ಕಿಡಿ

By Suvarna News  |  First Published May 18, 2022, 11:28 AM IST

ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್ ಕುರಿತ ಪಾಠಗಳನ್ನು ಕರ್ನಾಟಕದ ಶಾಲಾ ಪಠ್ಯಗಳಿಂದ ತೆಗೆದು ಹಾಕಲಾಗಿದೆ ಎಂಬ ವಿಚಾರ ಇದೀಗ ರಾಷ್ಟ್ರಮಟ್ಟದ ಚರ್ಚೆಗೆ ಗ್ರಾಸವಾಗಿದ್ದು,  ಕೇಜ್ರಿವಾಲ್ ಸೇರಿದಂತೆ ಹಲವು ಮಂದಿ ಕಿಡಿಕಾರಿದ್ದಾರೆ.


ಬೆಂಗಳೂರು (ಮೇ.18): ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್ (Bhagat Singh) ಕುರಿತ ಪಾಠಗಳನ್ನು ಕರ್ನಾಟಕದ ಶಾಲಾ ಪಠ್ಯಗಳಿಂದ ತೆಗೆದು ಹಾಕಲಾಗಿದೆ ಎಂಬ ವಿಚಾರ ಇದೀಗ ರಾಷ್ಟ್ರಮಟ್ಟದ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ನಿರ್ಧಾರ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್ (Arvind Kejriwal ), ಭಗತ್ ಸಿಂಗ್ ಅವರನ್ನು ಬಿಜೆಪಿಯು ಇಷ್ಟೊಂದು ದ್ವೇಷಿಸುವುದಕ್ಕೆ ಕಾರಣವೇನು? ಪಠ್ಯಪುಸ್ತಕದಿಂದ (Text book) ಅವರ ಪಠ್ಯವನ್ನು ತೆಗೆಯುವ ನಿರ್ಧಾರವು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಅವಮಾನವಾಗಿದೆ. ದೇಶವು ಇದನ್ನು ಸಹಿಸುವುದಿಲ್ಲ. ಬಿಜೆಪಿ (BJP) ಸರಕಾರವು ತನ್ನ ನಿರ್ಧಾರವನ್ನು ಹಿಂಪಡೆಯಲೇಬೇಕು ಎಂದು ಆಗ್ರಹಿಸಿದ್ದಾರೆ.

Tap to resize

Latest Videos

 

ਸ਼ਹੀਦ-ਏ-ਆਜ਼ਮ ਭਗਤ ਸਿੰਘ ਜੀ ਪ੍ਰਤੀ ਭਾਜਪਾ ਦੀ ਨਫ਼ਰਤ ਸਭ ਦੇ ਸਾਹਮਣੇ ਆ ਗਈ ਹੈ

ਛੋਟੀ ਉਮਰ ਵਿੱਚ ਦੇਸ਼ ਲਈ ਆਪਣੀ ਜਾਨ ਦੇ ਕੇ ਇਨਕਲਾਬ ਦੀ ਲੋਅ ਜਗਾਉਣ ਵਾਲੇ ਸਰਦਾਰ ਭਗਤ ਸਿੰਘ ਨੂੰ ਪੜ੍ਹ ਕੇ ਅੱਜ ਵੀ ਨੌਜਵਾਨਾਂ ਵਿੱਚ ਦੇਸ਼ ਭਗਤੀ ਦੀ ਲਹਿਰ ਦੌੜ ਜਾਂਦੀ ਹੈ

ਦੇਸ਼ ਭਗਤੀ ਦੇ ਇਸੇ ਜਜ਼ਬੇ ਦੇ ਡਰ ਤੋਂ ਭਾਜਪਾ ਦੀ ਰੂਹ ਕੰਬਦੀ ਹੈ https://t.co/QH4w764rcM

— Bhagwant Mann (@BhagwantMann)

ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ಕರ್ನಾಟಕ ಸರಕಾರದ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಭಗತ್ ಸಿಂಗ್ ವಿರುದ್ಧದ ಬಿಜೆಪಿಯ ದ್ವೇಷ ಹೆಚ್ಚಾಗುತ್ತಿದೆ. ಕಡಿಮೆ ವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ ವಿಚಾರಗಳು ಯುವಕರಲ್ಲಿ ದೇಶಭಕ್ತಿ ಹೆಚ್ಚಿಸುತ್ತದೆ. ಜನರಲ್ಲಿ ದೇಶಭಕ್ತಿ ಜಾಗೃತಗೊಳ್ಳುವುದರಿಂದ ಭಯಗೊಂಡು ಬಿಜೆಪಿ ಈ ರೀತಿ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

BENGALURU UDYOGA MELA 2022 ಮೇ 21 ರಂದು ಉದ್ಯೋಗ ಮೇಳ, ಆಸಕ್ತರು ಅರ್ಜಿ ಸಲ್ಲಿಸಿ

 ಕರ್ನಾಟಕ ಬಿಜೆಪಿ ಸರಕಾರವು ಶಾಲಾ ಪುಸ್ತಕಗಳಿಂದ ಭಗತ್ ಸಿಂಗ್ ಅವರ ಅಧ್ಯಾಯವನ್ನು ತೆಗೆದು ಹಾಕಿರುವುದು ನಾಚಿಕೆಗೇಡು. ಬಿಜೆಪಿಯು ಭಗತ್ ಸಿಂಗ್ (Punjab Chief Minister Bhagwant Mann) ರನ್ನು ದ್ವೇಷಿಸುತ್ತಿರುವುದು ಏಕೆ? ಬಿಜೆಪಿ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡುವ ಇಂತಹ ಅವಮಾನವನ್ನು ಭಾರತ ಸಹಿಸಿಕೊಳ್ಳುವುದಿಲ್ಲ. ಎಂದು ಎಎಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್  ಮಾಡಿ ಆಕ್ರೋಶ ಹೊರಹಾಕಿದೆ.

 

SHAMEFUL‼️

BJP's Karnataka govt REMOVES chapter on Bhagat Singh ji from School Books!

Why does BJP hate Shaheed-E-Azam Sardar Bhagat Singh ji so much?

BJP must take back this decision. India will not tolerate such humiliation of our Freedom Fighters!🇮🇳https://t.co/5kz9lbpOKc

— AAP (@AamAadmiParty)

ಈ ನಡುವೆ ಹತ್ತನೇ ತರಗತಿಯ ವಿದ್ಯಾರ್ಥಿಗಳ ಪರಿಷ್ಕೃತ ಕನ್ನಡ ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ.

CBSE Term 2 Result ಜೂನ್ ಅಂತ್ಯದೊಳಗೆ ಎರಡನೇ ಅವಧಿಯ ಫಲಿತಾಂಶ ಪ್ರಕಟ

ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಅಥವಾ ಆರ್‌ಎಸ್‌ಎಸ್ ಬಗ್ಗೆ ಏನೂ ಇಲ್ಲ, ಆದರೆ ಜನರಿಗೆ, ವಿಶೇಷವಾಗಿ ಯುವಕರಿಗೆ ಸ್ಫೂರ್ತಿಯಾಗಬೇಕಾದ ಅವರ ಭಾಷಣ ಮಾತ್ರ ಇದೆ, ಈ ಬಗ್ಗೆ ಆಕ್ಷೇಪಣೆ ಎತ್ತಿರುವವರು ಪಠ್ಯಪುಸ್ತಕವನ್ನು ಪರಿಶೀಲಿಸಿಲ್ಲ ಎಂದು ಹೇಳಿದ್ದಾರೆ.

click me!