
ಬೆಂಗಳೂರು(ಮೇ.9): ಸಿಇಟಿ ಬರೆಯಲು ಇಚ್ಚಿಸುವ ಅಭ್ಯರ್ಥಿಗಳಿಗೆ ಸಂತಸದ ವಿಚಾರವೊಂದಿದೆ. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಮುಂತಾದ ಕೋರ್ಸುಗಳ ಪ್ರವೇಶಕ್ಕೆ ಸಿಇಟಿ-2023ಕ್ಕೆ ನೊಂದಣಿ ಹಾಗು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ಹಾಗು ಅಂತಿಮ ಅವಕಾಶ ನೀಡಲಾಗಿದೆ. ಸಿಇಟಿ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಮತ್ತೊಂದು ಅವಕಾಶ ನೀಡಲಾಗಿದೆ. ಮೇ 11ರ ಬೆಳಿಗ್ಗೆ 8 ಗಂಟೆಯಿಂದ ಮೇ 13ರ ಬೆಳಿಗ್ಗೆ 11 ಗಂಟೆಯವರೆಗೆ ಮತ್ತು ಶುಲ್ಕ ಪಾವತಿಸಲು ಸಂಜೆ 6ಗಂಟೆವರೆಗೂ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.
ಈ ಮೂಲಕ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಬಿ.ಎಸ್ಸಿ (ನರ್ಸಿಂಗ್) ಮುಂತಾದ ಕೋರ್ಸುಗಳಿಗೆ 2023ರಲ್ಲಿ ಪ್ರವೇಶಾವಕಾಶ ಬಯಸುವ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ. ಆಸಕ್ತ ವಿದ್ಯಾರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ kea.kar.nic.in ನಲ್ಲಿ ಅರ್ಜಿ ಸಲ್ಲಿಸುವ ವಿಧಾನ ಮಾಹಿತಿ ಪಡೆಯಬಹುದು.
ನೀಟ್ ಪರೀಕ್ಷೆ ವೇಳೆ ಒಳ ಉಡುಪು ಪರಿಶೀಲಿಸಿದ ಅಧಿಕಾರಿಗಳು: ಬ್ರಾ ಧರಿಸದೆ
2023ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸುಗಳ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಪ್ರವೇಶಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಕಷ್ಟು ಅವಕಾಶಗಳನ್ನು ನೀಡಲಾಗಿತ್ತು.
PU SUPPLEMENTARY EXAM: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಆದಾಗ್ಯೂ, ಕೆಲವು ಪೋಷಕರು, ಹಾಗು ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಸಿಇಟಿ-2023ಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕೊನೆಯ ಹಾಗು ಅಂತಿಮ ಅವಕಾಶವನ್ನು ನೀಡಿದ್ದು, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವಟರಿನರಿ, ಫಾರ್ಮಸಿ, ಬಿಎಸ್ (ನರ್ಸಿಂಗ್) ಮುಂತಾದ ಕೋರ್ಸುಗಳ ಪ್ರವೇಶಕ್ಕೆ ಇಲ್ಲಿಯವರೆಗೆ ಸಿಇಟಿ-2023ಕ್ಕೆ ನೊಂದಣಿ ಮಾಡದಿರುವ ಅಥವಾ ನೊಂದಣಿ ಮಾಡಿ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ದಿನಾಂಕ ಮೇ. 11 ಬೆಳಿಗ್ಗೆ 8.00 ರಿಂದ ಮೇ 13 ರ ಬೆಳಗ್ಗೆ 11 ರವರೆಗೆ ಆರ್ಜಿ ಸಲ್ಲಿಸಲು ಹಾಗು ಮೇ.13ರ ಸಂಜೆ 5.00 ರೊಳಗೆ ಶುಲ್ಕವನ್ನು ಪಾವತಿಸಲು ಪ್ರಾಧಿಕಾರದ ವೆಬ್ ಸೈಟ್ kea.kar.nic.in ನಲ್ಲಿ ಅರ್ಜಿ ಸಲ್ಲಿಸುವ ವಿಧಾನ ಹಾಗು ಇತರ ವಿವರಗಳ ಮಾಹಿತಿಯನ್ನು ಪಡೆಯಬಹುದಾಗಿದೆ. ಈ ಮೇಲಿನ ದಿನಾಂಕಗಳಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸ ಬಹುದಾಗಿದೆ. ಸಿಇಟಿ-2023ಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಕಾರಣಕ್ಕೂ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗುವುದಿಲ್ಲ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.