ಸಿಇಟಿ ಪರೀಕ್ಷೆಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನ

By Suvarna News  |  First Published Jun 14, 2021, 9:31 PM IST

ಸಿಇಟಿ ಪರೀಕ್ಷೆಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನಕ್ಕೆ ಸುತ್ತೋಲೆ
ವೃತ್ತಿಪರ ಕೋರ್ಸ್ ಗಳ ಆಯ್ಕೆಗಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ


ಬೆಂಗಳೂರು, (ಜೂನ್.14): ವೃತ್ತಿಪರ ಕೋರ್ಸ್ ಗಳ ಆಯ್ಕೆಗಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) 2021ಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಾಮಾನ್ಯ ಪ್ರವೇಶ ಪರೀಕ್ಷೆ- 2021 (ಸಿಇಟಿ) ಬರೆಯಲು ಅರ್ಹ ವಿದ್ಯಾರ್ಥಿಗಳು ಆನ್​ಲೈನ್  ಮೂಲಕ ಅರ್ಜಿ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಆದೇಶದಂತೆ ಇಂಜಿನಿಯರಿಂಗ್, ತಂತ್ರಜ್ಞಾನ, ಯೋಗ, ನ್ಯಾಚುರೋಪತಿ, ಬಿ ಫಾರ್ಮ, 2ನೇ ವರ್ಷದ ಬಿ ಫಾರ್ಮ, ಫಾರ್ಮಾ ಡಿ, ಕೃಷಿ ವಿಜ್ಞಾನ ಕೋರ್ಸ್​ಗಳ ಮತ್ತು ವೆಟರ್ನರಿ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಯುವ ಪರೀಕ್ಷೆಯ ದಿನಾಂಕ ಈಗಾಗಲೇ ನಿಗದಿಯಾಗಿದೆ. 

Latest Videos

undefined

ಸಿಇಟಿ ಪರೀಕ್ಷೆ: PUC ಸೈನ್ಸ್ ವಿದ್ಯಾರ್ಥಿಗಳಿಗೆ ಉಚಿತ ಆನ್ ಲೈನ್ ತರಬೇತಿ

ಸಾಮಾನ್ಯ ಪ್ರವೇಶ ಪರೀಕ್ಷೆ 2021, ಮುಂಬರುವ ಆಗಸ್ಟ್ 28 ಮತ್ತು ಆಗಸ್ಟ್ 29ರಂದು ನಡೆಯಲಿರುವ ಬಗ್ಗೆ ದಿನಾಂಕ ಘೋಷಿಸಲಾಗಿದೆ. ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ನಿಗದಿತ ಲಿಂಕ್ ಕ್ಲಿಕ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ, ಅಭ್ಯರ್ಥಿಯ ಅರ್ಹತೆ, ಶೈಕ್ಷಣಿಕ ಅರ್ಹತೆಗಳನ್ನು ಇಲಾಖೆಯ ವೆಬ್​ಸೈಟ್​ನಲ್ಲಿ ನೀಡಲಾಗಿದೆ. ಈ ಎಲ್ಲಾ ವಿವರಗಳನ್ನು ಒಳಗೊಂಡ 'ಯುಜಿಸಿಇಟಿ- 2021 ಮಾಹಿತಿ ಪುಸ್ತಕ' ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗಿದೆ. ಅದನ್ನು ಅಭ್ಯರ್ಥಿಗಳು ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ. 

*  ಅರ್ಜಿ ಸಲ್ಲಿಸಲು ಜು.10  ಮತ್ತು  ಶುಲ್ಕ ಪಾವತಿಗೆ ಜು.13ರಂದು ಕೊನೆ ದಿನ
* ಸ್ಪೆಷಲ್ ಕ್ಯಾಟಗರಿ ಒರಿಜಿನಲ್ ಸರ್ಟಿಫಿಕೇಟ್ಸ್ ಸಲ್ಲಿಸಲು ಜು.14 ರಿಂದ ಜು.20ರವರೆಗೆ ಅವಕಾಶ
* ಅಪ್ಲಿಕೇಷನ್ ತಿದ್ದುಪಡಿ ಮಾಡಲು ಜು.19 ರಿಂದ ಜು.22ರವರೆಗೆ ಅವಕಾಶ
* ಶುಲ್ಕ ಕಟ್ಟಿದವರಿಗೆ ಮಾತ್ರ ಅಪ್ಲಿಕೇಶನ್ ತಿದ್ದುಪಡಿಗೆ ಅವಕಾಶ
* ಆ.13ರ ಬೆಳಗ್ಗೆ 11 ಗಂಟೆಯಿಂದ ಅಡ್ಮಿಷನ್ ಟಿಕೆಟ್‌ ಡೌನ್‌ ಲೋಡ್ ಮಾಡಿಕೊಳ್ಳಬಹುದು
* ಮೆಡಿಕಲ್, ಡೆಂಟಲ್, ಆಯುರ್ವೇದ, ಯುನಾನಿ, ಹೋಮಿಯೋಪತಿ ಕೋರ್ಸ್ ಗಳ ಪ್ರವೇಶಕ್ಕೆ ನೀಟ್ ಪರೀಕ್ಷೆಯಲ್ಲಿ ಪಾಸಾದವರಿಗೆ ಮಾತ್ರ ಅವಕಾಶ 
* ಆರ್ಕಿಟೆಕ್ಚರ್ ಕೋರ್ಸ್ ಅಡ್ಮಿಷನ್ ಗೆ NATA ಅಥವಾ JWEE ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ಅರ್ಜಿ ಸಲ್ಲಿಕೆಗೆ ಮತ್ತು ಹೆಚ್ಚಿನ ವಿವರಗಳಿಗೆ ಈ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ: https://kea.kar.nic.in/

click me!