ದ್ವಿತೀಯ ಪಿಯುಸಿ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಅವಕಾಶ ಇದೆ. ಹೀಗಾಗಿ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಲಹೆ ನೀಡಿದೆ.
ಬೆಂಗಳೂರು (ಏ.13): ದ್ವಿತೀಯ ಪಿಯುಸಿ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ಅವಕಾಶ ಇದೆ. ಹೀಗಾಗಿ ಅರ್ಜಿ ಸಲ್ಲಿಸಿರುವ ಎಲ್ಲ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಲಹೆ ನೀಡಿದೆ. ಮೊದಲನೇ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂದು ಸಿಇಟಿ ಪರೀಕ್ಷೆ ಬರೆಯದೆ ಕೈಚೆಲ್ಲುವುದು ಸರಿಯಲ್ಲ.
ಉಳಿದೆರೆಡು ಪರೀಕ್ಷೆಗಳಲ್ಲಿ ಫಲಿತಾಂಶ ಉತ್ತಮಪಡಿಸಿಕೊಳ್ಳಬಹುದು. ಸಿಇಟಿ ಬರೆದರೆ ಮಾತ್ರ ಪಿಯುಸಿಯ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೂ ಸಿಇಟಿ ರ್‍ಯಾಂಕ್ ಕೊಟ್ಟು, ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಮಾಡಬಹುದು. ಕಳೆದ ವರ್ಷ ಅನೇಕರಿಗೆ ರ್‍ಯಾಂಕ್ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿತ್ತು ಎಂದು ಸಿಇಟಿ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸಲಹೆ ನೀಡಿದ್ದಾರೆ. ಈ ವರ್ಷ 3.3 ಲಕ್ಷ ಅಭ್ಯರ್ಥಿಗಳು ಸಿಇಟಿ ಶುಲ್ಕ ಪಾವತಿಸಿದ್ದು, 2.85 ಲಕ್ಷ ಪ್ರವೇಶ ಪತ್ರಗಳು ಡೌನ್ ಲೋಡ್ ಆಗಿವೆ.
ರಾಜ್ಯಮಟ್ಟದಲ್ಲಿ ರ್‍ಯಾಂಕ್ ಪಡೆದರೆ ₹1 ಲಕ್ಷ ಬಹುಮಾನ: ಯಾವುದೇ ಜಿಲ್ಲೆಗೆ ತೆರಳಿದರೂ ಉತ್ತಮ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸಾಧನೆ ಮಾಡುತ್ತಾರೆ ಎಂಬುದಕ್ಕೆ ಮಾನಸ ಶಿಕ್ಷಣ ಸಂಸ್ಥೆಯ ಮೂರು ವಿಭಾಗಗಳ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿರುವುದೇ ಸಾಕ್ಷಿ ಎಂದು ಕಾರ್ಯದರ್ಶಿ ಡಾ.ದತ್ತೇಶ ಹೇಳಿದರು. ಸಂಸ್ಥೆಯಲ್ಲಿ ಜಿಲ್ಲಾ ಹಂತದಲ್ಲಿ ಉತ್ತಮ ಅಂಕಗಳಿಸಿ ಸಾಧನೆಗೈದ ಮಹೇಶ್, ಅಮೖತ, ಅಶ್ವಿನಿ, ಪ್ರಿಯ, ಯತಿನ್ ಗೌಡ ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ್‍ಯಾಂಕ್ ಗಳಿಸಿದರೆ ₹1 ಲಕ್ಷ ಬಹುಮಾನವನ್ನು ಸಂಸ್ಥೆ ವತಿಯಿಂದ ನೀಡುವುದಾಗಿ ಹೇಳಿದರು.
ಗದಗ ಗ್ರಾಮೀಣ ವಿವಿಗೆ ಸಾರಥಿಯೂ ಇಲ್ಲ, ದುಡ್ಡೂ ಇಲ್ಲ: ಸರ್ಕಾರದಿಂದ ಅಲ್ಪಸ್ವಲ್ಪ ಅನುದಾನ
ಕಡಿಮೆ ಅಂಕಗಳಿಸಿದ ಮಕ್ಕಳು ಸಹಾ ಮುಂದಿನ ದಿನಗಳಲ್ಲಿ ಸಾಧನೆಗೈಯುವಂತಾಗಬೇಕು ಎಂದರು. ಸಂಸ್ಥೆಯ ಸಂಯೋಜಕ ಡಾ.ಚನ್ನಶೆಟ್ಟಿ ಮಾತನಾಡಿ, ಶ್ರಮಪಟ್ಟು ಅಧ್ಯಯನ ಮಾಡಿ ಸಾಧನೆಗೈಯುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ, ಮುಂದೆಯೂ ಸಹಾ ವಿದ್ಯಾರ್ಥಿಗಳು ಇನ್ನು ಹೆಚ್ಚಿನ ಕಠಿಣ ಪರಿಶ್ರಮದ ಮೂಲಕ ಸಾಧನೆ ಮಾಡಿ ಸಂಸ್ಥೆಗೆ, ಪೋಷಕರಿಗೆ ಕೀರ್ತಿ ತನ್ನಿ ಎಂದರು. ಈ ವೇಳೆ ಸಂಸ್ಥೆಯ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷೆ ರೂಪ ದತ್ತೇಶ್, ಸಂಯೋಜನಾಧಿಕಾರಿ ಚಂದ್ರಶೇಖರ್, ಪ್ರಾಂಶುಪಾಲ ಕೃಷ್ಣೆಗೌಡ, ಡಾ.ಧನಂಜಯ್, ಡಾ.ಜಗಧೀಶ್, ಶಂಕರ್, ಗಿರಿಜಾಲಕ್ಷ್ಮಿ. ಅಕ್ಷರ ಅಕಾಡೆಮಿ ರಾಜಕುಮಾರ್ ಇನ್ನಿತರರಿದ್ದರು.