ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಇಷ್ಟು ದಿನಗಳ ಕಾಲ ಮುಚ್ಚಲ್ಪಟ್ಟಿದ್ದ ಪದವಿ, ಇಂಜಿನಿಯರಿಂಗ್ ದೇರಿದಂತೆ ವಿವಿಧ ತರಗತಿಗಳು ಆರಂಭವಾಗಿದ್ದು ಇದೀಗ ಪರೀಕ್ಷಾ ಸಮಯ ಕೂಡ ನಿಗದಿಯಾಗಿದೆ.
ಬೆಂಗಳೂರು (ಜ.20): ಮುಂದಿನ ಮಾರ್ಚ್-ಏಪ್ರಿಲ್‌ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲೇ ವೇಳಾಪಟ್ಟಿಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್‌್ಥ ನಾರಾಯಣ ಹೇಳಿದ್ದಾರೆ. ಯಾವುದೇ ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ ಮಾಡದೇ ಆಫ್‌ಲೈನ್‌ನಲ್ಲೇ ನಡೆಸಲಾಗುವುದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ಪರೀಕ್ಷೆ ಬರೆಯಬೇಕಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ವಿಜಯನಗರದ ಆದಿಚುಂಚನರಿಗಿ ಶಾಖಾ ಮಠದಲ್ಲಿ ಮಂಗಳವಾರ ಬಾಲಗಂಗಾಧರನಾಥ ಸ್ವಾಮೀಜಿ ಅವರ 76ನೇ ಜಯಂತ್ಯುತ್ಸವ ಹಾಗೂ 13ನೇ ವರ್ಷದ ಸಂಸ್ಥಾಪನಾ ದಿನಾಚಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಿಮ ವರ್ಷದ ಪದವಿ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾಚ್‌ರ್‍ನಲ್ಲಿ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಏಪ್ರಿಲ್‌ನಲ್ಲಿ ಪರೀಕ್ಷೆ ನಡೆಸಲಾಗುವುದು. ಶೀಘ್ರ ವೇಳಾಪಟ್ಟಿಯನ್ನೂ ಪ್ರಕಟಿಸಲಾಗುವುದು ಎಂದರು.
ವಿದ್ಯಾರ್ಥಿಗಳ ಪ್ರವೇಶಾತಿ: ಮುಕ್ತ ವಿವಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಡಿಸಿಎಂ ...
ದುಬಾರಿ ಶುಲ್ಕ ಅನಿವಾರ್ಯ: ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಶಿಕ್ಷಣ ಸಂಸ್ಥೆಗಳು ದುಬಾರಿ ಶುಲ್ಕ ಪಡೆಯುತ್ತಿವೆ. ಶಿಕ್ಷಣ ವ್ಯಾಪಾರೀಕರಣಗೊಂಡಿದೆ ಎಂಬ ಅಪವಾದ ಹೆಚ್ಚಾಗಿ ಕೇಳಿಬರುತ್ತಿದೆ. ಆದರೆ, ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತಹ ಉತ್ಕೃಷ್ಟಶಿಕ್ಷಣ ನೀಡಲು ಪ್ರಸ್ತುತ ಶುಲ್ಕ ಪ್ರಮಾಣ ಸೂಕ್ತವಾಗಿಯೇ ಇದೆ. ನನ್ನ ಈ ಹೇಳಿಕೆಗೆ ಟೀಕೆಗಳು ವ್ಯಕ್ತವಾಗಬಹುದು. ವೈಯಕ್ತಿಕವಾಗಿ ನಾನೂ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿರುವುದರಿಂದ ಶುಲ್ಕ ಹೆಚ್ಚಳ ಅನಿವಾರ್ಯ ಎಂದು ಹೇಳಿದರು.
ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪ್ರಕಾಶನಾಥ ಸ್ವಾಮೀಜಿ, ಸಚಿವ ಸೋಮಣ್ಣ, ಸಿ.ಪಿ.ಯೋಗೇಶ್ವರ್ ಹಾಗೂ ಬಿಜಿಎಸ್ ಹಾಗೂ ಎಸ್‌ಜೆಬಿ ಶಿಕ್ಷಣ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.