ಕಳಪೆ ಸಾಧನೆ ಮಾಡಿದ ಉಪನ್ಯಾಸಕ, ಶಿಕ್ಷಕರಿಗೆ ಬಿಬಿಎಂಪಿ ಗೇಟ್ ಪಾಸ್!

Published : May 20, 2023, 09:49 PM IST
ಕಳಪೆ ಸಾಧನೆ ಮಾಡಿದ ಉಪನ್ಯಾಸಕ, ಶಿಕ್ಷಕರಿಗೆ ಬಿಬಿಎಂಪಿ ಗೇಟ್ ಪಾಸ್!

ಸಾರಾಂಶ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಇಳಿಕೆ ಆಗಿರುವುದರಿಂದ ಬೋಧನಾ ಸಾಮರ್ಥ್ಯದಲ್ಲಿ ಕೊರತೆ ಇರುವ ಶಿಕ್ಷಕರನ್ನು  ತೆಗೆದು ಹಾಕಲು ಚಿಂತಿಸಲಾಗಿದೆ.

ಬೆಂಗಳೂರು (ಮೇ.20): ಬಿಬಿಎಂಪಿ ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಇಳಿಕೆ ಆಗಿರುವುದರಿಂದ ಬೋಧನಾ ಸಾಮರ್ಥ್ಯದಲ್ಲಿ ಕೊರತೆ ಇರುವ ಗುತ್ತಿಗೆ ಆಧಾರದ ಶಿಕ್ಷಕರು ಮತ್ತು ಉಪನ್ಯಾಸಕರನ್ನು ತೆಗೆದು ಹೊಸಬರನ್ನು ನೇಮಕ ಮಾಡಿಕೊಳ್ಳಲು ಪಾಲಿಕೆ ನಿರ್ಧರಿಸಿದೆ.

ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ 728 ಶಿಕ್ಷಕರು ಮತ್ತು ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಖಾಸಗಿ ಸಂಸ್ಥೆ ಮೂಲಕ 11 ತಿಂಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳ ಲಾಗಿತ್ತು. ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.68 ರಷ್ಟುಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.64 ರಷ್ಟುಫಲಿತಾಂಶ ಬಂದಿದೆ. ಕಡಿಮೆ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಶಿಕ್ಷಣದ ಗುಣಮಟ್ಟಹೆಚ್ಚಿಸುವ ಉದ್ದೇಶದಿಂದ ಬಿಬಿಎಂಪಿ ಈ ನಿರ್ಧಾರಕ್ಕೆ ಬಂದಿದೆ.

ಶಿಕ್ಷಕರ ಅಹರ್ತಾ ಪರೀಕ್ಷೆಯಲ್ಲಿ (ಟಿಇಟಿ) ಉತ್ತೀರ್‍ಣರಾಗಲು ಬಿಬಿಎಂಪಿಯು ಅವಕಾಶ ನೀಡಿತ್ತು. ಈವರೆಗೆ ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದವರು ಹಾಗೂ ವಿಷಯವಾರು ಬೋಧನೆಯಲ್ಲಿ ಕಳಪೆ ಸಾಧನೆ ಮಾಡಿದರನ್ನು ತೆಗೆದು ಹಾಕಲು ಬಿಬಿಎಂಪಿ ತೀರ್ಮಾನಿಸಿದೆ.

ಬಣ್ಣ ನಿಮ್ಮದು ಕುಂಚ ನಮ್ಮದು 'ಅಕ್ಕ ಅನು ಬಳಗ'ದವರ ಕಾರ್ಯ ಶ್ಲಾಘನೀಯ

ಈ ಕುರಿತು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಬಿಬಿಎಂಪಿಯಲ್ಲಿ 163 ಶಾಲಾ ಕಾಲೇಜುಗಳಿವೆ. ಕೊರೋನಾ ನಂತರ ಬಿಬಿಎಂಪಿ ಶಾಲಾ-ಕಾಲೇಜುಗಳಿಗೆ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣ ನೀಡುವುದು ಬಿಬಿಎಂಪಿಯ ಜವಾಬ್ದಾರಿ ಆಗಿದೆ. ಶಾಲಾ ಕಾಲೇಜುಗಳ ಶಿಕ್ಷಣದ ಗುಣಮಟ್ಟಹೆಚ್ಚಾಗಬೇಕಾದರೆ, ಚೆನ್ನಾಗಿ ಪಾಠ ಮಾಡುವ ಶಿಕ್ಷಕರ ಅಗತ್ಯವಿದೆ. ಟಿಇಟಿಯಲ್ಲಿ ಉತ್ತೀರ್ಣರಾದ ಶಿಕ್ಷಕರನ್ನು ಸೇವೆಯಿಂದ ತೆಗೆಯುವಂತೆ ಸೂಚನೆ ನೀಡಲಾಗಿದೆ. ವಲಯ ಮಟ್ಟದಲ್ಲೇ ಅರ್ಹತೆ ಪರಿಶೀಲಸಲು ವಲಯ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

TOPPER STORY: ಪ್ರೀತಿ ಪ್ರೇಮವೆಂದು ಪೋಷಕರನ್ನು ತೊರೆದಾಕೆ ಇಂದು ಟಾಪರ್!

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ, ಉಚಿತ ಬಸ್: ಮೇ 23ರಿಂದ ಜೂನ್‌ 3ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ

PREV
Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ