ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್‌ಗಳನ್ನು ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ ರೂ.35,000 ವರೆಗೆ ಪ್ರೋತ್ಸಾಹಧನ ನೀಡುವುದಾಗಿ ಪ್ರಕಟಣೆ ಹೊರಡಿಸಿದೆ.
ಬೆಂಗಳೂರು(ಜ.3): ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ವಿವಿಧ ಕೋರ್ಸ್‌ಗಳನ್ನು ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ ರೂ.35,000 ವರೆಗೆ ಪ್ರೋತ್ಸಾಹಧನ ನೀಡುವುದಾಗಿ ಪ್ರಕಟಣೆ ಹೊರಡಿಸಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಪ್ರೋತ್ಸಾಹಧನಕ್ಕಾಗಿ ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸ ಬಹುದಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿ ಜನವರಿ 30,2022 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https://sw.kar.nic.in/index.aspx ಗೆ ಭೇಟಿ ನೀಡಿ.
ಅರ್ಜಿಗಳನ್ನು ಸಲ್ಲಿಸಲು ಕೊನೆ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ. ಆನ್‌ಲೈನ್ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು.ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಇರುವ ಸಂದರ್ಭದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ / ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.
undefined
ಯಾವ್ಯಾವ ಕೋರ್ಸ್ ವಿದ್ಯಾರ್ಥಿಗಳಿಗೆ ಎಷ್ಟು ಪ್ರೋತ್ಸಾಹಧನ?
ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ : 20,000
ಪದವಿ : 25,000
ಯಾವುದೇ ಸ್ನಾತಕೋತ್ತರ ಪದವಿ : 30,000
ಅಗ್ರಿಕಲ್ಚರ್, ಇಂಜಿನಿಯರ್, ವೆಟರಿನರಿ, ಮೆಡಿಷನ್: 35,000
KARNATAKA SCHOOLS NAMED AMBEDKAR: ರಾಜ್ಯದ ಶಾಲೆಗಳಿಗೆ ಡಾ. ಬಿಆರ್ ಅಂಬೇಡ್ಕರ್ ಹೆಸರು
ಅರ್ಜಿ ಸಲ್ಲಿಕೆ : ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sw.kar.nic.in/index.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಅಗತ್ಯ ದಾಖಲೆಗಳಾದ ಅಂಕಪಟ್ಟಿ, ಪಾಸ್ ಸರ್ಟಿಫಿಕೇಟ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಫೋಟೋ ಇತರೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕಿರುತ್ತದೆ. ಈ ಮೂಲಕ ಜನವರಿ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆನ್‌ಲೈನ್ ಅರ್ಜಿಕೆಗೆ ಈ ಲಿಂಕ್ ಕ್ಲಿಕ್ ಮಾಡಿ: https://sw.kar.nic.in/swprizemoney/WebPages/validation.aspx
ಸಲ್ಲಿಕೆಯಾದ ಅರ್ಜಿ ಡೌನ್ ಲೋಡ್ ಮಾಡಿಕೊಳ್ಳಲು :
ಅಭ್ಯರ್ಥಿಗಳು ನೀವು ನಿಮ್ಮ ಕೋರ್ಸ್ ನಲ್ಲಿ ಉತ್ತೀರ್ಣರಾದ ವರ್ಷವನ್ನು ಆಯ್ಕೆ ಮಾಡಿ. ತದನಂತರ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ. ಅಂತಿಮವಾಗಿ ಡೌನ್‌ಲೋಡ್ ಮಾಡಿಕೊಳ್ಳಿ.
ಅರ್ಜಿ ಮರುಮುದ್ರಣಕ್ಕೆ ಈ ಲಿಂಕ್ ಕ್ಲಿಕ್ ಮಾಡಿ
Karnataka schools self defence training: ರಾಜ್ಯದ ವಿದ್ಯಾರ್ಥಿನಿಯರಿಗೆ 'ಸ್ವಯಂ ರಕ್ಷಣಾ' ಕೌಶಲ್ಯ ತರಬೇತಿ
ಗಮನಿಸಿ, ಪಿಹೆಚ್‌ಡಿ ಫೆಲೋಶಿಪ್ ಅರ್ಜಿ ಅವಧಿ ವಿಸ್ತರಣೆ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಇಲಾಖೆಯಿಂದ ನೀಡಲಾಗುವ ಪಿಹೆಚ್‌ಡಿ ಫೆಲೋಶಿಪ್ ಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. 2021-22ನೇ ಸಾಲಿನ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರಾತಿಗಾಗಿ ಹಿಂದುಳಿದ ವರ್ಗಗಳ ಇಲಾಖೆಯಿಂದ ಅರ್ಜಿಗಳನ್ನು ಜನವರಿ 16, 2022 ರವರೆಗೆ ಸಲ್ಲಿಸಬಹುದಾಗಿದೆ. ಈ ಹಿಂದೆ ಡಿಸೆಂಬರ್ 30 ಕೊನೆಯ ದಿನವಾಗಿತ್ತು. 2021-22ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ಪ್ರಸಕ್ತ ಸಾಲಿನಲ್ಲಿ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ/ಫೆಲೋಶಿಪ್ ಕೊಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ: 8050770004 ಮತ್ತು ಅಧಿಕೃತ ವೆಬ್‌ಸೈಟ್: https://bcwd.karnataka.gov.in/ ಗೆ ಭೇಟಿ ನೀಡಬಹುದು.