ಇಂದು ಮಧ್ಯಾಹ್ನ 1.30ಕ್ಕೆ ಪಿಯು ಫಲಿತಾಂಶ ಪ್ರಕಟ: ಈ ವೆಬ್‌ಸೈಟ್‌ನಲ್ಲಿ ಲಭ್ಯ

Published : Apr 08, 2025, 06:36 AM ISTUpdated : Apr 08, 2025, 06:43 AM IST
ಇಂದು ಮಧ್ಯಾಹ್ನ 1.30ಕ್ಕೆ ಪಿಯು ಫಲಿತಾಂಶ ಪ್ರಕಟ: ಈ ವೆಬ್‌ಸೈಟ್‌ನಲ್ಲಿ ಲಭ್ಯ

ಸಾರಾಂಶ

ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಮಧ್ಯಾಹ್ನ ಪ್ರಕಟಗೊಳ್ಳಲಿದೆ. 

ಬೆಂಗಳೂರು (ಏ.08): ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಮಧ್ಯಾಹ್ನ ಪ್ರಕಟಗೊಳ್ಳಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ 12.30ಕ್ಕೆ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. 

ನಂತರ 1.30ರ ವೇಳೆಗೆ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ (https://karresults.nic.in) ತಮ್ಮ ಫಲಿತಾಂಶ ವೀಕ್ಷಿಸಬಹುದು ಎಂದು ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾರ್ಚ್‌ 1ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಗೆ ಒಟ್ಟು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. 

5 ಸಾವಿರಕ್ಕೆ ಪಿಯುಸಿ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ ಮಾರಾಟ: ಮೂವರ ಬಂಧನ

ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು. ಏಪ್ರಿಲ್‌ 3 ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಣೆಗೆ ಮಂಡಳಿ ಅಣಿಯಾಗಿದೆ.

PREV
Read more Articles on
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ