ದ್ವಿತೀಯ ಪಿಯುಸಿ ಎರಡು ಸಬ್ಜೆಕ್ಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ!

Published : Mar 16, 2023, 09:31 AM ISTUpdated : Mar 16, 2023, 09:37 AM IST
ದ್ವಿತೀಯ ಪಿಯುಸಿ ಎರಡು ಸಬ್ಜೆಕ್ಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ!

ಸಾರಾಂಶ

ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಾಲೂಕಿನ ಬೆಳಂಬಾರದಲ್ಲಿ ನಡೆದಿದೆ.

ಅಂಕೋಲಾ (ಮಾ.16) : ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಾಲೂಕಿನ ಬೆಳಂಬಾರದಲ್ಲಿ ನಡೆದಿದೆ.

ಬೆಳಂಬಾರ ತಾಳೇಬೈಲಿನ ನಿವಾಸಿ ಶಿಲ್ಪಾ ಗೌಡ(17) ಮೃತ ದುರ್ದೈವಿ(Student shilpa gowda suicide). ಇವಳು ಅಂಕೋಲಾ(Ankola)ದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಮಾ. 9 ರಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎರಡು ವಿಷಯಗಳ ಪರೀಕ್ಷೆ ಎದುರಿಸಿದ್ದಳು.

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬುಧವಾರ ಬೆಳಗ್ಗೆ ಪಾಲಕರು ಎಂದಿನಂತೆ ಕೂಲಿ ಕೆಲಸಕ್ಕೆ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ ವಿಷ ಸೇವಿಸಿದ್ದಾಳೆ. ಕೆಲ ಹೊತ್ತಿನ ಬಳಿಕ ವಾಂತಿ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಂಕೋಲಾದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಬರುತ್ತಿರುವ ವೇಳೆ ಮೃತಳಾಗಿದ್ದಾಳೆ. ಈ ವರೆಗೂ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಯು ಪೊಲೀಸ್‌ ತನಿಖೆಯಿಂದ ತಿಳಿದು ಬರಬೇಕಿದೆ. ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವಾಹಿತ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ.

ಒನ್‌ ಡೇ ಸಿಇಓ‌ಗಳಾದ ಕೊಪ್ಪಳದ ಗ್ರಾಮೀಣ ವಿದ್ಯಾರ್ಥಿಗಳು

ಪದ್ಮನಿ ಆತ್ಮಹತ್ಯೆ ಮಾಡಿಕೊಂಡವರು. ಪದ್ಮನಿ ವಿವಾಹಿತೆಯಾಗಿದ್ದು, ಪತಿಯನ್ನು ತೊರೆದು ತಂದೆ ಮನೆಯಲ್ಲಿ ವಾಸವಿದ್ದರು. ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ.

ಮೃತರು ತಂದೆ, ಪುತ್ರಿಯನ್ನು ಅಗಲಿದ್ದಾರೆ.

PREV
Read more Articles on
click me!

Recommended Stories

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ
SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ