ಪಿಯು ಫಲಿತಾಂಶ ತೃಪ್ತಿಕರವಾಗದಿದ್ದಲ್ಲಿ ಆಗಸ್ಟ್‌ನಲ್ಲಿ ಪರೀಕ್ಷೆ

Kannadaprabha News   | Asianet News
Published : Jul 21, 2021, 08:09 AM IST
ಪಿಯು ಫಲಿತಾಂಶ ತೃಪ್ತಿಕರವಾಗದಿದ್ದಲ್ಲಿ ಆಗಸ್ಟ್‌ನಲ್ಲಿ ಪರೀಕ್ಷೆ

ಸಾರಾಂಶ

ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ತಮ್ಮ  ಫಲಿತಾಂಶ ರದ್ದುಪಡಿಸಿಕೊಂಡಿದ್ದರೆ ಅವರಿಗೆ ಆಗಸ್ಟ್‌ನಲ್ಲಿ ಪರೀಕ್ಷೆ

ಬೆಂಗಳೂರು (ಜು.21): ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ತಮ್ಮ  ಫಲಿತಾಂಶ ರದ್ದುಪಡಿಸಿಕೊಂಡಿದ್ದರೆ ಅವರಿಗೆ ಆಗಸ್ಟ್‌ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ. 

ಅಂತಹ ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಿ ಅರ್ಜಿ ಸಲ್ಲಿಸಬಹುದು. ಆ ಅರ್ಜಿಗಳನ್ನು ಪ್ರಾಂಶುಪಾಲರು ಸ್ಟೂಡೆಂಟ್ಸ್ ಅಚೀವ್ಮೆಂಟ್ ಟ್ರ್ಯಾಕಿಂಗ್‌ ಪೋರ್ಟಲ್‌ನಲ್ಲಿ ದಾಖಲಿಸಲು ಜು.30 ಕೊನೆಯ ದಿನವಾಗಿದೆ.  ಜು.31ರೊಳಗೆ  ಅರ್ಜಿಗಳನ್ನು ಕಡ್ಡಾಯವಾಗಿ ತನ್ನ ಜಿಲ್ಲಾ ಉಪ ನಿರ್ದೇಶಕರು ಆಗಸ್ಟ್‌ 2 ರೊಳಗೆ ಇಲಾಖೆಯ ಕೇಂದ್ರ ಕಚೇರಿಗೆ ಕಳುಹಿಸಬೇಕು. 

ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟಿಸಿದ ಸಚಿವ, ಎಲ್ಲ ವಿದ್ಯಾರ್ಥಿಗಳೂ ಪಾಸ್

ಪಿಯು ಪರೀಕ್ಷಾ ಶುಲ್ಕ ಮರುಪಾವತಿ ಇಲ್ಲ : 2020 - 21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳಿಗೆ  ಹಿಂತಿರುಗಿಸುವ ಯಾವುದೇ ಚಿಂತನೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌ ಸುರೇಶ್ ಕುಮಾರ್ ಸ್ವಷ್ಟಪಡಿಸಿದ್ದಾರೆ. 

PREV
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ