ಚಿಕ್ಕಮಗಳೂರು ಜಿಲ್ಲೆಯಲ್ಲಿ 21 ಸರ್ಕಾರಿ ಶಾಲೆಗಳಿಗೆ ಬೀಗ, ಸರ್ಕಾರದ ವಿರುದ್ಧ ಜನಾಕ್ರೋಶ

By Girish GoudarFirst Published Oct 31, 2023, 10:00 PM IST
Highlights

2023ರ ಈ ಒಂದೇ ವರ್ಷದಲ್ಲಿ ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 21 ಕನ್ನಡ ಶಾಲೆಗಳು ಬಂದ್ ಆಗಿವೆ. ಸರ್ಕಾರ ಮಧ್ಯಾಹ್ನ ಬಿಸಿಯೂಟ, ಮೊಟ್ಟೆ-ಹಾಲು, ಶೂ-ಸಾಕ್ಸ್ ಅಂತೆಲ್ಲಾ ಹತ್ತಾರು ಯೋಜನೆಗಳನ್ನ ಜಾರಿಗೆ ತಂದ್ರು ಹೆತ್ತವರು ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರ್ಸೋಕೆ ಮೂಗು ಮುರಿಯುತ್ತಿದ್ದಾರೆ. ಇದರಿಂದ ಕಾಫಿನಾಡಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳ್ತಿರೋ ಪ್ರಮಾಣ ಕೂಡ ಹೆಚ್ಚಿದೆ.

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಅ.31):  ಪೋಷಕರ ಇಂಗ್ಲೀಷ್ ವ್ಯಾಮೋಹವೋ, ಖಾಸಗಿ ಶಾಲೆಗಳಿಗೆ ಸರ್ಕಾರಿ ಶಾಲೆಗಳು ಪೈಪೋಟಿ ನಿಡೋದಕ್ಕೆ ಸಾಧ್ಯವಾಗ್ತಿಲ್ವೋ ಅಥವಾ ಸರ್ಕಾರ ಕೇಳ್ದೋರ್ಗೆಲ್ಲಾ ಖಾಸಗಿ ಶಾಲೆಗಳಿಗೆ ಅನುಮತಿ ನಿಡ್ತಿರೋದ್ರಿಂದ್ಲೋ ಗೊತ್ತಿಲ್ಲ. ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳ್ತಾನೆ ಇದೆ. ಮಕ್ಕಳಿಗೆ ಬಿಸಿಯೂಟ, ಹಾಲು, ಮೊಟ್ಟೆ, ಸೈಕಲ್ ಅಂತೆಲ್ಲಾ ವಿವಿಧ ಯೋಜನೆಗಳನ್ನ ಜಾರಿಗೆ ತಂದ್ರೂ ಕನ್ನಡ ಶಾಲೆಗಳನ್ನ ಉಳಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಕಾಫಿನಾಡಲ್ಲಿ 2023ರ ಒಂದೇ ವರ್ಷ 21 ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ. 

ಒಂದೇ ವರ್ಷದಲ್ಲೇ 21 ಸರ್ಕಾರಿ ಶಾಲೆಗಳು ಕ್ಲೋಸ್  : 

ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಓದ್ಬೇಕು ಅನ್ನೋ ಪೋಷಕರ ಬಯಕೆಯೋ ಇಲ್ಲ, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡೋದಕ್ಕೆ ಆಗ್ತಿಲ್ವೋ ಅಥವಾ ಸರ್ಕಾರ ಕೇಳ್ದೋರ್ಗೆಲ್ಲಾ ಖಾಸಗಿ ಶಾಲೆಗೆ ಅನುಮತಿ ನೀಡ್ತಿರೋದ್ರಿಂದ್ಲೋ ಏನೋ. 2023ರ ಈ ಒಂದೇ ವರ್ಷದಲ್ಲಿ ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 21 ಕನ್ನಡ ಶಾಲೆಗಳು ಬಂದ್ ಆಗಿವೆ. ಸರ್ಕಾರ ಮಧ್ಯಾಹ್ನ ಬಿಸಿಯೂಟ, ಮೊಟ್ಟೆ-ಹಾಲು, ಶೂ-ಸಾಕ್ಸ್ ಅಂತೆಲ್ಲಾ ಹತ್ತಾರು ಯೋಜನೆಗಳನ್ನ ಜಾರಿಗೆ ತಂದ್ರು ಹೆತ್ತವರು ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರ್ಸೋಕೆ ಮೂಗು ಮುರಿಯುತ್ತಿದ್ದಾರೆ. ಇದರಿಂದ ಕಾಫಿನಾಡಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳ್ತಿರೋ ಪ್ರಮಾಣ ಕೂಡ ಹೆಚ್ಚಿದೆ.
ಸರ್ಕಾರ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡ್ತಿರೋದ್ರಿಂದಲೇ ಸರ್ಕಾರಿ ಶಾಲೆಗಳಿಗೆ ಈ ಸ್ಥಿತಿ ಬಂದಿದೆ ಅಂತ ಸ್ಥಳಿಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಜನರಿಗೆ ಸರ್ಕಾರದ ಎಲ್ಲಾ ಸೌಲಭ್ಯ ಬೇಕು. ಅಕ್ಕಿ, ಬಸ್ಸು, ಕರೆಂಟ್, ದುಡ್ಡು ಎಲ್ಲಾ ಬೇಕು. ಆದ್ರೆ, ಸರ್ಕಾರಿ ಶಾಲೆ ಮಾತ್ರ ಬೇಡ. ಖಾಸಗಿ ಹಾಗೂ ಇಂಗ್ಲೀಷ್ ಮೀಡಿಯಂನಲ್ಲಿ ಮಕ್ಕಳು ಓದುತ್ತಿದ್ದಾರೆ ಅಂದ್ರೆ ಹೆತ್ತವರಿಗೆ ಡಿಗ್ನಿಟಿ. ಪೋಷಕರು ತಮ್ಮ ಡಿಗ್ನಿಟಿಗಾಗಿ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿಸ್ತಿದ್ದಾರೆ ಎಂದು ಸ್ಥಳೀಯರಾದ ಹೇಮಂತ್ ಪೋಷಕರ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.

CHIKKAMAGALURU: ಕೋರ್ಟಿಗೆ ಹಾಜರಾಗದ ರೌಡಿ ಶೀಟರ್‌ ಪೂರ್ಣೇಶ್‌ಗೆ ಪೊಲೀಸ್ ಗುಂಡೇಟು!

ಕಳೆದ ಏಳೆಂಟು ವರ್ಷದಲ್ಲಿ 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಬೀಗ : 

ಸರ್ಕಾರ ಸರ್ಕಾರಿ ಶಾಲೆಗಳನ್ನ ಉಳಿಸೋಕೆ ನಾನಾ ಯೋಜನೆಗಳನ್ನ ಜಾರಿಗೆ ತಂದು ಪ್ರಯತ್ನಪಟ್ಟರೂ ಪೋಷಕರು ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸ್ತಿಲ್ಲ. ಜೊತೆಗೆ ಸರ್ಕಾರ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡ್ತಿರೋದ್ರಿಂದ ಸರ್ಕಾರಿ ಶಾಲೆಗಳು ಅವನತಿಯ ಅಂಚಿನಲ್ಲಿವೆ. ಕಳೆದ ಏಳೆಂಟು ವರ್ಷದಲ್ಲಿ 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಶಾಶ್ವತ ಬೀಗ ಬಿದ್ದಿದೆ. ನೂರಾರು ಮಕ್ಕಳಿಗೆ ವಿದ್ಯಾಧಾನ ಮಾಡಿದ ಸರ್ಕಾರಿ ಶಾಲೆಗಳಿಂದು ಲೂಟಿಯೊಡೆದ ಕೋಟೆಯಂತಾಗಿದೆ. ಸರ್ಕಾರ ಕನ್ನಡ ಶಾಲೆಗಳಿಗೆ ನಾನಾ ಸೌಲಭ್ಯ ನೀಡ್ತಿದೆ. ಆದ್ರೆ, ಅದರ ಬೆನ್ನಲ್ಲೇ ಖಾಸಗಿ ಶಾಲೆಗಳಿಗೆ ಎಗ್ಗಿಲ್ಲದೆ ಅನುಮತಿ ನೀಡ್ತಿರೋದ್ರಿಂದ ಪೋಷಕರಿಗೆ ಇಂಗ್ಲಿಷ್ ಮೇಲಿರೋ ವ್ಯಾಮೋಹದಿಂದ ಮಕ್ಕಳನ್ನ ಖಾಸಗಿ ಶಾಲೆಗಳಿಗೆ ಸೇರಿಸ್ತಿದ್ದಾರೆ. ಈ ಮಧ್ಯೆ ವಸತಿ ಶಾಲೆಗಳ ಆರಂಭ ಕೂಡ ಸರ್ಕಾರಿ ಶಾಲೆಗೆ ಮರಣಶಾಸನ ಬರೆದಿದೆ. 

ಒಟ್ಟಾರೆ, ಒಂದೆಡೆ ಸರ್ಕಾರಿ ಶಾಲೆಗೆ ವಿವಿಧ ಯೋಜನೆಗಳನ್ನ ಜಾರಿಗೆ ತರೋದು. ಮತ್ತೊಂದೆಡೆ ಖಾಸಗಿ ಶಾಲೆಗಳಿಗೆ ಅನುಮತಿ ನೀಡೋದು. ಸರ್ಕಾರಿ ಶಾಲೆ ಹಾಗೂ ಖಾಸಗಿ ಶಾಲೆಗಳ ನಡುವೆ ಕಣ್ಣಾಮುಚ್ಚಾಲೆ ಆಟವಾಡ್ತಿರೋ ಸರ್ಕಾರಗಳ ನಡೆಯಿಂದಲೇ ಸರ್ಕಾರಿ ಶಾಲೆಗಳು ಬೀಗ ಕಾಣ್ತಿವೆಯಾ ಎಂದು ಸಾರ್ವಜನಿಕರಿಗೆ ಸರ್ಕಾರದ ಮೇಲೆ ಅನುಮಾನ ಮೂಡ್ತಿದೆ. ಇನ್ನಾದ್ರು ಸರ್ಕಾರ, ಸರ್ಕಾರಿ ಕನ್ನಡ ಶಾಲೆಗಳನ್ನ ಉಳಿಸೋ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತಾ ಕಾದುನೋಡ್ಬೇಕು. 

click me!