ಪಿಯುಸಿ ಪಾಸ್‌ ಆಗುವುದು ಇನ್ನಷ್ಟು ಸುಲಭ: ಈ ವರ್ಷದಿಂದ ಬಹು ಆಯ್ಕೆ ಪ್ರಶ್ನೆಗಳ ಸೇರ್ಪಡೆ

By Sathish Kumar KH  |  First Published Mar 5, 2023, 12:48 PM IST

ಈ ವರ್ಷದಿಂದ ದ್ವಿತೀಯ ಪಿಯು ಪರೀಕ್ಷೆಗೂ ಬಹು ಆಯ್ಕೆ ಮಾದರಿಯ ಪರೀಕ್ಷೆಗಳನ್ನು ಸೇರ್ಪಡೆ ಮಾಡಲಾಗಿದ್ದು, ಈ ಬಗ್ಗೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.


ಬೆಂಗಳೂರು (ಮಾ.05): ರಾಜ್ಯದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುತ್ತಿದೆ. ಈ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಜಾರಿ ಮಾಡಿದಂತೆ ಈ ಬಾರಿ ದ್ವಿತೀಯ ಪಿಯು ಪರೀಕ್ಷೆಗೂ ಬಹು ಆಯ್ಕೆ ಪ್ರಶ್ನೆಗಳನ್ನು ಸೇರ್ಪಡೆ ಮಾಡಲಾಗಿದೆ. ಈ ಬಗ್ಗೆ ಮಾದರಿ ಪ್ರಶ್ನೆ ಪತ್ರಿಕೆಯಲ್ಲಿ ಸೇರ್ಪಡೆ ಮಾಡಲಾಗಿದೆ.

ಹೌದು ಈ ವರ್ಷದಿಂದ ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗಲು ಅನುಕೂಲವಾಗಲೆಂಬ ಉದ್ದೇಶದಿಂದ ಮಾದರಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿದೆ. ಆದರೆ, ಪರೀಕ್ಷೆಯ ಭಯದಿಂದ ಅನುತ್ತೀರ್ಣರಾಗುವ ವಿದ್ಯಾರ್ಥಿಗಳು ಸಂಖ್ಯೆಯನ್ಜು ತಗ್ಗಿಸುವುದು ಹಾಗೂ ಎಲ್ಲ ವಿದ್ಯಾರ್ಥಿಗಳು ಸುಲಭವಾಗಿ ಉತ್ತೀರ್ಣರಾಗುವಂತೆ ಮಾಡುವ ಉದ್ದೇಶದಿಂದ ಪ್ರಶ್ನೆಪತ್ರಿಕೆ ಮಾದರಿಯನ್ನು ಬದಲಾಯಿಸಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಮಾದರಿ ಪ್ರಶ್ನೆ ಪತ್ರಿಕೆ ಹಾಗೂ ಈಗ ಬದಲಾವಣೆ ಆಗಿರುವ ಪ್ರಶ್ನೆ ಪತ್ರಿಕೆ ಮಾದರಿಯನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

Tap to resize

Latest Videos

ಪಿಯು ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ: ಸಚಿವ ನಾಗೇಶ್

ಮಾ.9 ರಿಂದ ದ್ವಿತೀಯ ಪಿಯು ಪರೀಕ್ಷೆ: ಮಾರ್ಚ್​​ 9 ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯಲ್ಲಾಗಿರುವ ಬದಲಾವಣೆ ಬಗ್ಗೆ ವೆಬ್‌ಸೈಟ್‌ನಲ್ಲಿ ಪೂರ್ಣ ವಿವರ ನೀಡಲಾಗಿದೆ. ಇಷ್ಟು ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಿದ್ದ ಪ್ರಶ್ನೆ ಪತ್ರಿಕೆಗೂ ಈ ಬಾರಿ ಪ್ರಶ್ನೆ ಪತ್ರಿಕೆಗೂ ಇರುವ ಮಾದರಿ ಬದಲಿಸಲಾಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಇನ್ನಷ್ಟು ಸಹಕಾರಿ ಆಗಲಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ಇದೊಂದು ಸಂತಸದ ಸುದ್ದಿ ಎಂದೇ ಹೇಳಬಹುದು. ಬಹು ಆಯ್ಕೆ ಪ್ರಶ್ನೆಗಳಿದ್ದರೆ ಹೆಚ್ಚು ಅಂಕ ತೆಗೆಯಲು ಸಾಧ್ಯವಾಗುತ್ತದೆ. ಆ ಕಾರಣದಿಂದ ಈ ಮಾದರಿಯನ್ನು ಮಾಡಲಾಗಿದೆ ಎಂದು ಮಂಡಳಿಯ ಸದಸ್ಯರು  ತಿಳಿಸಿದ್ದಾರೆ.

10 ಬಹು ಆಯ್ಕೆ ಪ್ರಶ್ನೆಗಳ ಸೇರ್ಪಡೆ:  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2023ರ ಮಾರ್ಚ್‌ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆಪತ್ರಿಕೆಯನ್ನು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. 10 ಅಂಕಗಳಿಗೆ ಬಹು ಆಯ್ಕೆ ಮಾದರಿ (MCQ) ಪ್ರಶ್ನೆಪತ್ರಿಕೆ ನೀಡಿದೆ. ಮಾರ್ಚ್​ನಲ್ಲಿ ನಡೆಯಲಿರುವ ಪರೀಕ್ಷೆಗೆ ಇದು ತುಂಬಾ ಸಹಾಯಕ ಆಗಲಿದ್ದು ಈ ಬಾರಿ ಬಹು ಆಯ್ಕೆಯ ಪ್ರಶ್ನೆಗಳೂ ಸಹ ಪ್ರಶ್ನೆ ಪತ್ರಿಕೆಯಲ್ಲಿ ಇರಲಿವೆ. ಯಾವ ಮಾದರಿಯಲ್ಲಿ ಎಷ್ಟು ಅಂಕಗಳಲ್ಲಿ ಪ್ರಶ್ನೆ ಬರುತ್ತದೆ ಎನ್ನುವ ಕುರಿತು ಇಲ್ಲಿ ಸರಿಯಾದ ರೀತಿಯ ಮಾದರಿಯನ್ನು ನೀಡಲಾಗಿದೆ.

ಮಾ.9 ರಿಂದ ದ್ವಿತೀಯ ಪಿಯು ಪರೀಕ್ಷೆ : ಅಂತಿಮ ವೇಳಾಪಟ್ಟಿ ಪ್ರಕಟ

100 ಅಂಕಕ್ಕೆ ಪ್ರಶ್ನೆಗಳ ಮಾದರಿ ಹೀಗಿದೆ: 
ಪ್ರಶ್ನೆ ಪತ್ರಿಕೆಯಲ್ಲಿ 10 ಅಂಕಕ್ಕೆ ಬಹು ಆಯ್ಕೆ ಪ್ರಶ್ನೆಗಳು, 10 ಅಂಕ ಒಮದು ವಾಕ್ಯದ ಪ್ರಶ್ನೆಗಳು ಹೊರತುಪಡಿಸಿ ವಿವಿಧ ವಿಭಾಗದಲ್ಲಿ ಕ್ರಮವಾಗಿ 2 ಅಂಕದ 11 ಪ್ರಶ್ನೆಗಳನ್ನು ನೀಡಿದೆ. 3 ಅಂಕದ 4 ಪ್ರಶ್ನೆಗಳು, 4 ಅಂಕದ 6 ಪ್ರಶ್ನೆಗಳು, 5 ಮತ್ತು 6 ಅಂಕದ 2 ಪ್ರಶ್ನೆಗಳನ್ನು ನೀಡಲಾಗಿದೆ. ಒಟ್ಟಾರೆ 80 ಅಂಕಗಳಿಗೆ ವಿಸ್ತ್ರತವಾಗಿ ವಾಕ್ಯ ರೂಪದಲ್ಲಿ ಉತ್ತರಿಸುವ ಪ್ರಶ್ನೆಗಳಿವೆ. ಇದರಲ್ಲಿ ಸಂದಂರ್ಭ ಸೂಚಿಸಿ ಬರೆಯುವುದು, ಸ್ವಾರಸ್ಯ ರೂಪದಲ್ಲಿ ಉತ್ತರ, ಪದ್ಯದ ಭಾವಾರ್ಥ, ಭಾಷಾಭ್ಯಾಸ, ಪ್ರಬಂಧ, ಪತ್ರಲೇಖನ ಮತ್ತು ಗಾದೆ ಮಾತು ವಿಸ್ತರಿಸಿ ಬರೆಯುವ ಪ್ರಶ್ನೆಗಳನ್ನು ನೀಡಲಿದೆ.

ಮಾದರಿ ಪ್ರಶ್ನೆ ಪತ್ರಿಕೆ ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಜಾಲತಾಣದಿಂದ ನೀವು ಪ್ರಶ್ನೆ ಪತ್ರಿಕೆಯನ್ನೂ ಸಹ ಡೌನ್ಲೋಡ್​ ಮಾಡಿಕೊಳ್ಳಬಹುದು. ಅಲ್ಲಿ ಈ ಬಾರಿಯ ಹೊಸ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಒಂದು ಅಂಕದ 20 ಪ್ರಶ್ನೆಗಳಿದ್ದರೆ ಅಲ್ಲೇ ವಿದ್ಯಾರ್ಥಿಗಳು ಪಾಸ್​ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಫೇಲಾಗುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಸಲುವಾಗಿ ಈ ಈ ರೀತಿ ಪ್ರಶ್ನೆ ಪತ್ರಿಕೆ ರೆಡಿ ಮಾಡಲಾಗಿದೆ. ಉತ್ತರ ಗೊತ್ತಿಲ್ಲದ ಎಷ್ಟೋ ಜನರು ನಾಲ್ಕು ಆಯ್ಕೆ ಇರುವುದರಿಂದ ಸುಲಭವಾಗಿ ಅಂದಾಜಿಸಿಯಾದರೂ ಉತ್ತರಿಸಬಹುದು. ಒಟ್ಟಿನಲ್ಲಿ ಈ ಬಾರಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ರೀತಿಯಲ್ಲಿ ಹಲವಾರು ಪ್ರಯತ್ನಗಳು ನಡೆಯುತ್ತಿವೆ.

click me!