ಪಠ್ಯ ಪರಿಷ್ಕರಣೆಗೆ ರಾಹುಲ್‌ ಗಾಂಧಿ ವಿರೋಧ: ಕನ್ನಡದಲ್ಲೇ ಸರಣಿ ಟ್ವೀಟ್‌!

By Govindaraj S  |  First Published Jun 5, 2022, 3:00 AM IST

ಕರ್ನಾಟಕದಲ್ಲಿ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮಾಡಿದ್ದ ಶಿಫಾರಸು ಆಧರಿಸಿ ಮಾಡಲಾಗಿರುವ ಪಠ್ಯಪುಸ್ತಕ ಪರಿಷ್ಕರಣೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತೀವ್ರವಾಗಿ ವಿರೋಧಿಸಿದ್ದಾರೆ. 


ನವದೆಹಲಿ (ಜೂ.05): ಕರ್ನಾಟಕದಲ್ಲಿ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮಾಡಿದ್ದ ಶಿಫಾರಸು ಆಧರಿಸಿ ಮಾಡಲಾಗಿರುವ ಪಠ್ಯಪುಸ್ತಕ ಪರಿಷ್ಕರಣೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತೀವ್ರವಾಗಿ ವಿರೋಧಿಸಿದ್ದಾರೆ. ‘ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನು ಮಕ್ಕಳ ಮೇಲೆ ಹೇರಲು ಕಾಂಗ್ರೆಸ್‌ ಬಿಡುವುದಿಲ್ಲ’ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಶನಿವಾರ ಕನ್ನಡದಲ್ಲೇ ಸರಣಿ ಟ್ವೀಟ್‌ ಮಾಡಿರುವ ರಾಹುಲ್‌, ‘ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವ ಪಾಲಿಸಿಕೊಂಡು ಬಂದಿದ್ದಾರೆ.

ಆದರೆ, ಡಾ.ಬಿ.ಆರ್‌. ಅಂಬೇಡ್ಕರ್‌, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ಧವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ‘ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನು ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ’ ಎಂದು ರೋಹಿತ್‌ ಚಕ್ರತೀರ್ಥ ಹೆಸರೆತ್ತದೇ ಪರೋಕ್ಷವಾಗಿ ಕಿಡಿಕಾರಿದ್ದಾರೆ.

Tap to resize

Latest Videos

ಪಠ್ಯ ಪರಿಷ್ಕರಣೆ ವಿವಾದ: 2ನೇ ಪತ್ರ ಬರೆದ ದೇವನೂರು ಮಹಾದೇವ

‘ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನು, ಲೇಖಕರನ್ನು ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ. ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನು ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನು ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್‌ ಬಿಡುವುದಿಲ್ಲ. ಕನ್ನಡದ ನಾಡು, ನುಡಿ ಮತ್ತು ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್‌ ಪಕ್ಷ ಸದಾ ಬದ್ಧವಾಗಿದೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
 

ಕರ್ನಾಟಕದ ಜನ ಸದಾ ಸಾಮಾಜಿಕ ನ್ಯಾಯ, ಮಹನೀಯರ ಏಕತೆ ಹಾಗೂ ಮಾನವತಾವಾದದ ತತ್ವಗಳನ್ನ ಪಾಲಿಸಿಕೊಂಡು ಬಂದಿದ್ದಾರೆ.

Dr BR ಅಂಬೇಡ್ಕರ್, ಬುದ್ಧ-ಬಸವಣ್ಣ, ನಾರಾಯಣ ಗುರು, ಕುವೆಂಪು ಮುಂತಾದ ಅನೇಕ ಮಹನೀಯರ ಜೀವನಕ್ಕೆ ಹಾಗೂ ಕರ್ನಾಟಕದ ಅಸ್ಮಿತೆಗೆ ವಿರುದ್ದವಾದ ಸಂದೇಶಗಳನ್ನು ಪಠ್ಯ ಪುಸ್ತಕದ ಮೂಲಕ ಮಕ್ಕಳಿಗೆ ಕಲಿಸಲು ಬಿಜೆಪಿ ಹೊರಟಿದೆ.

— Rahul Gandhi (@RahulGandhi)

 

ಕರ್ನಾಟಕದ ಮಕ್ಕಳ ಭವಿಷ್ಯದ ನಿರ್ಧಾರವನ್ನ ಅರ್ಹತೆಯಿಲ್ಲದ ಕೈಗಳಿಗೆ ವಹಿಸಲಾಗಿದೆ.

ಸಾಮಾಜಿಕ ನ್ಯಾಯ, ಪ್ರಾದೇಶಿಕತೆ ಮತ್ತು ಲಿಂಗ ಸಮಾನತೆ ಸಾರುವ ಪಾಠಗಳನ್ನ, ಲೇಖಕರನ್ನ ಹೊರಗಿಟ್ಟು ಮಕ್ಕಳಿಗೆ ಕೇಸರೀಕರಣದ ಪಾಠ ಹೇಳಲು ಹೊರಟಿರುವುದು ವೈವಿಧ್ಯತೆಯ ತೊಟ್ಟಿಲಾದ ಭಾರತಕ್ಕೆ ಮಾಡುವ ಅಪಮಾನ.

— Rahul Gandhi (@RahulGandhi)

 

ರಾಜ್ಯದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಎಲ್ಲರೂ ಒಂದಾಗಿ ಅದನ್ನ ಮೆಟ್ಟಿನಿಲ್ಲುತ್ತಾರೆ ಎನ್ನುವುದನ್ನ ಕನ್ನಡಿಗರು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ.

ಕರ್ನಾಟಕದ ಬಹುತ್ವಕ್ಕೆ ಮಾರಕವಾದ ಪಠ್ಯವನ್ನ ಮಕ್ಕಳ ಮೇಲೆ ಹೇರಲು ಕಾಂಗ್ರೆಸ್ ಬಿಡುವುದಿಲ್ಲ.

ಕನ್ನಡದ ನಾಡು, ನುಡಿ ಮತ್ತು‌ ಸಾಹಿತಿಗಳ ರಕ್ಷಣೆಗೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿದೆ.

— Rahul Gandhi (@RahulGandhi)


ಚಕ್ರತೀರ್ಥ ಬಂಧನದವರೆಗೆ ಹೋರಾಟ: ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿರುವ ರೋಹಿತ್‌ ಚಕ್ರತೀರ್ಥ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಜತೆಗೆ ಪರಿಷ್ಕೃತ ಪಠ್ಯ ಜಾರಿ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಒಕ್ಕಲಿಗ ಸಂಘ ಮತ್ತು ವಿವಿಧ ಪ್ರಗತಿಪರ ಸಂಘಟನೆಗಳು ತಿಳಿಸಿವೆ. ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಹಿನ್ನೆಲೆ ಮಾತನಾಡಿದ ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಡಾ.ಟಿ.ಎಚ್‌.ಆಂಜನಪ್ಪ, ‘ರಾಜ್ಯ ಸರ್ಕಾರವು ಪಠ್ಯಪುಸ್ತಕ ಪರಿಷ್ಕರಣೆ ಮುಗಿದ ಹಿನ್ನೆಲೆ ಆ ಸಮಿತಿಯನ್ನು ವಿಸರ್ಜನೆ ಮಾಡಿದೆ. ಆದರೆ, ಕುವೆಂಪು ಅವಮಾನ ಮಾಡಿದ ರೋಹಿತ್‌ ಚಕ್ರತೀರ್ಥ ವಿರುದ್ಧ ಯಾವುದೇ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿಲ್ಲ. 

ಪಠ್ಯದಲ್ಲಿ ಬಸವಣ್ಣನವರಿಗೆ ಅಪಮಾನ ಮಾಡಿದ ವಿಚಾರದ ಬಗ್ಗೆ ಸಿಎಂ ಗಂಭೀರವಾಗಿ ಪರಿಗಣಿಸಬೇಕು: ಜಗದೀಶ್ ಶೆಟ್ಟರ್!

ಆತನನ್ನು ಬಂಧಿಸಿ, ಕಾನೂನು ಕ್ರಮ ಜಾರಿಗೊಳಿಸಬೇಕು. ಅಲ್ಲದೆ, ರೋಹಿತ್‌ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಠ್ಯವು ಬ್ರಾಹ್ಮಣೀಕರಣವಾಗಿದ್ದು, ಅವುಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಅಲ್ಲಿಯವರೆಗೂ ಒಕ್ಕಲಿಗರು, ಪ್ರಗತಿಪರರ ಹೋರಾಟ ಮುಂದುವರೆಯಲಿದೆ’ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಒಕ್ಕಲಿಗರ ಒಕ್ಕೂಟದ ಅಧ್ಯಕ್ಷ ಸಿ.ವಿ.ದೇವರಾಜ್‌ ಮಾತನಾಡಿ, ‘ಸರ್ಕಾರವು ರೋಹಿತ್‌ ಚಕ್ರತೀರ್ಥ ಪರಿಷ್ಕರಿಸುವ ಪಠ್ಯವನ್ನು ಬಳಸಲು ಮುಂದಾಗಿದೆ. ಜತೆಗೆ ಚಕ್ರತೀರ್ಥ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಸರ್ಕಾರದ ನಡೆಯು ಕುವೆಂಪು ಮತ್ತು ಒಕ್ಕಲಿಗ ಸಮುದಾಯಕ್ಕೆ ನೋವು ಉಂಟುಮಾಡುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

click me!