MBBS Exmas ಸಚಿವ ಸುಧಾಕರ್ ಪತ್ರಕ್ಕೆ ಡೋಂಟ್ ಕೇರ್, ನಿಗದಿಯಂತೆ ರಾಜೀವ್ ಗಾಂಧಿ ಆರೋಗ್ಯ ವಿವಿ ಪರೀಕ್ಷೆ!

By Suvarna News  |  First Published Feb 2, 2022, 4:02 PM IST

*ನಿಗದಿಯಂತೆ ರಾಜೀವ್ ಗಾಂಧಿ ಆರೋಗ್ಯ ವಿವಿ ಪರೀಕ್ಷೆ
* ಆರೋಗ್ಯ ಸಚಿವ  ಸುಧಾಕರ್ ಪತ್ರಕ್ಕೆ ಡೋಂಟ್ ಕೇರ್
* ಎಂಬಿಬಿಎಸ್ ಅಂತಿಮ ವಿದ್ಯಾರ್ಥಿಗಳ ಕೋರಿಕೆ ದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವಂತೆ ಪತ್ರ ಬರೆದಿದ್ದ ಸುಧಾಕರ್


ಬೆಂಗಳೂರು, (ಫೆ.02): ಎಂಬಿಬಿಎಸ್ ಪರೀಕ್ಷೆ (MBBS Exams) ದಿನಾಂಕ ಮುಂದೂಡುವಂತೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr K Sudhkar) ಪತ್ರ ಬರೆದಿದ್ದಾರೆ. ಆದರೆ ಪತ್ರಕ್ಕೆ ಕ್ಯಾರೆ ಎನ್ನದ ರಾಜೀವ್​ ಗಾಂಧಿ ವಿಶ್ವವಿದ್ಯಾನಿಲಯ ನಿಗದಿಯಂತೆಯೇ ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

ಇದೇ ಫೆ.22ರಿಂದ ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಆದರೆ, ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಇನ್ನೂ ಕಾಲಾವಕಾಶ ಬೇಕು ಎಂದು ಕೇಳಿಕೊಂಡಿರುವುದರಿಂದ ಸದ್ಯ ಪ್ರಕಟಿಸಿರುವ ವೇಳಾಪಟ್ಟಿಯನ್ನು ಮುಂದೂಡಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಕಾಲಾವಕಾಶ ಒದಗಿಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ9(Rajiv Gandhi University of Health Sciences) ) ಕುಲಪತಿಗೆ ಪತ್ರ ಬರೆದಿದ್ದಾರೆ.

Tap to resize

Latest Videos

ಸಿಇಟಿ, ನೀಟ್, ಜೆಇಇ ಅರ್ಜಿ ತುಂಬುವ ಬಗ್ಗೆ ಸರಕಾರದಿಂದ ವಿಶೇಷ ತರಬೇತಿ

ಆದ್ರೆ, ರಾಜೀವ್ ಗಾಂಧಿ ಆರೋಗ್ಯ ವಿವಿ(Rajiv Gandhi University ) ನಿದಿಯಂತೆ  ಫೆಬ್ರವರಿ 22ರಿಂದ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಈಗಾಗಲೇ ಎನ್​ಎಮ್​ಸಿ ಅಡ್ವೈಸರಿ ಆಧಾರದಂತೆ ನೀಟ್ ಪಿಜಿ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ, ರಾಜೀವ್ ಗಾಂಧಿ ವಿವಿ ಕಾನ್ವಕೇಷನ್ ದಿನಾಂಕ ಹಾಗೂ ಎಂಬಿಬಿಎಸ್​ ಪರೀಕ್ಷೆಯ ದಿನಾಂಕಗಳೆಲ್ಲವೂ ನಿಗದಿಯಾಗಿದೆ. ಇದನ್ನು ಎಲ್ಲ ಕಾಲೇಜುಗಳ ಪ್ರಾಂಶುಪಾಲರ ಸಲಹೆ ಪಡೆದು ನಿಗದಿಗೊಳಿಸಲಾಗಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿವಿ ಸುತ್ತೋಲೆ ಹೊರಡಿಸಿದೆ.

ಪ್ರತಿ ವಿಷಯದ ಎಂಬಿಬಿಎಸ್​ ಪರೀಕ್ಷೆಗೆ 2 ದಿನದ ಅಂತರವಿದೆ. ಇದೇ ಮೊದಲ ಬಾರಿಗೆ ಅಂತರ ಕೊಟ್ಟು ಪರೀಕ್ಷೆ ಮಾಡಲಾಗುತ್ತಿದೆ. ಇತರೆ ರಾಜ್ಯಗಳಲ್ಲಿ ನಿಗದಿಯಂತೆ ಪರೀಕ್ಷೆ ನಡೆಸಲಾಗುತ್ತಿದೆ. ಆದ್ದರಿಂದ ನಮ್ಮ ರಾಜ್ಯದಲ್ಲೂ ನಿಗದಿಯಂತೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಫೆ.22 ರಿಂದ ಪರೀಕ್ಷೆ ನಡೆಸಲು ರಾಜೀವ್ ರಾಜೀವ್ ಗಾಂಧಿ ವಿವಿ ತೀರ್ಮಾನ ಮಾಡಿದೆ.

ವೈದ್ಯಕೀಯ ಕೋರ್ಸ್ ಗಳಿಗೆ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ
2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ `ನೀಟ್' (NEET) ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದ್ದು, ಶನಿವಾರ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ' ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examinations Authority) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಪ್ರಾಧಿಕಾರವು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, `ಫೆ.4ರಂದು ಈ ಮೂರೂ ಕೋರ್ಸುಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗುವುದು. ಇದಕ್ಕೂ ಮೊದಲು ಫೆ.1ರ ಬೆಳಗ್ಗೆ 10 ಗಂಟೆಯ ವರೆಗೆ ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಫೆ.1ರಿಂದ 3ರ ಬೆಳಗ್ಗೆ 10 ಗಂಟೆಯ ವರೆಗೆ ತಮ್ಮ ಐಚ್ಛಿಕ ವಿಷಯಗಳಲ್ಲಿ ಅಗತ್ಯವೆನಿಸಿದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ' ಎಂದು ಹೇಳಿದೆ.

ಫೆ.4 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕಟವಾಗಲಿದೆ. ಬಳಿಕ ಚಾಯ್ಸ್-1 ಮತ್ತು ಚಾಯ್ಸ್-2 ಸ್ತರದ ವಿದ್ಯಾರ್ಥಿಗಳು ನಿಗದಿತ ಶುಲ್ಕ ತುಂಬಿ, ಪ್ರವೇಶ ದಾಖಲಾತಿಯನ್ನು ಡೌನ್-ಲೋಡ್ ಮಾಡಿಕೊಳ್ಳಲು ಫೆ.4ರ ಮಧ್ಯಾಹ್ನ 2 ಗಂಟೆಯಿಂದ ಫೆ.7ರ ಮಧ್ಯಾಹ್ನ 1 ಗಂಟೆಯ ವರೆಗೆ ಅವಕಾಶವಿರುತ್ತದೆ. ನಂತರ, ವಿದ್ಯಾರ್ಥಿಗಳು ಒಂದು ಸೆಟ್ ದೃಢೀಕೃತ ಪ್ರಮಾಣಪತ್ರಗಳೊಂದಿಗೆ ಮೂಲ ದಾಖಲೆಗಳನ್ನು ಫೆ.5ರಿಂದ 7ರ ಒಳಗೆ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪರಿಶೀಲನೆಗೆ ಸಲ್ಲಿಸಬೇಕು ಎಂದು ಪ್ರಕಟಣೆ ವಿವರಿಸಿದೆ.

click me!