ಫೆ.25 ಮತ್ತು 26 ರಂದು KPSC Exam, ಧಾರವಾಡ-ಹುಬ್ಬಳ್ಳಿಯಲ್ಲಿ 51 ಪರೀಕ್ಷಾ ಕೇಂದ್ರಗಳು

By Suvarna News  |  First Published Feb 23, 2023, 7:15 PM IST

ಫೆ.25 ಹಾಗೂ 26 ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಧಾರವಾಡದ 17 ಹಾಗೂ ಹುಬ್ಬಳ್ಳಿಯ 34 ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಗ್ರೇಡ್-1 ಹಾಗೂ ವಿವಿಧ ಗ್ರೂಪ್ ಎ, ಬಿ, ಹಾಗೂ ಸಿ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದೆ.


ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್

ಧಾರವಾಡ (ಫೆ.23): ಫೆ.25 ಹಾಗೂ 26 ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಧಾರವಾಡದ 17 ಹಾಗೂ ಹುಬ್ಬಳ್ಳಿಯ 34 ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಗ್ರೇಡ್-1 ಹಾಗೂ ವಿವಿಧ ಗ್ರೂಪ್ ಎ, ಬಿ, ಹಾಗೂ ಸಿ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಈ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಜರುಗಿತು. ಜಿಲ್ಲೆಯ ಒಟ್ಟು 13,082 ಅಭ್ಯರ್ಥಿಗಳು ಪರೀಕ್ಷೆಗೆ ಭಾಗವಹಿಸಲಿದ್ದಾರೆ ಪರೀಕ್ಷೆಯನ್ನು ಸುಗಮವಾಗಿ ಯಾವುದೇ ಲೋಪವಾಗದಂತೆ  ಜರುಗಿಸಲು 17 ವೀಕ್ಷಕರನ್ನು 17 ಮಾರ್ಗಾಧಿಕಾರಿಗಳನ್ನು 51 ಲೋಕಲ್ ತಪಾಸಣಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

Tap to resize

Latest Videos

2nd PUC Practical Exam: ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿ

ನೇಮಕ ಮಾಡಲಾದ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ಸಭೆಯಲ್ಲಿ ನೀಡಲಾಯಿತುಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಅಧಿಕಾರಿಗಳು ತಮ್ಮ ವರದಿಯನ್ನು ಸಲ್ಲಿಸತಕ್ಕದೆಂದು ಸಭೆಯಲ್ಲಿ ತಿಳಿಸಲಾಯಿತು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳಿಗೆ ಪರೀಕ್ಷೆ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಪ್ರತಿ ಹಂತದಲ್ಲಿ  ವಿಡಿಯೋ ದೃಶ್ಯ ಮಾಡಲು 3 ಶಿಫ್ಟ್‍ನಲ್ಲಿ ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಪೊಲೀಸ್ ಆಯುಕ್ತರಿಂದ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು.

1ನೇ ಕ್ಲಾಸ್‌ ಪ್ರವೇಶಕ್ಕೆ 6 ವರ್ಷ: ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ

ಹತ್ತಿರದ ಝರಾಕ್ಸ್ ಹಾಗೂ ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರಗಳ ಒಳಗೆ, ಹೊರಗೆ ಸೂಕ್ತ ಪೋಲಿಸ್ ಸಿಬ್ಬಂದಿಗಳನ್ನು ನೇಮಿಸಲಾಗುವುದೆಂದು ಸಭೆಗೆ   ತಿಳಿಸಲಾಯಿತು. ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸರಬರಾಜಿಗೆ ಹೆಸ್ಕಾಂ ಕ್ರಮ ವಹಿಸಲು ಸೂಚಿಸಲಾಯಿತು. ಸಭೆಯಲ್ಲಿ ಉಪವಿಭಾಗಾಧಿಕಾರಿ ಅಶೋಕ್ ತೇಲಿ, ಹುಡಾ ಆಯುಕ್ತರಾದ  ಸಂತೋಷ ಬಿರಾದಾರ, ಡಿಡಿಪಿಐ ಎನ್.ಎನ್. ಕೆಳದಿಮಠ, ಡಿಡಿಪಿಯು ಕೃಷ್ಣ ನಾಯಕ, ಜಿಲ್ಲಾ ಶಿಕ್ಷಣಾಧಿಕಾರಿ ಎಸ್.ಎಸ್. ಹುಡೇದಮನಿ, ಡೈಯಟ್ ಪ್ರಿನ್ಸಿಪಾಲರು ಶ್ರೀಮತಿ ಎಂ.ಕೆ. ಸಾಹುಕಾರ ಎಲ್ಲ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪರೀಕ್ಷಾ ವೀಕ್ಷಕರು, ಅಧಿಕಾರಿಗಳು ಉಪಸ್ಥಿತರಿದ್ದರು.

click me!