ಪದೇ ಪದೆ ಪಠ್ಯ ಬದಲಾವಣೆ ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುತ್ತಿರುವದನ್ನು ರಾಜ್ಯ ಸರ್ಕಾರ ಮಾಡುತ್ತಿರುವುದರಿಂದ ಕನ್ನಡ ಹಾಗೂ ಸರ್ಕಾರಿ ಶಾಲೆಗಳನ್ನು ವ್ಯವಸ್ಥಿತವಾಗಿ ಮುಚ್ಚುವ ಪ್ರಯತ್ನ ಮಾಡುತ್ತಿದೆ ಎಂದು ಪಠ್ಯ ಪುಸ್ತಕ ಪುನರ್ ರಚನಾ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅಸಮಾಧಾನ ವ್ಯಕ್ತಪಡಿಸಿದರು.
ಉತ್ತರ ಕನ್ನಡ (ಸೆ.29): ಪದೇ ಪದೆ ಪಠ್ಯ ಬದಲಾವಣೆ ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುತ್ತಿರುವದನ್ನು ರಾಜ್ಯ ಸರ್ಕಾರ ಮಾಡುತ್ತಿರುವುದರಿಂದ ಕನ್ನಡ ಹಾಗೂ ಸರ್ಕಾರಿ ಶಾಲೆಗಳನ್ನು ವ್ಯವಸ್ಥಿತವಾಗಿ ಮುಚ್ಚುವ ಪ್ರಯತ್ನ ಮಾಡುತ್ತಿದೆ ಎಂದು ಪಠ್ಯ ಪುಸ್ತಕ ಪುನರ್ ರಚನಾ ಸಮಿತಿಯ ಮಾಜಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅಸಮಾಧಾನ ವ್ಯಕ್ತಪಡಿಸಿದರು.
ಒಂದರಿಂದ ಹತ್ತನೇ ತರಗತಿ ಪಠ್ಯ ಪುಸ್ತಕ ಮರು ಪರಿಷ್ಕರಣೆ ಹಿನ್ನಲೆಯಲ್ಲಿ ಬರಗೂರು ರಾಮಚಂದ್ರಪ್ಪನವರ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುವಾಗ ಅಲ್ಲಿ ಏನು ಸಮಸ್ಯೆ ಇತ್ತು ಎಂಬುದನ್ನು ನಾವು ಸಾರ್ವಜನಿಕವಾಗಿ ಹೇಳಿದ್ದೇವೆ. ನಾವು ಮಾಡಿರುವ ಪಠ್ಯ ಪರಿಷ್ಕರಣೆಯಲ್ಲಿ ಏನು ತಪ್ಪಿದೆ ಎಂದು ಸರ್ಕಾರ, ವಿಷಯ ತಜ್ಞರು ಹಾಗೂ ಈಗಿನ ಸಮಿತಿಯ ಅಧ್ಯಕ್ಷರು ಬಹಿರಂಗ ಪಡಿಸಿಲ್ಲ. ಅಜೆಂಡಾ ಇಟ್ಟುಕೊಂಡು ಪರಿಷ್ಕರಣಾ ಸಮಿತಿ ರಚನೆ ಮಾಡಿದ್ದಾರೆ. ಇದು ಸಂಪೂರ್ಣ ಅಸಂವಿಧಾನಿಕವಾಗಿದ್ದು, 15 ,16 ಪಾಠಗಳನ್ನು ಕೇವಲ ಕ್ಯಾಬಿನೇಟ್ ಮೀಟಿಂಗ್ ಮಾಡಿ ಸುತ್ತೋಲೆ ಹೊರಡಿಸಿದ್ದಾರೆ.
undefined
ಲೋಕಸಭೆಗೆ ಪತ್ನಿ ಡಾ.ಪ್ರಭಾ ಸ್ಪರ್ಧೆ ಚರ್ಚೆ ಆಗಿಲ್ಲ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ಈ ರೀತಿ ಮಾಡಲು ಶಿಕ್ಷಣ ಇಲಾಖೆಯಲ್ಲಿ ಯಾವುದೇ ಅವಕಾಶವಿಲ್ಲ. ಹಿಂದಿನ ಪಠ್ಯಪುಸ್ತಕ ಸಮಿತಿ ಅಧ್ಯಕ್ಷನಾದ ನನ್ನನ್ನು ಏಕೆ ಪರಿಷ್ಕರಣೆ ಮಾಡಿದ್ದೀರ ಎಂದು ಕೂಡಾ ಕೇಳಿಲ್ಲ. ಏಕಪಕ್ಷೀಯವಾದ ತೀರ್ಮಾನ, ಸರ್ವಾಧಿಕಾರಿ ಮನಸ್ಥಿತಿಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಸರ್ಕಾರ ಕನ್ನಡ ಶಾಲೆಯನ್ನು ಕೊಲ್ಲುವ ಕೆಲಸ ಮಾಡುತ್ತಿದೆ. ಪ್ರತೀ ನಿತ್ಯದ ಬದಲಾವಣೆ, NEP ಜಾರಿ ಮಾಡುವುದಿಲ್ಲ ಎಂಬ ಹೇಳಿಜೆ ಪೋಷಕರಲ್ಲಿ ಗೊಂದಲ ತರುತ್ತಿದೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಸಂಖ್ಯೆ ಕಡಿಮೆಯಾಗುತ್ತಿದೆ.ನೇರವಾಗಿ ಕನ್ನಡವನ್ನು ಕೊಲ್ಲುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ರೋಹಿತ್ ಚಕ್ರತೀರ್ಥ ಆರೋಪ ಮಾಡಿದರು.
ಪಠ್ಯಗಳ ಪುನರ್ ಪರಿಶೀಲನೆಗೆ 37 ತಜ್ಞರ ಸಮಿತಿ ರಚನೆ: ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್ ಚಕ್ರತೀರ್ಥ ಸಮಿತಿಯಿಂದ ಮಾಡಲಾಗಿದ್ದ ವಿವಿಧ ತರಗತಿ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ಪ್ರಸಕ್ತ ಸಾಲಿನ ಮಟ್ಟಿಗೆ ಕೈಬಿಟ್ಟು ತಿದ್ದೋಲೆ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರ ಇದೀಗ ಆ ಎಲ್ಲಾ ಪಠ್ಯಪುಸ್ತಕಗಳನ್ನು ರಾಷ್ಟ್ರೀಯ ಪಠ್ಯಚೌಕಟ್ಟಿನಡಿ ಸಮಗ್ರವಾಗಿ ಪುನರ್ ಪರಿಷ್ಕರಿಸಲು 37 ವಿಷಯ ತಜ್ಞರನ್ನು ಒಳಗೊಂಡ ಸಮಿತಿ ರಚಿಸಿ ಆದೇಶಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ 1ರಿಂದ 10ನೇ ತರಗತಿ ವರೆಗಿನ ಕನ್ನಡ ಪ್ರಥಮ ಹಾಗೂ ದ್ವೀತಿಯ ಭಾಷೆ ಪಠ್ಯಪುಸ್ತಕಗಳು, 9 ಮತ್ತು 10ನೇ ತರಗತಿಯ ಕನ್ನಡ ತೃತೀಯ ಭಾಷಾ ಪಠ್ಯಪುಸ್ತಕಗಳು ಮತ್ತು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿತ್ತು.
ಬಡವರಿಗೆ ಸಾಮಾಜಿಕ ನ್ಯಾಯ ನೀಡಿದ ಪಕ್ಷ ಕಾಂಗ್ರೆಸ್: ಮಾಜಿ ಸಚಿವ ರಮಾನಾಥ ರೈ
ಈ ವೇಳೆ, ಕೆಲ ಪಠ್ಯಗಳಿಗೆ ಕೊಕ್ಕೆ ಹಾಕಿ, ಕೆಲ ಆರೆಸ್ಸೆಸ್ ನಾಯಕರು, ಬಲಪಂತೀಯರ ಬಹರಗಳನ್ನು ಪಠ್ಯದಲ್ಲಿ ಸೇರಿಸಿದ್ದು ತೀವ್ರ ವಿವಾದಕ್ಕೀಡಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಈ ಎಲ್ಲ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ಕೈಬಿಟ್ಟು ಈ ಪರಿಷ್ಕರಣೆಗು ಮುನ್ನ ಇದ್ದ ಪಠ್ಯಗಳನ್ನೇ 2023-24ನೇ ಸಾಲಿಗೆ ಮುಂದುವರೆಸಿ ಶಾಲೆಗಳಿಗೆ ತಿದ್ದೋಲೆ ನೀಡಿದೆ. ಅಲ್ಲದೆ, ಮುಂದಿನ ಶೈಕ್ಷಣಿಕ ಸಾಲಿನ ವೇಳೆಗೆ ಈ ಪಠ್ಯಪುಸ್ತಕಗಳನ್ನು ನಿಯಮಾನುಸಾರ ಸಮಿತಿ ರಚಿಸಿ ಪುನರ್ ಪರಿಷ್ಕರಿಸುವುದಾಗಿ ಸರ್ಕಾರ ತಿಳಿಸಿತ್ತು. ಅದರಂತೆ ಇದೀಗ ಈ ಎಲ್ಲ ತರಗತಿ ಪಠ್ಯಪುಸ್ತಕಗಳನ್ನು ರಾಷ್ಟ್ರೀಯ ಪಠ್ಯ ಚೌಕಟ್ಟಿನ ಆಧಾರದಲ್ಲಿ ಪರಿಷ್ಕರಿಸಲು ಸಮಿತಿ ರಚಿಸಲಾಗಿದೆ.