ರಾಜ್ಯದಲ್ಲಿ ಶಾಲೆ ಪ್ರಾರಂಭಿಸುವಂತೆ ಶಿಕ್ಷಣ ಸಚಿವರಿಗೆ ಬಂತು ಮನವಿ..!

By Suvarna NewsFirst Published Feb 1, 2021, 7:56 PM IST
Highlights

ರಾಜ್ಯದಲ್ಲಿ ಕೋವಿಡ್ 19 ಸೋಂಕು ಅಬ್ಬರ ಕಡಿಮೆಯಾಗುತ್ತಿದ್ದು, ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವಂತೆ ಸಚಿವರಿಗೆ ಮನವಿ ಹೋಗಿದೆ.

ಬೆಂಗಳೂರು, (ಫೆ.01) : ರಾಜ್ಯದಲ್ಲಿ ಕೋವಿಡ್ 19 ಸೋಂಕು ಅಬ್ಬರ ಕಡಿಮೆಯಾಗುತ್ತಿದ್ದು, ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಮನವಿ ಮಾಡಿದೆ.

ಈಗಾಗಲೇ ರಾಜ್ಯದಲ್ಲಿ ಕೋವಿಡ್ ಅಬ್ಬರ ಕಡಿಮೆಯಾಗುತ್ತಿದ್ದು, ಬೇರೆ ರಾಜ್ಯದಲ್ಲಿ 1 ರಿಂದ 5 ನೇ ತರಗತಿ ಶಾಲೆಗಳು ಪ್ರಾರಂಭವಾಗಿದೆ. ರಾಜ್ಯಾದ್ಯಂತ ಪ್ರಾಥಮಿಕ ತರಗತಿಗಳಲ್ಲಿ ಸುಮಾರು 45 ಲಕ್ಷ ಮಕ್ಕಳು ಓದುತ್ತಿದ್ದಾರೆ. ಆದರೆ ಶಾಲೆ ಪ್ರಾರಂಭವಾಗದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದೆ.

'1ರಿಂದ 5ನೇ ತರಗತಿಗೆ ಶಾಲೆ : ಕೋವಿಡ್ ಮಾರ್ಗಸೂಚಿ ಹಿನ್ನೆಲೆ ಎಚ್ಚರಿಕೆ..?

ಬಾಲ ಕಾರ್ಮಿಕ, ಬಾಲ್ಯ ವಿವಾಹ ಸೇರಿದಂತೆ ಶಿಕ್ಷಣದಿಂದ ದೂರ ಉಳಿಯುತ್ತಿದ್ದಾರೆ. ಈ ಕೂಡಲೇ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿರುವ ಮಾರ್ಗಸೂಚಿ ಪ್ರಕಾರ ಶಾಲೆ ಪುನಾರಂಭಿಸುವಂತೆ ಮನವಿ

ಕೋವಿಡ್ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಶಾಲೆ ಪುನಾರಂಭಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಮನವಿ ಸಲ್ಲಿಸಿದೆ. ಆದ್ರೆ, ಸರ್ಕಾರ ಹಾಗೂ ಶಿಕ್ಷಣ ಸಚಿವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎನ್ನುವುನ್ನು ಕಾದುನೋಡಬೇಕಿದೆ.

click me!